ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ free training ಗೆ ಅರ್ಜಿ ಆಹ್ವಾನ

Written by Ramlinganna

Updated on:

free training : ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್.ಕೆಎಎಸ್, ಗ್ರೂಪ್ ಸಿ, ಬ್ಯಾಂಕಿಂಗ್, ಆರ್.ಆರ್. ಬಿ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ ಯುಪಿಎಸ್ಸಿ, ಕೆಎಎಸ್, ಗ್ರೂಪ್-ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ, ಆರ್.ಆರ್.ಬಿ ಹಾಗೂ ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವ್ರಗಹಾಗೂ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಂದ ಆನ್ಲೈನ್  ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 4 ರವರೆಗೆ ವಿಸ್ತರಿಸಲಾಗಿದೆ. ಪದವಿ ಮುಕ್ತಾಯಗೊಳಿಸಿದ ಹಾಗೂ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿಸುತ್ತಾರೆ. ಅರ್ಹ ಅಭ್ಯರ್ಥಿಗಳು  ಅಕ್ಟೋಬರ್ 4 ರೊಳಗಾಗಿ ಅರ್ಜಿ ಸಲ್ಲಿಸಬೇಕು.

free training ಅಭ್ಯರ್ಥಿಗಳು ಆನ್ಲೈಲ್ ಮೂಲಕ ಅರ್ಜಿ ಹೇಗೆ ಸಲ್ಲಿಸಬೇಕು?

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ

https://sw.kar.nic.in/swprelims/petccoaching/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಸಮಾಜ ಕಲ್ಯಾಣ ಇಲಾಖೆಯ ಪೇಜ್ ಓಪನ್ ಆಗುತ್ತದೆ. ಆಗ ಅಲ್ಲಿ ಕಾಣುವ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮೇಲೆ ಕ್ಲಿಕ್ ಮಾಡಬೇಕು. ಮಾಡಬೇಕು.ಆಗ ವಿದ್ಯಾರ್ಥಿಗಳು ಕ್ರಿಯೇಟ್ ಅಕೌಂಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರು ನಮೂದಿಸಬೇಕು. ನಂತರ ಮೊಬೈಲ್ ನಂಬರ್ ನಮೂದಿಸಬೇಕು ನಂತರ ಸೆಂಡ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ಅಭ್ಯರ್ಥಿಗೆ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಅಲ್ಲಿ ಕೇಳಲಾದ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.

ಅಲ್ಪಸಂಖ್ಯಾತರ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 4

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಯುಪಿಎಸ್.ಸಿ, ಕೆಎಎಸ್, ಗ್ರೂಪ್ ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ, ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ  ಕೊನೆಯ ದಿನಾಂಕವನ್ನು ಅಕ್ಟೋಬರ್ 4 ರವರೆಗೆ ವಿಸ್ತರಿಸಲಾಗಿದೆ.

ದನ್ನೂ ಓದಿ : ಫೆ. 28 ರಂದು ಈ ರೈತರಿಗೆ ಪಿಎಂ ಕಿಸಾನ್ 16 ನೇ ಕಂತಿನ ಹಣ ಜಮೆ

ಅಲ್ಪಸಂಖ್ಯಾತರ ಅಭ್ಯರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಅಥವಾ ರಾಜ್ಯ ಅಲ್ಪಸಂಖ್ಯಾತರ ಸಹಾಯವಾಣಿ 8277799990 ಗೆ ಸಂಪರ್ಕಿಸಲು ಕೋರಲಾಗಿದೆ. ಈ ಹಿಂದೆ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ನಿಗದಿಪಡಿಸಲಾಗಿತ್ತು.

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿಗೆ ನ್ಯಾಶನಲ್ ಸ್ಕಾಲರಶಿಪ್ ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯಕ್ಕೆಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಮೆಟ್ರಿಕ್ ಪೂರ್ವ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಬೇಗಂ ಹಜರತ್ ಮಹಲ್ ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕಾಗಿ 9 ರಿಂದ 12ನೇ ತರಗತಿಯ ಹೆಣ್ಣು ಮಕ್ಕಳು ಮಾತ್ರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು

www.scholarship.gov.in

ನಲ್ಲಿ ಲಾಗಿನ್ ಆಗಿ ಮಾಹಿತಿ ಪಡೆದು ನಿಗದಿತ ಸಮಯದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Leave a Comment