Free sewing machine : ಪ್ರಸಕ್ತ 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆ ಅಡಿಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗ ವತಿಯಿಂದ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರ ಪಡೆಯಲು ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ಹೊಲಿಗೆ ವೃತ್ತಿನಿರತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ (ಗ್ರಾ. ಕೈ) ಉಪನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ 21 ರಿಂದ 45 ವಯೋಮಾನದೊಳಗಿರಬೇಕು. ಅರ್ಜಿದಾಗರು 10ನೇ ತರಗತಿ ಉತ್ತೀರ್ಣರಾಗಿರಬೇಕು. ಒಂದು ಕುಟುಂಬದಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ. ಸರ್ಕಾರದ ಯಾವುದೇ ಯೋಜನೆಯಡಿ ಈಗಾಗಲೇ ಹೊಲಿಗೆಯಂತ್ರವನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ. ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
Free sewing machine ಆಸಕ್ತಿಯುಳ್ಳ ಮಹಿಳೆಯರು https://kalaburagi.nic.in
ವೆಬ್ಸೈಟ್ ದಲ್ಲಿ ಆನ್ಲೈನ್ ಮೂಲಕ ಅವಶ್ಯ ಮಾಹಿತಿಯನ್ನು ಭರ್ತಿ ಮಾಡಿ ಸಂಬಂಧಪಟ್ಟ ಪೂರಕ ದಾಖಲೆಗಳ ಸ್ವಯಂ ದೃಢೀಕೃತ ಪ್ರತಿಗಳನ್ನು ಅಪ್ಲೋಡ್ ಮಾಡುವ ಮೂಲಕ ಸೆಪ್ಟೆಂಬರ್ 23 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ವೆಬ್ಸೈಟ್ ನ್ನು ಅಥವಾ ಉಪನಿರ್ದೇಶಕರು (ಗ್ರಾಮೀಣ ಕೈಗಾರಿಕೆ) ಕಚೇರಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯತ, ಕಲಬುರಗಿ, ಜಿಲ್ಲಾ ಕೈಗಾರಿಕಾ ಕೇಂದ್ರ, 1ನೇ ಮಹಡಿ, ವಿಶೇಷ ನಿವೇಶನ ಸಂಖ್ಯೆ, ಎಸ್.ಪಿಎಲ್ – 16, ಕೈಗಾರಿಕಾ ವಸಾಹತು, ಜೇವರ್ಗಿ ಕ್ರಾಸ್, ಎಂ.ಎಸ್.ಕೆ ಮಿಲ್ ರಸ್ತೆ, ಕಲಬುರಗಿ ವಿಳಾಸಕ್ಕೆ ಅಥವಾ ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರು 6 ಅಂಗನವಾಡಿ ಕಾರ್ಯಕರ್ತೆ ಹುದ್ದೆ, 3 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 43 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಸ್ಥಳೀಯ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ : ಮಳೆಗೆ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ ಹೆಸರು ಚೆಕ್ ಮಾಡಿ
ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 20 ರ ಸಂಜೆ 5.30 ಗಂಟೆಯೊಳಗೆ ಆನ್ಲೈನ್ ಮೂಲಕ ಅರ್ಜಿ ಗಳನ್ನು ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸುಭಾಶನಗರ, ಮಿನಿ ವಿಧಾನಸೌಧದ ಹತ್ತಿರ, ಕೆ.ಆರ್. ಪೇಟೆ, ದೂರವಾಣಿ ಸಂಖ್ಯೆ 08230 262627 ಗೆ ಸಂಪರ್ಕಿಸಬಹುದು ಎಂದು ಸಿಡಿಪಿಓ ಅರುಣಕುಮಾರ ತಿಳಿಸಿದ್ದಾರೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
https://karnemakaone.kar.nic.in/abcd/ApplicationForm_JA_org.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು. ಕೆಟಗೇರಿ ಆಯ್ಕೆ ಮಾಡಿಕೊಳ್ಳಬೇಕು. ಜಾತಿ ಪ್ರಮಾಣ ಪತ್ರ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅರ್ಹ ಮಹಿಳೆಯರ ಬಳಿ ಆಧಾರ್ ಕಾರ್ಡ್ ಇರಬೇಕು. ವಿಧ್ಯಾಭ್ಯಾಸ ಅರ್ಹತೆ ಪ್ರಮಾಣ ಪತ್ರ ಇರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ಜನ್ಮದಿನಾಂಕದ ದಾಖಲೆ ಇರಬೇಕು. ಇತ್ತೀಚಿನ ಭಾವಚಿತ್ರ ಇರಬೇಕು.