ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Written by By: janajagran

Updated on:

ತೋಟಗಾರಿಕೆ ಇಲಾಖೆಯ ಅಧೀನದಲ್ಲಿರುವ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 11 ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 2022-23ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 10 ತಿಂಗಳ ಕಾಲ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2-5-2022 ರಿಂದ 28-02-2023 ರವರೆಗೆ ಹತ್ತು ತಿಂಗಳ ಕಾಲ ರೈತರಿಗೆ ತರಬೇತಿ ನೀಡಲಾಗುವುದು. 18-04-2022 ರಂದು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು 22-04-2022 ರಂದು ಪ್ರಕಟಿಸಲಾಗುವುದು. ಅಭ್ಯರ್ಥಿಗಳು 02-05-2022 ರಿಂದ ತರಬೇತಿಗೆ ಹಾಜರಾಗಬೇಕಾಗುತ್ತದೆ. ಹೆಚ್ಚಿನ ಅರ್ಜಿಗಳು ಬಂದಾಗ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1250 ರೂಪಾಯಿ ಮಾಸಿಕ ಶಿಷ್ಯವೇತನ ನೀಡಲಾಗುವುದು.

ವಯೋಮಿತಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕನಿಷ್ಠ 18 ವರ್ಷ, ಮತ್ತು ಗರಿಷ್ಠ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ ಗರಿಷ್ಠ 65 ವರ್ಷ ಹಾಗೂ ಸಾಮಾನ್ಯ ವರ್ಗದವರಿಗೆ ಕನಿಷ್ಠ 18 ವರ್ಷ, ಮತ್ತು ಗರಿಷ್ಠ 30 ವರ್ಷ ಆಗಿರಬೇಕು.

ತರಬೇತಿಗೆ ಅರ್ಹತೆಗಳು

ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ತರಬೇತಿ ಪ್ರವೇಶ ಬಯಸುವ ಅಭ್ಯರ್ಥಿಗಳ ತಂದೆ/ತಾಯಿ/ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿಯನ್ನು ಕಡ್ಡಾಯವಾಗಿ ನೀಡಬೇಕು.

ಅರ್ಜಿ ಎಲ್ಲಿ ಪಡೆಯಬೇಕು?

ಅರ್ಜಿಗಳನ್ನು ಮಾರ್ಚ್ 15 ರಿಂದ ಏಪ್ರೀಲ್ 14 ರವರೆಗೆ ಆಯಾ ಜಿಲ್ಲೆಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರವರ ಕಚೇರಿಯಲ್ಲಿ ಅಥವಾ  ತೋಟಗಾರಿಕೆ ಇಲಾಖೆಯ  ಸುತ್ತೋಲೆಯ

https://horticulturedir.karnataka.gov.in/storage/pdf-files/Lalbagh/10%20months%20training.pdf

ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ  ತೋಟಗಾರಿಕೆ ತರಬೇತಿಯ ಎಲ್ಲಾ ಮಾಹಿತಿಯೂ ಅಲ್ಲಿ ಕಾಣುತ್ತದೆ. ಕೆಳಗಡೆ 5 ನೇ ಪೇಜ್ ನಲ್ಲಿ ಅರ್ಜಿ ನಮೂನೆ ಇರುತ್ತದೆ. ಅದನ್ನುಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ  ಏಪ್ರೀಲ್ 16 ಸಾಯಂಕಾಲ 5 ಗಂಟೆಯೊಳಗೆ ಅರ್ಜಿಗಳನ್ನು ಆಯಾ ಜಿಲ್ಲೆಗಳ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬೇಕು. ಇದೇ ಪೇಜನಲ್ಲಿ ಕೊನೆಯ ಪುಟ ಅಂದರೆ 13ನೇ ಪುಟದಲ್ಲಿ ಯಾವ ಜಿಲ್ಲೆಯ ಅಭ್ಯರ್ಥಿಗಳಿಗೆ ಎಲ್ಲಿ ತರಬೇತಿ ನೀಡಲಾಗುವುದು ಹಾಗೂ ಎಷ್ಟು ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುವುದು ಎಂಬ ಮಾಹಿತಿಯೂ ಇದೆ.

