ಕೃಷಿ ಸಚಿವ ಬಿ.ಸಿ. ಪಾಟೀಲ್ ತಮ್ಮ ಕ್ಷೇತ್ರದ ಕೊರೋನಾ ಸೋಂಕಿತರ ನೆರವಿಗೆ ಮುಂದಾಗಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರುವ ಹಿರೇಕೆರೂರ ಕ್ಷೇತ್ರದ ಸೋಂಕಿತರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಅವರ ಖರ್ಚು ಭರಿಸುವುದಾಗಿ (free treatment ) ಭರವಸೆ ನೀಡಿದ್ದಾರೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕು ಕ್ಷೇತ್ರದ ಬಿಪಿಎಲ್ ಕಾರ್ಡ್ ಹೊಂದಿದವರು ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ ಪಡೆಯಲು ಮುಂದಾದರೆ ಅಂತವರು ಚಿಕಿತ್ಸೆ ಪಡೆದ ಬಳಿಕ ಗುರುತಿನ ಚೀಟಿ, ಬಿಪಿಎಲ್ ಕಾರ್ಡ್ ಹಾಗೂ ಆಸ್ಪತ್ರೆ ಬಿಲ್ ನೀಡಿದರೆ ವೆಚ್ಚ ಭರಿಸುತ್ತೇನೆ ಎಂದು ಹೇಳಿದ್ದಾರೆ.
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದರಿಂದ ಬಡವರು ಚಿಕಿತ್ಸೆ ಪಡೆಯದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಲಾಕ್‌ಡೌನ್ ಘೋಷಣೆ ಮಾಡಲಾಗಿದ್ದು, ಇದರಿಂದ ದಿನಗೂಲಿ ಕಾರ್ಮಿಕರು, ಬಡವರು ತೀವ್ರ ಸಮಸ್ಯೆ ಎದುರಿಸಲಿದ್ದಾರೆ.
ಹೌದು, ಹಾವೇರಿ ಜಿಲ್ಲೆಯ ಹಿರೇಕೇರೂರ ಮತ್ತು ರಟ್ಟಿಹಳ್ಳಿ ತಾಲೂಕು ಕ್ಷೇತ್ರದ ಬಿಪಿಎಲ್ ಕಾರ್ಡ್ ಹೊಂದಿರುವ ಬಡವರು ಕೋವಿಡ್-19 ಸೋಂಕಿತರಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಮುಂದಾದರೆ ಅಂತವರಿಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಅವರು ಘೋಷಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಮಹಾಮಾರಿ ಕೊರೊನಾ ವಿಶ್ವವ್ಯಾಪಿಯಾಗಿ ಹೆಚ್ಚು ಸೋಂಕು ಹರಡುತ್ತಿದೆ. ಸರ್ಕಾರ ಕೂಡ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಜನರು ಸಹ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡಬೇಕು.
ಸರ್ಕಾರ ಸಹ ಎಲ್ಲ ರೀತಿಯ ಕ್ರಮ ಕೈಗೊಳ್ಳಲು ಮುಂದಾಗಿದೆ. ಆದರೂ ಸಹ ಬಡವರು ಸೂಕ್ತ ಚಿಕಿತ್ಸೆಯಿಂದ ವಂಚಿತರಾಗಬಾರದು ಎಂದು ತಾವು ಈ ಸಹಾಯಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.