free stitching training application : ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಇದೇ ಜೂನ್ 16 ರಿಂದ ಜುಲೈ 16 ರವರೆಗೆ 31 ದಿನಗಳ ಕಾಲ ಉಚಿತವಾಗಿ ಹೊಲಿಗೆ (ಮಹಿಳೆಯರಿಗಾಗಿ) ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ. ಆರ್ಸೆಟ್ ನಿರ್ದೇಶಕರು ತಿಳಿಸಿದ್ದಾರೆ.
free stitching training application ಉಚಿತ ಹೊಲಿಗೆ ತರಬೇತಿ
ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್., ಅಂತ್ಯೋದಯ ರೇಷನ್, ಎಮ್ಜಿಎನ್ಆರ್ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2025ರ ಜೂನ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ ಇದೇ ಜೂನ್ 15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಇದನ್ನೂ ಓದಿ ನಿಮ್ಮ ಜಮೀನಿನ 20 ವರ್ಷ ಹಳೆಯ ಪಹಣಿ ಮೊಬೈಲ್ ನಲ್ಲೇ ಚೆಕ್ ಮಾಡಿ
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9448994585, 9886781239 ಹಾಗೂ 9900135705ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕಲಬುರಗಿ,ಜೂ.09.(ಕ.ವಾ.)-ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಈ ಕೆಳಕಂಡ ವಿವಿಧ ಯೋಜನೆಗಳಡಿ ಸಹಾಯಧನ/ ಸಾಲ-ಸೌಲಭ್ಯವನ್ನು ಪಡೆಯಲು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್ದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ (ಈ ಯೋಜನೆಯಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು), ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆಗಳಡಿ ಅರ್ಹ ಫಲಾನುಭವಿಗಳು ಕಲಬುರಗಿ-ಒನ್/ಕರ್ನಾಟಕ-ಒನ್/ಅಟಲ್-ಜಿಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದೇ ರೀತಿ ಸ್ವಾತಂತ್ರö್ಯ ಅಮೃತ ಮುನ್ನಡೆ ಯೋಜನೆಯಡಿ ಅರ್ಜಿಯನ್ನು
https://www.kaushalkar.com/
ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ 2025ರ ಜುಲೈ 2 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿಗಮದ
https://kvcdcl.karnataka.gov.in/
ವೆಬ್ಸೈಟ್ನ್ನು ಅಥವಾ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 080-22374848/ 7899899039 ಗಳಿಗೆ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ, 2ನೇ ಮಹಡಿ, ಸಿಟಿ ಸ್ಕೆ÷್ವರ್ ಬೀಲ್ಡಿಂಗ್, ಬಡೇಪೂರ 3ನೇ ಕ್ರಾಸ್, ವೀರಶೈವ ಕಲ್ಯಾಣ ಮಂಟಪದ ಎದುರುಗಡೆ, ಖರ್ಗೆ ಪೆಟ್ರೋಲ್ ಬಂಕ್ ಹತ್ತಿರ, ಕಲಬುರಗಿ-585105 ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278635 (ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಸಂಪರ್ಕಿಸಲು ಕೋರಲಾಗಿದೆ.
ಈಗಲೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಲು ಕೋರಲಾಗಿದೆ.