ಮೇಕೆ ಸಾಕಾಣಿಕೆಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Free Goat training with accommodation: ಕುರಿ ಮೇಕೆ ಸಾಕಾಣಿಕೆ, ಹೈನುಗಾರಿಕೆ ಹಾಗೂ ಡೆಸ್ಕ್ ಟಾಪ್ ಪಬ್ಲಿಶಿಂಗ್ ತರಬೇತಿಯಲ್ಲಿ ಆಸಕ್ತಿಯಿರುವ ರೈತರಿಗೆ ಹಾಗೂ ಯುವಕರಿಗೆ ಉಚಿತವಾಗಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಯುವಕರು ಉಚಿತವಾಗಿ ತರಬೇತಿ ಪಡೆಯಬಹುದು. ಹೌದು, ತರಬೇತಿಯೊಂದಿಗೆ ಉಚಿತ ಊಟ ಹಾಗೂ ವಸತಿ ಸೌಲಭ್ಯನೀಡಲಾಗುವುದು. ಹಾಗಾದರೆ ತರಬೇತಿ ಎಲ್ಲಿ ನೀಡಲಾಗುವುದು ಅದಕ್ಕೆ ಬೇಕಾಗುವ ಅರ್ಹತೆಗಳೇನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಕೆಳಕಂಡ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ ಕಲಬುರಗಿ ಎಂದು ಸಂಸ್ಥೆಯ ಎಸ್.ಬಿ.ಐ. ಆರ್‌ಸೆಟ್ ನಿರ್ದೇಶಕರು ತಿಳಿಸಿದ್ದಾರೆ.

Free Goat training with accommodation ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಏಪ್ರಿಲ್ 21 ರಿಂದ ಜೂನ್ 4 ರವರೆಗೆ ಡೆಸ್ಕ್ಟಾಪ್ ಪಬ್ಲಿಷಿಂಗ್ ತರಬೇತಿ ಹಮ್ಮಿಕೊಳ್ಳಲಾಗಿದೆ. ಅರ್ಜಿ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ. ಏಪ್ರಿಲ್ 28 ರಿಂದ ಮೇ 10 ರವರೆಗೆ ಕೃಷಿ ಉದ್ಯಮಿ (ಕುರಿ ಮತ್ತು ಆಡು ಸಾಕಾಣಿಕೆ, ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ) ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 26 ರಂದು ಕೊನೆಯ ದಿನವಾಗಿದೆ.

Free Goat training with accommodation ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳೇನು?

ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್., ಅಂತ್ಯೋದಯ ರೇಷನ್, ಎಮ್‌ಜಿಎನ್‌ಆರ್‌ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9448994585, 9886781239 ಹಾಗೂ 9900135705ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Physiotherapy training ಬುದ್ದಿಮಾಂದ್ಯ ಮಕ್ಕಳಿಗೆ ಫೀಜಿಯೋತೆರಫಿಗೆ ಒಳಪಡಿಸಲು ಅರ್ಜಿ ಆಹ್ವಾನ

ಕಲಬುರಗಿ ಮಹಾನಗರಪಾಲಿಕೆಯಿಂದ ಎಸ್.ಎಫ್.ಸಿ. ಕ್ರೀಯಾ ಯೋಜನೆಗಳ ಯೋಜನೆಯಡಿ ವಿಕಲಚೇತನರಿಗೆ ಕೆಳಕಂಡ ಕಲ್ಯಾಣ ಕಾರ್ಯಕ್ರಮಗಳಡಿ ಶೇ. 5ರ ಶಾಖೆಯ ಯೋಜನೆಯಾದ 2019-20ನೇ ಸಾಲಿನ ಬುದ್ದಿ ಮಾಂದ್ಯ ಮಕ್ಕಳಿಗೆ ಫೀಜಿಯೋತೆರಫಿಗೆ ಒಳಪಡಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತರು (ಆಡಳಿತ) ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕದಲ್ಲಿ ಯಾರಿಗೆ ಎಷ್ಟು ಜಮೀನಿದೆ?

ಅಭ್ಯರ್ಥಿಗಳು ವಿಕಲಚೇತನರರಾಗಿರಬೇಕು. ಕಲಬುರಗಿ ನಗರದ ನಿವಾಸಿಯಾಗಿರಬೇಕು. ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಮೀರಿರಬಾರದು.  ವಿಕಲಚೇತನರ ಪ್ರಮಾಣ ಪತ್ರ ಯುಡಿಐಡಿ ಕಾರ್ಡ್ ಲಗತ್ತಿಸಬೇಕು.

ನಿಗದಿತ ಅರ್ಜಿ ನಮೂನೆಯನ್ನು 2025ರ ಏಪ್ರಿಲ್ 21 ರಿಂದ ಮೇ 6 ರ ಸಂಜೆ 5.30 ಗಂಟೆಯವರೆಗೆ ಮಹಾನಗರ ಪಾಲಿಕೆಯ ಶೇ. 5ರ ಶಾಖೆಯಿಂದ ಕಚೇರಿ ವೇಳೆಯಲ್ಲಿ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ದೃಢೀಕರಿಸಿ 2025ರ ಮೇ 7 ರಿಂದ ಮೇ 10 ರ ಸಂಜೆ 4.30 ಗಂಟೆಯವರೆಗೆ ಸ್ವೀಕರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರಪಾಲಿಕೆಯ ಶೇ 5ರ ಶಾಖೆಯನ್ನು ಹಾಗೂ ಮಹಾನಗರ ಪಾಲಿಕೆಯ http://www.kalaburagicity.mrc.gov

ವೆಬ್‌ಸೈಟ್‌ನ್ನು ಸಂಪರ್ಕಿಸಲು ಕೋರಲಾಗಿದೆ.

Leave a Comment