ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಆರು ತಿಂಗಳ ಕಾಲ ಉಚಿತವಾಗಿ ಐಎಎಸ್, ಕೆಎಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಐಎಎಸ್, ಕೆಎಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಕಲ್ಯಾಣ ಕರ್ನಾಟಕ ವಿಭಾಗದ ಅಭ್ಯರ್ಥಿಗಳನ್ನು ಪದವಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ತರಬೇತಿಗೆ ಆಯ್ಕೆಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 4 ಸಾವಿರ ರೂಪಾಯಿ ಶಿಷ್ಯವೇತನವನ್ನು ತರಬೇತಿಯ ಆರು ತಿಂಗಳ ಅವಧಿಗೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಾಜರಾತಿಯನ್ವಯ ಪಾವತಿ ಮಾಡಲಾಗುವುದು.

ತರಬೇತಿಯು ಆರು ತಿಂಗಳ ಕಾಲ ನೀಡಲಾಗುವುದು. 21 ರಿಂದ43 ವರ್ಷ ದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಪದವಿಯಲ್ಲಿಉತ್ತೀರ್ಣರಾದ ಅಭ್ಯರ್ಥಿಗಳು ಶೇ. 50 ಕ್ಕಿಂತ ಹೆಚ್ಚು ಅಂಕ ಪಡೆದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 10 ಆಗಿದ್ದು, ಅಂದು ಸಾಯಂಕಾಲ 5.30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ,ಬಳ್ಳಾರಿ, ವಿಜಯನಗರ ಜಿಲ್ಲೆಯಿಂದ ತಲಾ 200 ಅಭ್ಯರ್ಥಿಗಳಂತೆ ಒಟ್ಟು 1400 ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುವುದು.

ತರಬೇತಿ ಅವಧಿಯಲ್ಲಿ ಮಾಸಿಕ 4 ಸಾವಿರ ರೂಪಾಯಿ ಶಿಷ್ಯವೇತನ

ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದಿಂದ ಖಾಸಗಿ ತರಬೇತಿ ಸಂಸ್ಥೆಗಳ ಮೂಲಕ ಉಚಿತವಾಗಿ ತರಬೇತಿ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ ಶಿಷ್ಯವೇತನ 4000 ರೂಪಾಯಿಯನ್ನುನೀಡಲಾಗುವುದು.  ಐಎಎಸ್, ಕೆಎಎಸ್ ತರಬೇತಿಗೆ ಈಗಾಗಲೇ ತರಬೇತಿ ಪಡೆದು ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಆನ್ಲೈನ್ ನಲ್ಲಿ ಉಚಿತ ತರಬೇತಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  ಈ https://kkhracs.com/ ಅಥವಾ https://kkhracs.com/Account/SignUp

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು, ಆಗ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ವೆಬ್ ಪೇಜ್ ಓಪನ್ ಆಗುತ್ತದೆ. ಅಲ್ಲಿ  ನೋಂದಣಿ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ಆಗುತ್ತದೆ. ಅಲ್ಲಿ ನಿಮ್ಮ ಹೆಸರು  ಕೊನೆಯ ಹೆಸರು, ಮೊಬೈಲ್ ನಂಬರ್ ನಮೂದಿಸಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಅದನ್ನು ನಮೂದಿಸಿದ ನಂತರ ಪಾಸ್ವರ್ಡ್ ಕ್ರಿಯೇಟ್ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಹಾಗೂ ಪಾಸ್ವರ್ಡ್ ನಮೂದಿಸಿ Sign In ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಬೇಕು.  ನಂತರ ಅಲ್ಲಿ ವಿದ್ಯಾಮಿತ್ರಮೇಲೆ ಕ್ಲಿಕ್ ಮಾಡಬೇಕು.  ಒಂದು ವೇಳೆ ವಿದ್ಯಾಮಿತ್ರ ನಿಮಗೆ ಕಾಣದಿದ್ದರೆ ಬಲಗಡೆ ಕೊನೆಯಲ್ಲಿ ನಿಮ್ಮ ಹೆಸರಿನ ಕೆಳಗಡೆ ಡ್ಯಾಶ್ ಬೋರ್ಡ್ ಮೇಲೆ ಕ್ಲಿಕ್ ಮಾಡಬೇಕು. ಆಗ  ಕೃಷಿ ಮಿತ್ರ, ಪಶುಮಿತ್ರ, ವಿದ್ಯಾಮಿತ್ರ, ಉದ್ಯೋಗ ಮಿತ್ರ ಹೀಗೆ ಕೆಲವು ಆಯ್ಕೆಗಳು ಕಾಣುತ್ತವೆ. ಅಲ್ಲಿ ನೀವು ವಿದ್ಯಾಮಿತ್ರ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವರಗಳನ್ನು ಓದಲು ವಿವರಗಳಿಗೆ ಕ್ಲಿಕ್ ಮಾಡಬೇಕು.  ಅರ್ಜಿ ಸಲ್ಲಿಸಲು ಅಪ್ಲಿಕೇಷನ್ ಗಾಗಿ ಕ್ಲಿಕ್ ಮಾಡಬೇಕು.

