ಬೆಳಕು ಯೋಜನೆಯಡಿಯಲ್ಲಿ ಉಚಿತ ವಿದ್ಯುತ್ ಸಂಪರ್ಕ- ಇಲ್ಲಿದೆ ಮಾಹಿತಿ

Written by By: janajagran

Updated on:

ರಾಜ್ಯ ಸರ್ಕಾರ ನೂತನವಾಗಿ ಬಿಡುಗಡೆ ಮಾಡಿರುವ ಬೆಳಕು ಯೋಜನೆಯಡಿಯಲ್ಲಿ ವಿದ್ಯುತ್ ರಹಿತ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ರಾಜ್ಯಾದ್ಯಂತ ಅರ್ಜಿ ಕರೆಯಲಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿದ ಬಡವರು ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಬಹುದು. ನಾಗರಿಕರು ತಮ್ಮ ಹತ್ತಿರದ ವಿದ್ಯುತ್ ಇಲಾಖೆಗೆ ಅರ್ಜಿ ಸಲ್ಲಿಸಬೇಕು. ಆಗ ಸಂಬಂಧಿಸಿದ ಅಧಿಕಾರಿಗಳು ನೇರವಾಗಿ ಮನೆಗೆ ಬಂದು ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ನೀಡಲಿದ್ದಾರೆ.

ರಾಜ್ಯದಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ ಹಾಗೂ ಸೌಭಾಗ್ಯ ಯೋಜನೆಯು 2020ಕ್ಕೆ ಮುಕ್ತಾಯಗೊಂಡಿದ್ದರಿಂದ ರಾಜ್ಯ ಸರ್ಕಾರವು ಬೆಳಕು ಯೋಜನೆಯನ್ನು ಆರಂಭಿಸಿದೆ. ಹಿಂದೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವುದಕ್ಕೆ ಸ್ಥಳೀಯ ಆಡಳಿತದಿಂದ ನಿರಾಪೇಕ್ಷಣಾ ಪತ್ರ (ಎನ್.ಸಿ) ಪಡೆಯುವುದು ಕಡ್ಡಾಯವಾಗಿತ್ತು. ಇದರಿಂದ ನಾಗರಿಕರಿಗೆ ಸಮಸ್ಯೆಯಾಗುತ್ತಿತ್ತು. ಈಗ ಎನ್.ಸಿ ಪಡೆಯುವ ಅಗತ್ಯವಿಲ್ಲ. ಹಾಗಾಗಿ ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿಯ ಆಧಾರದ ಮೇಲೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಇಂಧನ ಇಲಾಖೆ ತಿಳಿಸಿದೆ.

ರಾಜ್ಯಾದ್ಯಂತ ಬೆಳಕು ಯೋಜನೆ ಅನುಷ್ಠಾನಗೊಂಡಿದ್ದು, ವಿದ್ಯುತ್ ಸೌಲಭ್ಯವಿಲ್ಲದ ಬಡವರ ಮನೆಗಳಿಗೆ ಇಲಾಖೆಯ ವತಿಯಿಂದ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಈ ಸೌಲಭ್ಯವನ್ನು ಪಡೆಯಲು ನಾಗರಿಕರು ಜೆಸ್ಕಾಂ, ಬೆಸ್ಕಾಂ, ಹೆಸ್ಕಾಂ ಆಯಾ ವಿಭಾಗದ ಸಾರ್ವಜನಿಕರು ಹತ್ತಿರದ ಉಪ ವಿಭಾಗದ ಕಚೇರಿಗಳಲ್ಲಿ ರೇಷನ್ ಕಾರ್ಡ್, ಅಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿನೊಂದಿಗೆ ಅರ್ಜಿ ಸಲ್ಲಿಸಬೇಕು. ಆಗ ಇಲಾಖೆಯ ಅಧಿಕಾರಿಗಳು ಸ್ಥಳದ ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಬೆಳಕು ಯೋಜನೆಯಡಿ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಕಳುಹಿಸುತ್ತಾರೆ. ಸೌಲಭ್ಯ ಪಡೆಯಲಿಚ್ಚಿಸುವವರು ಕೂಡಲೇ ಅರ್ಜಿ ಸಲ್ಲಿಸಬೇಕು. ಜನವರಿ 31 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹಾಗಾಗಿ  ನಿಮ್ಮ ಹತ್ತಿರದ ಉಪ ವಿಭಾಗದ ಕಚೇರಿಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಇದನ್ನೂ ಓದಿ: ಯಾವ ಬ್ಯಾಂಕಿನಲ್ಲಿ ಎಷ್ಟು ಮತ್ತು ಎಲ್ಲೆಲ್ಲಿ ಸಾಲ ಪಡೆದಿದ್ದೀರೆಂಬುದನ್ನು ಮೊಬೈಲ್ ನಲ್ಲಿಯೇ ಉಚಿತವಾಗಿ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದಲ್ಲಿ ಬೆಳಕು ಯೋಜನೆಯನ್ವಯ ವಿದ್ಯುತ್ ಸಂಪರ್ಕ ರಹಿತ ಮನೆಗಳ ಸರ್ವೆ ನಡೆಸಿದಾಗ 1,26,787 ಮನೆಗಳಿಗೆ ಬೆಳಕಿನ ಭಾಗ್ಯವಿರಲಿಲ್ಲವೆಂದು ಇಂಧನ ಇಲಾಖೆ ಮಾಹಿತಿ ನೀಡಿದೆ. ಆದರೆ ಇನ್ನೂ ವಿದ್ಯುತ್ ಸಂಪರ್ಕ ವಿಲ್ಲದ ಮನೆಗಳ ಮಾಹಿತಿ ಬರುತ್ತಲೇ ಇದೆ. ಅವುಗಳಿಗೆ ಸಂಪರ್ಕ ನೀಡಲಾಗುವುದು. ಆಹಾರ, ಆಶ್ರಯ, ಅಕ್ಷರದಂತೆ ಬೆಳಕು ಮನುಷ್ಯನ ಅನಿವಾರ್ಯತೆ.  ಈ ಹಿನ್ನೆಲೆಯಲ್ಲಿ ಎಲ್ಲಾ ಮನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಸಿಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಳಕು ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಿದ್ದಾರೆ ಎಂದು ಇಂಧನ ಸಚಿವ ಸುನೀಲ್ ಕುಮಾರಿ ತಿಳಿಸಿದ್ದಾರೆ.

Leave a comment