ಜುಲೈ 7 ರಿಂದ ಕುರಿ ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

Written by Ramlinganna

Updated on:

Free Goat farming training for two days ಕುರಿ, ಮೇಕೆ ಹಾಗೂ ಹೈನುಗಾರಿಕೆಯಲ್ಲಿ ಆಸಕ್ತಿರುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ಕುರಿ ಮತ್ತು ಮೇಕೆ ಸಾಕಾಣಿಕೆಗೆ ವೈಜ್ಞಾನಿಕವಾಗಿ ತರಬೇತಿ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಲಬುರಗಿ ಸೇಡಂ ರಸ್ತೆಯಲ್ಲಿರುವ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕಲಬುರಗಿ ಜಿಲ್ಲೆಯ ರೈತರಿಗೆ ಜುಲೈ7 ಹಾಗೂ  8 ರಂದು ಎರಡು ದಿನಗಳ ಕಾಲ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಒಂದು ಬ್ಯಾಚಿನಲ್ಲಿ 25 ಜನ ರೈತರಿಗೆ ತರಬೇತಿ ನೀಡಲಾಗುವುದು. ಮೊದಲು ಬಂದವರಿಗೆ ಅವಕಾಶ ನೀಡಲಾಗುವುದು.ಆಯಾ ದಿನಗಳಂದು ಅಂದರೆ ತರಬೇತಿಯ ಅವಧಿಯಲ್ಲಿ ಬೆಳಗ್ಗೆ 10 ಗಂಟೆಗೆ ರೈತರು ಹಾಜರಿರಬೇಕು.ತರಬೇತಿಗೆ ಹಾಜರಾಗುವ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ರೈತರೇ ತರಬೇಕು. ತರಬೇತಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ. ಮಧ್ಯಾಹ್ನ ಊಟ ನೀಡಲಾಗುವುದು. ಎರಡು ದಿನಗಳ ಕಾಲ ಕಡ್ಡಾಯವಾಗಿ ತರಬೇತಿಗೆ ಹಾಜರಾದವರಿಗೆ ಮಾತ್ರ ತರಬೇತಿ ಪ್ರಮಾಣಪತ್ರ ನೀಡಲಾಗುವುದು.

ಈ ತರಬೇತಿಗೆ ಹಾಜರಾಗುವ ರೈತರು ಅರ್ಜಿಯ ಜೊತೆಗೆ ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಲಗತ್ತಿಸಬೇಕು. ಆಧಾರ್ ಕಾರ್ಡ್ ಪ್ರತಿ ಲಗತ್ತಿಸಬೇಕು.  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣಪತ್ರ ಲಗತ್ತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರೈತರು ಉಪನಿರ್ದೇಶಕರ ಕಚೇರಿ, ಪಶುಪಾಲನೆ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಸೇಡಂ ರಸ್ತೆ ಕಲಬುರಗಿ ವಿಳಾಸಕ್ಕೆ ಅಥವಾ ಕಚೇರಿ ದೂರವಾಣಿ ಸಂಖ್ಯೆ 08472 220576 ಗೆ ಸಂಪರ್ಕಿಸಲು ಕೋರಲಾಗಿದೆ.

Free Goat farming training for two days ಬೀದರ್ ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ

ಬೀದರ್ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ : ಜಮೀನಿನ ಮೊಟೇಷನ್ ಮೊಬೈಲ್ ನಲ್ಲೇ ನೋಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಜುಲೈ 7 ರಿಂದ 28 ರರವರೆಗೆ  ಕುರಿ ಮತ್ತು ಆಡು ಸಾಕಾಣಿಕೆ ಹಾಗೂ ಆಧುನಿಕ ಹೈನುಗಾರಿಕೆ ತರಬೇತಿ ನಡೆಯಲಿದೆ. ಆಸಕ್ತ ರೈತರು ಹಾಜರಿ ಸಮಯದಲ್ಲಿ ಆಧಾರ್ ಕಾರ್ಡ್ ಸಲ್ಲಿಸಬೇಕು. ತರಬೇತಿಯಲ್ಲಿ ಕೋವಿಡ್  ಮಾರ್ಗಸೂಚಿಯನ್ವಯ ಆಸಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕುರಿ ಸಾಕಾಣಿಯಲ್ಲಿ ಆಸಕ್ತಿಯಿರುವ ರೈತರು ಸದರಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಬೀದರ್ ಪಶಉಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಾಸನ ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ

ಪಶುಪಾಲನೆಯಲ್ಲಿ ಆಸಕ್ತಿಯಿರುವ ರೈತರು, ರೈತ ಮಹಿಳೆಯರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಜುಲೈ 4 ಮತ್ತು 5 ರಂದು ಹಂದಿ ಸಾಕಾಣಿಕೆ,  ಜುಲೈ 7 ಮತ್ತು 8 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ನೀಡಲಾಗುವುದು. ಅದೇ ರೀತಿ ಜುಲೈ 15 ಮತ್ತು 16 ರಂದು ಕೋಳಿ ಸಾಕಾಣಿಕೆ, ಜುಲೈ 18 ಮತ್ತು 19 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ, ಜುಲೈ 21 ಮತ್ತು 22 ರಂದು ಆಧುನಿಕ ಹೈನುಗಾರಿಕೆ ತರಬೇತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲೆಯ ರೈತರು 08172 235226 ಗೆ ಸಂಪರ್ಕಿಸಲು ಕೋರಲಾಗಿದೆ.

ಈ ಸಹಾಯವಾಣಿಗೆ ಕರೆ ಮಾಡಿ ನಿಮ್ಮ ಜಿಲ್ಲೆಯಲ್ಲಿ ತರಬೇತಿ ಯಾವಾಗ ನೀಡಲಾಗುವುದು ಕೇಳಿ

ನಿಮ್ಮ ಜಿಲ್ಲೆಯಲ್ಲಿ ಯಾವಾಗ ಕುರಿ ಸಾಕಾಣಿಕೆ ತರಬೇತಿ ನೀಡಲಾಗುವುದು ಎಂಬುದನ್ನು ವಿಚಾರಿಸಲು ಈ 8277 100 200 ಸಹಾಯವಾಣಿ  ನಂಬರಿಗೆ ಕರೆ ಮಾಡಬಹುದು.

ಪಶುಪಾಲನೆಯಲ್ಲಿ ಆಸಕ್ತಿಯಿರುವ ರೈತರಿಗೆ ಪಶುಪಾಲನೆ ಕುರಿತು  ಮಾಹಿತಿ ನೀಡುವುದಕ್ಕಾಗಿ ಸರ್ಕಾರವು ಪಶುಪಾಲನಾ ಸಹಾಯವಾಣಿಯನ್ನು ಆರಂಭಿಸಿದೆ. ಇದು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತದೆ. ರೈತರು 8277 100 200 ನಂಬರಿಗೆ ಕರೆ ಮಾಡಿದರೆ ಸಾಕು ಪಶುಪಾಲನೆ ಕುರಿತು ಸಂಪೂರ್ಣ ಮಾಹಿತಿ ನೀಡುವರು.

Leave a Comment