ಇಂದಿನಿಂದ ಮೂರು ದಿನ ಈ 14 ಜಿಲ್ಲೆಗಳಲ್ಲಿ ಮಳೆಯಾಗಲಿದೆ

Written by Ramlinganna

Published on:

Four district rain alert : ರಾಜ್ಯದಲ್ಲಿ ಮತ್ತೆ ಮಳೆ ಅಬ್ಹರ ಶುರುವಾಗಿದೆ. ಹೌದು, ಮುಂಗಾರು ಪೂರ್ವ ಮಳೆಯ ಅಬ್ಬರ ಕಳೆದ ಒಂದು ವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುರವಾಗಿದೆ. ಮುಂದಿನ ಮೂರು ದಿನಗಳ ಕಾಲ ಅಂದರೆ ಮಾರ್ಚ್ 30 ರಿಂದ ಏಪ್ರೀಲ್ 1 ರವರೆಗೆ ಮಳೆಯಾಗಲಿದೆ. ಯಾವ ಯಾವ  ಜಿಲ್ಲೆಗಳಲ್ಲಿ ಯೆಲ್ಲೆ ಅಲರ್ಟ್ ಘೋಷಿಸಲಾಗಿದೆ  ಎಂಬುದರ ಮಾಹಿತಿ ಇಲ್ಲಿದೆ.

ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ 14 ಜಿಲ್ಲೆಗಳಲ್ಲಿ ಭಆರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಛ್ಚರಿಕೆ ನೀಡಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಸ್ಥಳೀಯವಾಗಿ ಉಂಟಾಗಿರುವ ಪಶ್ಚಿಮ ಗಾಳಿಯ ಪ್ರಭಾವದಿಂದ ಈ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸುಮಾರು 50 ಕಿ.ಮೀ ವೇಗದಲ್ಲಿ ಬೀಸುವ ಗಾಳಿ, ಬಿರುಗಾಳಿಯೊಂದಿಗೆ ಗುಡುಗು ಮಿಂಚಿನ ಆರ್ಭಟವೂ ಇರಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Four district rain alert  ಯಾವ ದಿನ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ

ಮಾರ್ಚ್ 30 ರಿಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು,  ಹಾಸನ, ಚಿಕ್ಕಮಗಳೂರು,  ಗದಗ, ಹಾವೇರಿ, ಶಿವಮೊಗ್ಗ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಾರ್ಚ್ 31 ರಂದು ಬೆಳಗಾವಿ, ಶಿವಮೊಗ್ಗ, ಹಾವೇರಿ, ಗದಗ, ಉತ್ತರ ಕನ್ನಡ, ದಾರವಾಡ, ಮಂಡ್ಯ, ಚಾಮರಾಜಗರ, ಮೈಸೂರು, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಏಪ್ರೀಲ್ 1 ರಂದು ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಗದಗ, ಮೈಸೂರು, ಚಿಕ್ಕಮಗಳೂರು, ಮಂಡ್ಯ, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿ ಭಾಗದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಇನ್ನು ಮಲೆನಾಡು, ದಕ್ಷಿಣ ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲಿನೊಂದಿಗೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ನಿಮ್ಮ ಜಮೀನಿನ Original Pahani ಮೊಬೈಲ್ ನಲ್ಲಿ ಹೀಗೆ ಡೌನ್ಲೋಡ್ ಮಾಡಿ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment