ಇಂದಿನಿಂದ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ

Written by Ramlinganna

Updated on:

Four days Heavy rain ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಹೌದು, ಬೆಂಗಳೂರು, ಮೈಸೂರು, ತುಮುಕೂರು ಜಿಲ್ಲೆ ಸೇರಿದಂತೆ ವಿವಿಧೆಡೆ ಶುಕ್ರವಾರ ಉತ್ತಮ ಮಳೆಯಾಗಿದೆ. ಇದೇ ರೀತಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದರಿಂದಾಗಿ ಈ  ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ರಾಯಚೂರು, ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿಯೂ ಸಹ ಸೆಪ್ಟೆಂಬರ್ 3  ಹಾಗೂ ಸೆಪ್ಟೆಂಬರ್ 4ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡವಲಾಗಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನು ಇಲಾಖೆ ತಿಳಿಸಿದೆ.

Four days Heavy rain ಮೈಸೂರು ಜಿಲ್ಲೆಯಲ್ಲಿ ತುಂತುರು ಮಳೆ ಸಾಧ್ಯತೆ

ಮೈಸೂರು ಜಿಲ್ಲೆಯಲ್ಲಿ ಸೆಪ್ಟೆಂಬರ್ 2 ರಿಂದ 6 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆ ಬರುವ ಸಂಭವವಿದೆ. ಗರಿಷ್ಠ ಉಷ್ಣಾಂಶ 31 ರಿಂದ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಬೆಳಗಿನ ಗಾಳಿಯ ತೇವಾಂಶಶೇ. 88 ರಿಂದ 89 ರವರೆಗೆ ಹಾಗೂ ಮಧ್ಯಾಹ್ನ ತೇವಾಂಶ ಶೇ. 87 ರಿಂದ 88 ರವರೆಗೆ ದಾಖಲಾಗಿದೆ. ದೀರ್ಘಾವಧಿ ಮುನ್ಸೂಚನೆ ಪ್ರಕಾರ ಸೆಪ್ಟೆಂಬರ್ 8 ರಿಂದ 14 ರವರೆಗೆ ಸರಾಸರಿಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Four days Heavy rain ಬೆಂಗಳೂರಿನಲ್ಲಿ ಭಾರಿ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ತಗ್ಗುಪ್ರದೇಶದ ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಇದನ್ನೂ ಓದಿ ನಿಮ್ಮ ಜಮೀನಿನ ಒರಿಜಿನಲ್ ಸರ್ವೆ ಟಿಪ್ಪಣಿ ಪುಸ್ತಕ ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲೇ ಚೆಕ್ ಮಾಡಿ

ಸುಮಾರು ಎರಡು ವಾರದ ಬಳಿಕ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆ ಭಾರಿ ಅನಾಹುತ ಸೃಷ್ಟಿಮಾಡಿದೆ.  ಸುಮಾರು ಎರಡು ಅಡಿಯಷ್ಟು ನೀರು ಮನೆ ಒಳಗೆ, ವಾಹನ ಪಾರ್ಕಿಂಗ್ ಸ್ಥಳದಲ್ಲಿ ನಿಂತುಕೊಂಡಿದೆ. ಮಳೆ ಪ್ರಮಾಣ ಕಡಿಮೆಯಾದ ಬಳಿಕ ನೀರು ಹರಿದುಹೋಗಿದೆ.

ತುಮಕೂರು ಜಿಲ್ಲೆಯ ತುರುವೆಕೆಯಲ್ಲಿ ಮಳೆ

ತುಮಕೂರು ಜಿಲ್ಲೆಯ ತುರುವೆಕೆರೆ  ತಾಲೂಕಿನಲ್ಲಿಯೂ ಮಳೆಯಾಗಿದೆ. ವರುಣನ ಕೃಪೆಯಿಂದಾಗಿ ತಾಲೂಕಿನಾದ್ಯಂತ ಗುರುವಾರ ತಡರಾತ್ರಿ ಸುರಿದ ಮಳೆಯಿಂದ ಮುಂಗಾರು ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಜುಲೈ ಮಧ್ಯ ಭಾಗದಿಂದ ಮುಂಗಾರು ಮಳೆ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಬಿದ್ದಿತ್ತು. ಹಾಗಾಗಿ ಕೆಲವು ಆಯ್ದ ಕಡೆಗಳಲ್ಲಿ ರೈತರು ಬಿತ್ತನೆ ಮಾಡಿದ್ದರು. ಮಳೆ ಬೀಳದ ಕಾರಣ ಬಿತ್ತಿದ್ದ ಮುಂಗಾರು ಬೆಳೆಗಳು ಒಣಗತೊಡಗಿದವು. ಒಣಗಿದ ಬೆಳೆಗಳಿಗೆ ಈಗ ಜೀವ ತುಂಬಿದಂತಾಗಿದೆ.

ನಿಮ್ಮೂರಿನಲ್ಲಾಗುವ ಮಳೆಯ ಮಾಹಿತಿ ಬೇಕೆ? ಈ ನಂಬರಿಗೆ ಕರೆಮಾಡಿ

ನಿಮ್ಮ ಊರಿನ ಸುತ್ತ ಮುತ್ತ ಯಾವಾಗ ಮಳೆಯಾಗುತ್ತದೆ ಎಂಬ ಮಾಹಿತಿ ಕೇಳಲು ನೀವು ಎಲ್ಲಿಯೂ ಹೋಗಬೇಕಿಲ್ಲ. ಈಗ ಮನೆಯಲ್ಲಿಯೇ ಕುಳಿತು ಮಾಹಿತಿ ಪಡೆಯಬಹುದು. ಹೌದು, ವರುಣಮಿತ್ರ  ಸಹಾಯವಾಣಿ ನಂಬರ್

92433 45433 ಗೆ ಕರೆ ಮಾಡಿದರೆ ಸಾಕು,

ನೀವು ನಿಮ್ಮೂರಿನಲ್ಲಿ ಯಾವಾಗ ಮಳೆಯಾಗುತ್ತದೆ ಎಂಬ ಮಾಹಿತಿಯನ್ನು ಕೇವಲ ಒಂದೇ ನಿಮಿಷದಲ್ಲಿ ಪಡೆಯಬಹುದು.  ಈ ಉಚಿತ ಸಹಾಯವಾಣಿ ನಂಬರ್ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ.

Leave a Comment