 ಇದನ್ನೂಓದಿ ಎಲ್ಐಸಿ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನೀವು ಕಲ್ಯಾಣ ಕರ್ನಾಟಕದ ನಿವಾಸಿಗಳಾಗಿದ್ದಲ್ಲಿ ಮಾತ್ರವೇ ಅಪ್ಲಿಕೇಷನ್ ಗಳನ್ನು ಸಲ್ಲಿಸಬೇಕಾಗಿ  ಸೂಚಿಸಲಾಗಿದೆ ಎಂಬ ಸಂದೇಶ ಬರುತ್ತದೆ. ನೀವು ಕಲ್ಯಾಣ ಕರ್ನಾಟಕದ ನಿವಾಸಿಗಳಾಗಿದ್ದರೆ ನೀವು Yes ಮೇಲೆ ಕ್ಲಿಕ್ ಮಾಡಬೇಕು.  ಆಗ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತರಬೇತಿಗಾಗಿ ಅರ್ಜಿ ಓಪನ್ ಆಗುತ್ತದೆ.

ಅಲ್ಲಿ ನಿಮ್ಮ ಹೆಸರು. ತಂದೆಯ ಹೆಸರು, ಜಿಲ್ಲೆ, ತಾಲೂಕು, ಗ್ರಾಮ, ಜನ್ಮದಿನಾಂಕ, ಆಧಾರ್ ಕಾರ್ಡ್ ನಂಬರ್ ನಮೂದಿಸಿ ಪ್ರತಿ ಅಪ್ಲೋಡ್ ಮಾಡಬೇಕು.  371 ಜೆ ನಂಬರ್ ಪ್ರಮಾಣ ಪತ್ರದ ನಂಬರ್ ನಮೂದಿಸಿ 371 ಜೆ ಪ್ರತಿ ಅಪ್ಲೋಡ್ ಮಾಡಬೇಕಾಗುತ್ತದೆ. ಎಸ್.ಎಸ್.ಎಲ್.ಸಿ , ಪಿಯುಸಿ,  ಪದವಿಯಲ್ಲಿ  ಪಡೆದ ಅಂಕ, ಶೇಕಡವಾರು,  ಜಾತಿ, ಕುಟುಂಬದ ವಾರ್ಷಿಕ ಆದಾಯ 5 ಲಕ್ಷದೊಳಗಿರಬೇಕು. ಆದಾಯ ಪ್ರಮಾಣ ಪತ್ರದ ಆರ್.ಡಿ ನಂಬರ್ ನಮೂದಿಸಿ ಪ್ರಮಾಣಪತ್ರ ಅಪ್ಲೋಡ್ ಮಾಡಬೇಕು. ನಂತರ ಸ್ವಯಂ ಘೋಷಣೆ ಪ್ರಮಾಣಪತ್ರದ ಬಾಕ್ಸ್ ಆಯ್ಕೆ ಮಾಡಿಕೊಂಡು ಸೇವ್ ಮಾಡಿ ಅರ್ಜಿ ಸಲ್ಲಿಸಬೇಕು.

Leave a Reply

Your email address will not be published. Required fields are marked *