ಅರ್ಜಿಯ ಶುಲ್ಕ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ಜಿಲ್ಲೆಗಳ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ)/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸುವಾಗ ಅರ್ಜಿ ಶುಲ್ಕದ ಬಾಬ್ತು ಸಾಮಾನ್ಯ ಅಭ್ಯರ್ಥಿಗಳಿಗೆ 30 ರೂಪಾಯಿ, ಮಾಜಿ ಸೈನಿಕರು/ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಇಗೆ 15 ರೂಪಾಯಿ ನಿಗದಿಪಡಿಸಲಾಗಿದೆ. ಈ ಮೊತ್ತವನ್ನು ಇಂಡಿಯನ್ ಪೋಸ್ಟಲ್ ಆರ್ಡರ್ ಡಿಡಿ ರೂಪದಲ್ಲಿ ಆಯಾ ಜಿಲ್ಲೆಗಳ ತೋಟಗಾರಿಕೆ ಉಪ ನಿರ್ದಶಕರು (ಜಿಪಂ)ರವರ ಹೆಸರಿನಲ್ಲಿ ಪಡೆದು, ಅರ್ಜಿಯ ಜೊತೆಗೆ ಲಗತ್ತಿಸಬೇಕು.

ತರಬೇತಿಗೆ ಸೇರುವ ಪ್ರತಿ ಅಭ್ಯರ್ಥಿಯು ತರಬೇತಿ ಕೇಂದ್ರದ ವಸತಿ ಗೃಹದಲ್ಲಿಯೇ ತಂಗಬೇಕು. ಮಹಿಳಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸುರಕ್ಷಿತ ವ್ಯವಸ್ಥೆ ಕಲ್ಪಿಸಲಾಗುವುದು. ಆಯಾ ತರಬೇತಿ ಕೇಂದ್ರದ ಮುಖ್ಯಸ್ಥರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮತ್ತು ಕೋಟಗಾರಿಕೆ ಉಪ ನಿರ್ದೇಶಕರು ಜವಾಬ್ದಾರಿಯಾಗಿರುತ್ತದೆ.

ಇದನ್ನೂ ಓದಿ: ಮೀನುಗಳ ಸರ್ವೆ ನಂಬರ್ ಸಹಿತ ಬಂಡಿದಾರಿ, ಹಳ್ಳಕೊಳ್ಳಗಳ ಮ್ಯಾಪ್ ಬೇಕೆ? ಇಲ್ಲಿದೆ ಮಾಹಿತಿ

ತೋಟಗಾರಿಕೆ ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಅರ್ಜಿಯೊಂದಿಗೆ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಆಯಾ ವರ್ಗದ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರರಿಂದ ಪಡೆದ ಸರ್ಟಿಫಿಕೇಟ್ ಲಗತ್ತಿಸಬೇಕು. ಆಧಾರ್ ಕಾರ್ಡ್ ಪ್ರತಿ ಲಗತ್ತಿಸಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಾಸಾಗಿರುವ ಅಂಕಪಟ್ಟಿ ಲಗತ್ತಿಸಬೇಕು.  ಅರ್ಜಿಯೊಂದಿಗೆ ಡಿಡಿ ಲಗತ್ತಿಸುವುದು ಕಡ್ಡಾಯವಾಗಿದೆ. ಇತ್ತೀಚಿನ ಎರಡು ಭಾವಚಿತ್ರಗಳನ್ನು (ಪೋಟೊ)ಲಗತ್ತಿಸಬೇಕು.

ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನ್ನಡದಲ್ಲಿಯೇ ತರಬೇತಿ ನೀಡಲಾಗುವುದು. ಆದ್ದರಿಂದ ಅಭ್ಯರ್ಥಿಗೆ ಕನ್ನಡ ಓದುವುದು, ಬರೆಯುವುದು ಹಾಗೂ ಮಾತನಾಡುವುದು ತಿಳಿದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಇಗೆ ಮಾಜಿ ಸೈನಿಕರನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಮಾಸಿಕ 1250 ರೂಪಾಯಿ ಶಿಷ್ಯವೇತನ ನೀಡಲಾಗುವುದು.

Leave a Comment