ಉಚಿತ ಕುರಿ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನ

Written by By: janajagran

Updated on:

Free goat farming training ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಕಿಟಸರ್ಡ್)ಯಿಂದ ಇದೇ ಜುಲೈ 26 ರಿಂದ ಆಗಸ್ಟ್ 4ರ ವರೆಗೆ  ಹತ್ತು ದಿನಗಳ ಕಾಲ ಉಚಿತ ಕುರಿ ಸಾಕಾಣಿಕೆ ಕುರಿತು ಉಚಿತವಾಗಿ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಎಸ್.ಬಿ.ಐ. ಆರ್‌ಸೆಟಿ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ 18 ರಿಂದ 45 ವರ್ಷದೊಳಗಿನ  ಬಿ.ಪಿ.ಎಲ್. ಕುಟುಂಬದ ನಿರುದ್ಯೋಗಿ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ತರಬೇತಿ ಸಮಯದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ  ಒದಗಿಸಲಾಗುತ್ತದೆ.  ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ತರಬೇತಿ ಸಂಸ್ಥೆಯಿAದ ಪಡೆದು  ಭರ್ತಿ ಮಾಡಿ  ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಬಿ.ಪಿ.ಎಲ್ ಪಡಿತರ ಚೀಟಿ, ಬ್ಯಾಂಕ್ ಪಾಸ್‌ಬುಕ್ ಜಿರಾಕ್ಸ್ ಪ್ರತಿ ಹಾಗೂ  ಇತ್ತೀಚಿನ 5 ಇತ್ತೀಚಿನ ಭಾವಚಿತ್ರ ದಾಖಲಾತಿಗಳೊಂದಿಗೆ 2021 ಜುಲೈ 23 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಅದೇ ರೀತಿ ಜುಲೈ 23 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯುವರೆಗೆ ತರಬೇತಿ ಸಂಸ್ಥೆ ಕಚೇರಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಸಂದರ್ಶನಕ್ಕೆ ಹಾಜರಾಗಬೇಕೆಂದು ಕೋರಲಾಗಿದೆ.

ಅಭ್ಯರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9243602888, 9886781239ಗೆ ಸಂಪರ್ಕಿಸಲು ಕೋರಲಾಗಿದೆ.

Free goat farming training ಮೈಸೂರು ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ

ರಾಷ್ಟೀಯ ಕೃಷಿ ವಿಕಾಸ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದವರಿಗೆ ಕುರಿ, ಮೇಕೆ 10+1 ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಫಲಾನುಭವಿಗಳು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೋಂದಾಯಿತ ಮೈಸೂರು ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿಸದಸ್ಯರಾಗಿರುವ ಹಾಗೂ ಹಿಂದಿನ 3 ವರ್ಷಗಳಲ್ಲಿ ಪಶುಪಾಲನೆ ಇಲಾಖೆ, ಅಥವಾ ನಿಗಮದದಿಂದ ಇದೇ ಉದ್ದೇಶಕ್ಕಾಗಿ ಸಹಾಯಧನ ಸೌಲಭ್ಯ ಪಡೆಯದೆ ಇರುವವರು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದು.

ಕುರಿ ಮತ್ತು ಉಣ್ಣೆ ಉತ್ಪಾದಕ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿರುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಹೋಬಳಿಮಟ್ಟದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು/ಕಾರ್ಯದರ್ಶಿಯವರಿಂದ ಅರ್ಜಿ ಪಡೆದು ಫೆಬ್ರವರಿ 24 ರೊಳಗೆ  ಅರ್ಜಿ ಸಲ್ಲಿಸಬೇಕು, ಭರ್ತಿ ಮಾಡಿದ ಅರ್ಜಿಯನ್ನು ಸಂಘದ ಅಧ್ಯಕ್ಷರು, ಕಾರ್ಯದರ್ಶಿಯವರ ಮೂಲಕ ಚಾಮುಂಡಿಪುರಂನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಸಹಾಯಕ ನಿರ್ದೇಶಕರಿಗೆ ಸಲ್ಲಿಸಬೇಕು.

ಇದನ್ನೂಓದಿ ಮಹಿಳೆಯರಿಗೆ ಗುಡ್ ನ್ಯೂಸ್- 5ನೇ ಕಂತಿನ ಹಣ ಬಿಡುಗಡೆ

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಮೈಸೂರು ಸಹಾಯಕ ನಿರ್ದೇಶಕರ ಕಚೇರಿಯ ಮೊಬೈಲ್ ಸಂಖ್ಯೆ 9945623137 ಅಥವಾ ಕಚೇರಿ ದೂರವಾಣಿ ಸಂಖ್ಯೆ 0821 2488830 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment