Free sewing machine apply : ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡಿ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ನೀಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಕೃಷಿ ಮಾಹಿತಿ ಪಡೆಯಿರಿ
ಹೌದು, ಕಲಬುರಗಿ ಬಳ್ಳಾರಿ ಜಿಲ್ಲೆಸೇರಿದಂತೆ ಇತರ ಜಿಲ್ಲೆಗಳಿಂದಲೂ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಪಂಚಾಯತ್ ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಆರ್.ಎ.ಪಿ ಯೋಜನೆಯಡಿ ಗ್ರಾಮೀಣ ಭಾಗದ ಮಹಿಳಾ ಅಭ್ಯರ್ಥಿಗಳಿಂದ ಹೊಲಿಗೆ ತರಬೇತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
26 ಸಾಮಾನ್ಯ ವರ್ಗದ ಮತ್ತು ವಿಶೇಷ ಘಟಕ ಯೋಜನೆಯಡಿ 4 ಸೇರಿ ಒಟ್ಟು 30 ಮಹಿಳಾ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಂಡ್ ಗ್ರಾಮೀಣ ತರಬೇತಿ ಸಂಸ್ಥೆಯಿಂದ ಒಂದು ತಿಂಗಳ ಉಚಿತ ವಸತಿಯೊಂದಿಗೆ ಶಿಷ್ಯವೇತನ ರಹಿತ ತರಬೇತಿ ನೀಡಲಾಗುವುದು.
ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳಾ ಅಭ್ಯರ್ಥಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಲಾಗುವುದು.
ಅರ್ಜಿ ಸಲ್ಲಿಸಲು
https://ballari.nic.in/
ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಬಳ್ಳಾರಿ ಮೊಬೈಲ್ ಸಂಖ್ಯೆ 9035547140, ಸಂಡೂರ ಮೊಬೈಲ್ ನಂಬರ್ 9844200579, ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕರ ಮೊಬೈಲ್ ಸಂಖ್ಯೆ 9901313417 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Free sewing machine apply ಉಚಿತವಾಗಿ ಹೊಲಿಗೆಯಂತ್ರ ನೀಡಲು ಅರ್ಜಿ ಆಹ್ವಾನ
ಕಲಬುರಗಿ ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ವತಿಯಿಂದ 2024-25ನೇ ಸಾಲಿಗೆ ಜಿಲ್ಲಾ ವಲಯ ಯೋಜನೆಯಡಿ ಉಚಿತವಾಗಿ ವಿದ್ಯುತ್‌ಚಾಲಿತ ಹೊಲಿಗೆಯಂತ್ರ ಪಡೆಯಲು ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ಪರಿಶಿಷ್ಟ ಪಂಗಡದ ಹೊಲಿಗೆ ವೃತ್ತಿನಿರತ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ (ಗ್ರಾ.ಕೈ) ಉಪನಿರ್ದೇಶಕರು ತಿಳಿಸಿದ್ದಾರೆ.
ಉಚಿತವಾಗಿ ಹೊಲಿಗೆಯಂತ್ರ ಪಡೆಯಲು ಯಾರು ಯಾರು ಅರ್ಜಿ ಸಲ್ಲಿಸಬಹುದು?
ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಮಹಿಳಾ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. (ಅರ್ಜಿ ಸಲ್ಲಿಸುವ ಮೊದಲನೇ ದಿನವಾದ ದಿನಾಂಕ: 06-01-2025 ಕ್ಕೆ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷದೊಳಗಿರಬೇಕು. ಅರ್ಜಿದಾರರು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು.
ಇದನ್ನೂ ಓದಿ : ಜಮೀನಿನ ಮ್ಯಾಪ್ ಮೊಬೈಲ್ ನಲ್ಲಿ ಹೀಗೆ ಪಡೆಯಿರಿ
ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ. ಸರ್ಕಾರದ ಯಾವುದೇ ಯೋಜನೆಯಡಿ ಈಗಾಗಲೇ ಹೊಲಿಗೆಯಂತ್ರವನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ. ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಆಸಕ್ತಿಯುಳ್ಳ ಮಹಿಳೆಯರು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂಬAಧಪಟ್ಟ ಪೂರಕ ದಾಖಲೆಗಳ ಸ್ವಯಂ ದೃಢೀಕೃತ ಪ್ರತಿಗಳನ್ನು ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳಿಗೆ ಅಥವಾ ಕಲಬುರಗಿ ಜಿಲ್ಲಾ ಪಂಚಾಯತ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ (ಗ್ರಾಮೀಣ ಕೈಗಾರಿಕೆ) ಉಪ ನಿರ್ದೇಶಕರ ಕಚೇರಿಯಲ್ಲಿ 2025ರ ಜನವರಿ 18 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ, ಕಮಲಾಪೂರ, ಚಿತ್ತಾಪೂರ, ಕಾಳಗಿ ಹಾಗೂ ಶಹಾಬಾದ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಮೊಬೈಲ್ ಸಂಖ್ಯೆ-8951620063, ಆಳಂದ, ಅಫಜಲಪೂರ, ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳು-9901489919, ಸೇಡಂ ಹಾಗೂ ಚಿಂಚೋಳಿ ಕೈಗಾರಿಕಾ ವಿಸ್ತರಣಾಧಿಕಾರಿಗಳ ಮೊ.ಸಂ.-7259885379 ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ (ಗ್ರಾಮೀಣ ಕೈಗಾರಿಕೆ) ಉಪ ನಿರ್ದೇಶಕರ ಕಚೇರಿಯ ದೂ.ಸಂ.-08472-221784, 295784 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.