ಇಂದಿನಿಂದ ಮತ್ತೇ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ

Written by Ramlinganna

Published on:

Four more days rain : ರಾಜ್ಯದ ವಿವಿಧೆಡೆ ಮತ್ತೆ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಉತ್ತರ ಕನ್ನಡ . ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾದರೆ,ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳ ಆಯ್ದ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶುಕ್ರವಾರ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಶುಕ್ರವಾರ ಈ ಜಿಲ್ಲೆಗಳ ಜತೆಗೆ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬೀದರ್ ಸೇರಿ ಒಟ್ಟು 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

Four more days rain ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ಸಾಮಾನ್ಯ ಮಳೆಗಿಂತ ಈ ಬಾರಿ ಹೆಚ್ಚಿನ ಮಳೆ                              

ಬೆಂಗಳೂರಿನಲ್ಲಿ ಏಪ್ರೀಲ್ 15 ರಂದು ಭಾರತೀಯ ಹವಾಮಾನ ಇಲಾಖೆ ಈ ಬಾರಿಯ ನೈಋತ್ಯ ಮಾನ್ಸೂನ್ ಮಳೆಯ ಸಾಮಾನ್ಯ ಮಳೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಎಂದು ಸೂಚಿಸಿದೆ.

ಮಳೆ ಮಾಹಿತಿ ಬೇಕೆ? ಈ ನಂಬರಿಗೆ ಕರೆ                                                                

ನಿಮ್ಮೂರಿನಲ್ಲಾಗುವ ಮಳೆಯ ಮಾಹಿತಿ ಬೇಕೆ? ವರುಣಮಿತ್ರ ಉಚಿತ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಹೌದು, 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗಾಳಿಯ ವೇಗ ಮಳೆಯ ಪ್ರಮಾಣ ಸೇರಿದಂತೆ ಹವಾಮಾನ ವರದಿಯ ಇನ್ನಿತರ ಮಾಹಿತಿ ಸಿಗಲಿದೆ.

ಇದನ್ನೂ ಓದಿ ಮಳೆಗೆ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ ಹೆಸರು ಚೆಕ್ ಮಾಡಿ

ನಿಮ್ಮೂರಿನ ಸುತ್ತಮುತ್ತಲಿನ ವಾತಾವರಣ ಹೇಗಿರಲಿದೆ? ಮಳೆಯಾಗುತ್ತೋ ಇಲ್ಲವೋ ಯಾವಾಗ ಮಳೆಯಾಗುತ್ತದೆ ಎಂಬ ಮಾಹಿತಿ ಸಹ ನಿಮಗೆ ಸಿಗುತ್ತದೆ.ಇದಕ್ಕಾಗಿ ನೀವು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಮನೆಯಲ್ಲಿಯೇ ಕುಳಿತು ಕೇವಲ ಒಂದು ಕರೆ ಮಾಡಿ ಮಾಹಿತಿಯನ್ನು ಅತೀ ಸುಲಭವಾಗಿ ಪಡೆಯಬಹುದು.

Leave a Comment