ಉಚಿತವಾಗಿ ಹೊಲಿಗೆ ಯಂತ್ರ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Free sewing machine get : ಉಚಿತವಾಗಿ ಹೊಲಿಗೆ ಯಂತ್ರ ಹಾಗೂ ವೃತ್ತಿನಿರತ ಕುಶಲಕರ್ಮಿಗಳಿಗೆ ಧೋಬಿ ಹಾಗೂ ಕ್ಷೌರಿಕ ವೃತ್ತಿಯ ಉಚಿತ ಉಪಕರಣಗಳ್ನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಎಲ್ಲಿ ಸಲ್ಲಿಸಬೇಕು ಹೇಗೆ ಸಲ್ಲಿಸಬೇಕು ಅರ್ಹತೆಗಳೇನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ವೃತ್ತಿನಿರತ ಕುಶಲಕರ್ಮಿಗಳಿಂದ ಉಚಿತ ಉಪಕರಣಗಳು ಹಾಗೂ ಹೊಲಿಗೆ ಯಂತ್ರಗಳನ್ನು ಪಡೆಯಲು ಜಿಲ್ಲಾ ಪಂಚಾಯತ್ ನ ಗ್ರಾಮೀಣ ಕೈಗಾರಿಕಾ ವಿಭಾಗದಿಂದ ಅರ್ಜಿ ಆಹ್ವಾನಿಸಲಾಗಿದೆ.

Free sewing machine get ಯಾರು ಯಾರಿಗೆ ನೀಡಲಾಗುವುದು

2026-27ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಧೋಬಿ ಹಾಗೂ ಕ್ಷೌರಿಕ ವೃತ್ತಿಯ ಉಚಿತ ಉಪಕರಣಗಳನ್ನು ಸಾಮಾನ್ಯ ಸೇರಿದಂತೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ನೀಡಲಾಗುವುದು. ಹಾಗೆಯೇ ಪೋರ್ಟೆಬಲ್ ಫ್ರೀ ಹ್ಯಾಂಡ್ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮಾತ್ರ ವಿತರಿಸಲಾಗುವುದು.

ಈ ಯೋಜನೆಯಡಿ ಸೌಲಭ್ಯ ಪಡೆಯಲು ಜಿಲ್ಲೆಯ ಗ್ರಾಮೀಣ ಭಾಗದ ನಿವಾಸಿಗಳು ಮಾತ್ರ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಜುಲೈ 20 ರ ವೇಳೆಗೆ ಕನಿಷ್ಟ 18 ವರ್ಷ ಪೂರ್ಣಗೊಂಡಿರಬೇಕು. ಹಾಗೂ ಒಂದು ಕುಟುಂಬದಿಂದ ಒಂದು ಅರ್ಜಿಗೆ ಮಾತ್ರ ಅವಕಾಶವಿರುತ್ತದೆ. ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಅರ್ಹ ಅಭ್ಯರ್ಥಿಗಳು ಜುಲೈ 20 ರಿಂದ ಸೆಪ್ಟೆಂಬರ್ 30, ರವರೆಗೆ ಅಧಿಕೃತ ವೆಬ್ಸೈಟ್ ಗಳಾದ

https://kalaburagi.nic.in/

ಅಥವಾ

www.zpkalaburagi.karnataka.gov.in

ಮೂಲಕ ಆನ್ಲೈನ್ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ಗ್ರಾಮೀಣ ಕೈಗಾರಿಕೆ), ಕೈಗಾರಿಕ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ, 1ನೇ ಮಹಡಿ, ಎಂಎಸ್ಕೆ ಮಿಲ್ ರಸ್ತೆ, ಜೇವರ್ಗಿ ಕ್ರಾಸ್ , ಕಲಬುರಗಿ, ಕಚೇರಿ ಅಥವಾ ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಬಹುದು. ಜಿಲ್ಲಾ ಪಂಚಾಯತ್, ಗ್ರಾಮೀಣ  ಕೈಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 21 ರಿಂದ ಕೋಳಿ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜುಲೈ 21 ಹಾಗೂ 22 ರಂದು ಎರಡು ದಿನಗಳ ವೈಜ್ಞಾನಿಕ ಕೋಳಿ ಸಾಕಾಣಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಉಪ ನಿರ್ದೇಶಕರು ತಿಳಿಸಿದ್ದಾರೆ.

ಜಿಲ್ಲೆಯ ರೈತರು ತರಬೇತಿಗೆ ಬರುವಾಗ ತಮ್ಮ ಆಧಾರ್ ಕಾರ್ಡ್ ನಕಲು ಪ್ರತಿ, ಎರಡು ಪಾಸ್ ಪೋರ್ಟ್ ಅಳತೆಯ ಕಲರ್ ಫೋಟೋ ಹಾಗೂ ಜಾತಿ ಪ್ರಮಾಣ ಪತ್ರದ ನಕಲು ಪ್ರತಿ (ಎಸ್.ಸಿ, ಎಸ್.ಟಿ) ದಾಖಲೆಗಳನ್ನು ತರಬೇಕೆಂದು ಅವರು ತಿಳಿಸಿದ್ದಾರೆ.

ಕುರಿ ಸಾಕಾಣಿಕೆ ಫಾಸ್ಟ್ ಫುಡ್ ತರಬೇತಿಗೆ ಅರ್ಜಿ ಆಹ್ವಾನ

ಬಾಗಲಕೋಟೆ ಜಿಲ್ಲೆಯ ಕೆನರಾ ಬ್ಯಾಂಕ್ ಅರ್ಸೆಟ್ ಸಂಸ್ಥೆಯಿಂದ 18 ರಿಂದ 30 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ, ಯುವತಿಯರಿಗಾಗಿ ಆಗಸ್ಟ್ ತಿಂಗಳಲ್ಲಿ ಕುರಿ ಸಾಕಾಣಿಕೆ ಮತ್ತು ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ ರೈತರೇ ನಿಮ್ಮ ಜಮೀನಿನ ಹಳೇ ಪಹಣಿ ಮುಟೇಶನ್ ಹೀಗೆ ಚೆಕ್ ಮಾಡಿ

ಆಸಕ್ತರು ಜುಲೈ 30 ರೊಳಗಾಗಿ ಮೊಬೈಲ್ ನಂಬರ್ 8217236973, 9483485489, 9482188780 ಗೆ ಕರೆ  ಹಾಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಆರ್ಸೆಟ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಕೊನೆಯ ದಿನಾಂಕದವರೆಗೆ ಕಾಯದೆ ಕೂಡಲೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು. ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು

Leave a Comment