goat free training ಕುರಿ, ಮೇಕೆ ಸಾಕಾಣಿಕೆ ಮಾಡುವ ರೈತರಿಗೆ ಸಂತಸದ ಸುದ್ದಿ. ಹತ್ತು ದಿನಗಳ ಕಾಲ ರೈತರಿಗೆ ಕುರಿ ಸಾಕಾಣಿಕೆ ಕುರಿತು ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ (ಕಿಟಸರ್ಡ್) ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಹತ್ತು ದಿನಗಳ ಕಾಲ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ನವೆಂಬರ್ 25 ರಿಂದ ಡಿಸೆಂಬರ್ 4 ರವರೆಗೆ ಹತ್ತು ದಿನಗಳ ಕಾಲ ಈ ತರಬೇತಿ ನೀಡಲಾಗುತ್ತಿದ್ದು, ಜಿಲ್ಲೆಯ ಗ್ರಾಮೀಣ ಭಾಗದ ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್./ ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2021ರ ನವೆಂಬರ್ 23 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ 2021ರ ನವೆಂಬರ್ 24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9243602888, 9886781239 ಹಾಗೂ 9900135705 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
goat free training ಕುರಿ ಸಾಕಾಣಿಕೆ ಮಾಹಿತಿ ನೀಡಲು (FREE HELPLINE FOR GOAT FARMING)ಉಚಿತ ಸಹಾಯವಾಣಿ
ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಮೊಲ ಸಾಕಾಣಿಕೆ ಹಾಗೂ ಹಂದಿ ಸಾಕಾಣಿಕೆ ಕುರಿತು ಸಹ ಸಂಪೂರ್ಣ ಮಾಹಿತಿ ಪಡೆಯಲು ರೈತರು ಸರ್ಕಾರದಿಂದ ಆರಂಭವಾದ ಉಛಿತ ಸಹಾಯವಾಣಿಗೆ ಕರೆ ಮಾಡಬಹುದು.
ಇದಕ್ಕಾಗಿ ನೀವು ಯಾವುದೇ ಕರೆ ಶುಲ್ಕ ಪಾವತಿಸುವ ಅವಶ್ಯಕತೆಯಿಲ್ಲ. ಪಶು ಇಲಾಖೆಯ ತಜ್ಞರಿಂದ ಮಾಹಿತಿ ಪಡೆಯಲು ಬಯಸಿದ್ದರೆ ಈ ಉಚಿತ ಸಹಾಯವಾಣಿಗೆ ಕರೆ ಮಾಡಿದರೆ ಸಾಕು ನಿಮ್ಮ ಜಿಲ್ಲೆಯ, ತಾಲೂಕಿನ ಪಶು ಇಲಾಖೆಯ ಸಿಬ್ಬಂದಿಯೊಂದಿಗೆ ಸಂಪರ್ಕ ನೀಡಲಾಗುವುದು. ನಿಮಗೆ ಬೇಕಾದ ಮಾಹಿತಿ ಪಶು ಇಲಾಖೆಯ ಸಿಬ್ಬಂದಿಗಳಿಗೆ ಮನೆಯಲ್ಲಿಯೇ ಕುಳಿತು ಪಡೆಯಬಹುದು.
ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ
ರೈತರು ದೂರವಾಣಿ ಸಂಖ್ಯೆ (farmer toll free number) 8277 100 200 (ಉಚಿತ) ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಕರೆ ಮಾಡಿ ಪಶುವೈದ್ಯರು ಮತ್ತು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆಯಬಹುದು.
ಈ ಉಚಿತ ಸಹಾಯವಾಣಿಯಿಂದ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಹೀಗೂ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲಸೌಲಭ್ಯ ಕುರಿತು ಮಾಹಿತಿ ನೀಡಲಾಗುವುದು. ದೇಶಿ ಹಾಗೂ ವಿದೇಶಿ ಜಾನುವಾರು ತಳಿಗಳ ಬಗ್ಗೆ ಮಾಹಿತಿ ನೀಡಲಾಗುವುದು. ಮಿಶ್ರತಳಿ, ಹಸು, ಕುರಿ, ಮೇಕೆ, ಹಂದಿಗಳ ಅಂದಾಜು ಬೆಲೆ ಹಾಗೂ ಅವುಗಳ ಲಭ್ಯತೆ ಕುರಿತಂತೆ ಸೂಕ್ತ ಮಾಹಿತಿ ನೀಡಲಾಗುವುದು.