ಇಂದಿನಿಂದ ಇನ್ನೂ ನಾಲ್ಕು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ- ರೆಡ್ ಅಲರ್ಟ್ ಘೋಷಣೆ

Written by Ramlinganna

Published on:

ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಭಾಗದಲ್ಲಿ ಸೋಮವಾರದಿಂದ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬಿರುಗಾಳಿ, ಗುಡುಗು ಸಹಿತ ನಾಳೆ ಮಳೆಯ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಜುಲೈ 25 ರಂದು 204.5 ಮಿ.ಮೀ ಗಿಂತಲೂ ಹೆಚ್ಚು ಅತೀ ಭಾರಿ ಮಳೆಯಾಗುವ ಸಾಧ್ಯತೆಯಿರವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಮೂರು ಜಿಲ್ಲೆಗಳಲ್ಲಿ ಬುಧವಾರ ಹಾಗೂ ಗುರುವಾರವೂ ಭಾರಿ ಮಳೆ ಮುಂದುವರೆಯಲಿರುವ ಕಾರಣ ಆರೇಂಜ್ ಅಲರ್ಟ್ ನೀಡಲಾಗಿದೆ. ಜುಲೈ 28 ಹಾಗೂ 29 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಶಿವಮೊಗ್ಗ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಂಗಳವಾರ ಆರೇಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೆ ಹಾಸನ, ಕೊಡಗು ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 26, ಜುಲೈ 27 ಹಾಗೂ ಜುಲೈ 28 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ :  ಜುಲೈ 27 ರಂದು ಪಿಎಂ ಕಿಸಾನ್ 14ನೇ ಕಂತಿನ ಹಣ ರೈತರ ಖಾತೆಗೆ ಜಮೆ ಯಾರ್ಯಾರಿಗೆ ಜಮೆಯಾಗಲಿದೆ ಚೆಕ್ ಮಾಡಿ

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಪ್ರಮಾಣ 64 ಮಿ.ಮೀ ನಿಂದ 115 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 25, ಜುಲೈ 26 ಹಾಗೂ ಜುಲೈ 27 ರವರೆಗೆ ಉತ್ತಮ ಮಳೆಯಾಗಲಿದ್ದು, ನಂತರ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜುಲೈ 25 ರಂದು ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಯಾವ ಯಾವ ಊರಿನಲ್ಲಿ ಎಷ್ಟು ಮಳೆಯಾಗಲಿದೆ? ಈ ನಂಬರಿಗೆ ಕರೆ ಮಾಡಿ

ತಮ್ಮೂರಿನಲ್ಲಿ ಯಾವಾಗ ಮಳೆಯಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿಗೆ ಕರೆ ಮಾಡಬಹುದು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಬಹುದು. ಈ ನಂಬರಿಗೆ ಕರೆ ಮಾಡಿದನಂತರ ನೀವು ನಿಮ್ಮ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿ ಮಳೆಯಾಗುತ್ತದೆ. ಗಾಳಿಯ ವೇಗ ಹಾಗೂ ದಿಕ್ಕು ಎಂಬುದರ ಮಾಹಿತಿ ಪಡೆದುಕೊಳ್ಳಬಹುದು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ – ಶಾಲಾ ಕಾಲೇಜುಗಳಿಗೆ ಜುಲೈ 25 ರಂದು ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ  ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಅಂಗನವಾಡಿಯಿಂದ ಪದವಿ ಕಾಲೇಜುಗಳವರೆಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಪ್ರವಾಸಿಗರು ನದಿ, ಸಮುದ್ರದ ತೀರಗಳಿಗೆ ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ವಿಪತ್ತು ನಿರ್ವಹಣೆಯನ್ನು ಚಾಚೂತಪ್ಪದೆ ಮಾಡಲು ಆದೇಶ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಂಗಳವಾರ ರೆಡ್ ಅಲರ್ಟ್ ಘೋಷಿಸಿರುವ ಕಾರಣ ಮಂಗಳೂರು ವಿಶ್ವವಿದ್ಯಾಲದ ನಿಗದಿಯಾಗಿದ್ದ (ಜುಲೈ 25) ಪರೀಕ್ಷೆಗಳನ್ನು ಮುಂದೂಡಲಾಗಿದೆ.25 ರಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು. ಮುಂದೂಡಿದ್ದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರು ನಿಗದಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು.

Leave a Comment