Free gas connection ಪಡೆಯಲು ಅರ್ಜಿ ಆಹ್ವಾನ

Written by Ramlinganna

Updated on:

ಪ್ರಧಾನಮಂತ್ರಿ ಉಜ್ವಲ್ ಯೋಜನೆಯಡಿಯಲ್ಲಿ ( Free gas connection ) ಉಚಿತವಾಗಿ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಈ ಹಿಂದೆ ಉಜ್ವಲ್ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕ ಪಡೆಯದೆ ಇರುವ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತ ಮಹಿಳೆಯರು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು? ಆನ್ಲೈನ್ ನಲ್ಲಿ ಅರ್ಜಿ ಹೇಗೆ ಸಲ್ಲಿಸಬೇಕು? ಎಲ್ಲಿ ಅರ್ಜಿ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ.

ಉಜ್ವಲ್ ಯೋಜನೆಯಡಿಯಲ್ಲಿ ಗ್ಯಾಸ್ ಸಂಪರ್ಕ ಪಡೆಯಲಿಚ್ಚಿಸುವವರು ತೈಲ ಕಂಪನಿಯ ಗ್ಯಾಸ್ ಏಜೆನ್ಸಿಯನ್ನು ಗ್ರಾಹಕರೇ ನೇರವಾಗಿ ಆಯ್ಕೆ ಮಾಡಿಕಳ್ಳಬಹುದು.

Free gas connection ಗ್ಯಾಸ್ ಸಂಪರ್ಕ ಪಡೆಯಲು ಬೇಕಾಗುವ ದಾಖಲೆಗಳು?

ಗ್ಯಾಸ್ ಸಂಪರ್ಕ ಪಡೆಯಲು ಮಹಿಳೆಯ ಹೆಸರಿನಲ್ಲಿ ಆಧಾರ್ ಕಾರ್ಡ್ ಇರಬೇಕು. ಮಹಿಳೆಯ ವಯಸ್ಸು 18 ವರ್ಷ ಪೂರ್ಣಗೊಂಡಿರಬೇಕು.ಬಿಪಿಎಲ್ ಕಾರ್ಡ್ ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ಅರ್ಜಿಯನ್ನು ಅಗತ್ಯ ಮಾಹಿತಿಗಳನ್ನು ಆನ್ಲೈನ್ ನಲ್ಲಿ ಭರ್ತಿ ಮಾಡಿರಬೇಕು. ಈ ಹಿಂದೆ ಉಜ್ವಲ ಯೋಜನೆಯಡಿಯಲ್ಲಿ ಗ್ಯಾಸ್ ಸೌಲಭ್ಯ ಪಡೆದಿರಬಾರದು.

Free gas connection ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಈ

https://www.pmuy.gov.in/ujjwala2.html

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಅರ್ಹತೆ ಹಾಗೂ ಯಾವ ಯಾವ ದಾಖಲೆ ಬೇಕು ಎಂಬ ಮಾಹಿತಿ ಕಾಣಿಸುತ್ತದೆ. ಅಲ್ಲಿ ನಿಮಗೆ click Here to Apply for new ujjwala 2.0 Connection ಕಾಣಿಸುತ್ತದೆ. Click Here ಮೇಲೆ ಕ್ಲಿಕ್ ಮಾಡಬೇಕು.ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಗ್ಯಾಸ್ ಏಜೆನ್ಸಿಗಳು ಕಾಣಿಸುತ್ತವೆ. ಅಂದರೆ ಇಂಡೇನ್, ಭಾರತ್ ಗ್ಯಾಸ್ ಹಾಗೂ ಹೆಚ್.ಪಿ ಗ್ಯಾಸ್ ಆಯ್ಕೆಗಳು ಕಾಣಿಸುತ್ತವೆ.

ಅದರಲ್ಲಿ ಯಾವ ಗ್ಯಾಸ್ ಏಜೆನ್ಸಿ ಬೇಕೋ ಅದರ ಮುಂದುಗಡೆ ಇರುವ click here to apply ಮೇಲೆ ಕ್ಲಿಕ್ ಮಾಡಬೇಕು. ನಂತರ Register Now ಮೇಲೆ ಕ್ಲಿಕ್ ಮಾಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. Register Now ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಹೆಸರು, ಸರ್ ನೇಮ್, ಮೊಬೈಲ್ ನಂಬರ್, ಇ ಮೇಲ್ ಅಡ್ರೆಸ್ ಹಾಕಿ ಐ ಆ್ಯಮ್ ನಾಟ್ ರೋಬೋಟ್ ಮೇಲೆ ಕ್ಲಿಕ್ ಮಾಡಿ ಪ್ರೊಸೀಡ್ ಮೇಲೆ ಕ್ಲಿಕ್ ಮಾಡಿಅರ್ಜಿ ಸಲ್ಲಿಸಬಹುದು. ಈಗಾಗಲೇ ನೀವು ಲಾಗಿನ್ ಆಗಿದ್ದರೆ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಪಾಸ್ವರ್ಡ್ ಹಾಕಿ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ Bele vime ಹಣ ಬಿಡುಗಡೆ: ನಿಮಗೂ ಜಮೆಯಾಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ಆನ್ಲೈನ್ ನಲ್ಲಿ ನಿಮಗೆ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ಸಿ.ಎಸ್.ಸಿ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ 1800 233 3555 ಅಥವಾ 1800 266 6696 ಗೆ ಕರೆ ಮಾಡಬಹುದು. ಕೂಡಲೇ ಅರ್ಜಿ ಸಲ್ಲಿಸಿ ಪ್ರಧಾನಮಂತ್ರಿ ಉಜ್ವಲ್ ಯೋಜನೆಯಡಿಯಲ್ಲ ಉಚಿತವಾಗಿ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಬಹುದು. ಇದಕ್ಕಾಗಿ ಆಸಕ್ತ ಫಲಾನುಭವಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಆಫ್ಲೈನ್ೈ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

Leave a Comment