ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಇಂದಿನಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಾಂತ ಗುರುವಾರ ಗುಡುಗು ಸಹಿತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹೌದು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಹಾಸನ, ರಾಮನಗರ, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಯಾದಗರಿ, ರಾಯಚೂರು ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡ ಒಳನಾಡಿನ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಒಂದೆರಡು ಕಡೆ ಬಿರುಗಾಳಿಯ ವೇಗವೂ ಪ್ರತಿ ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಯಂಕಾಲ ಅಥವಾ ರಾತ್ರಿಯ ಅವಧಿಯಲ್ಲಿ ಸಾಧಾರಣ ಮಳೆಯಾಗಲಿದೆ. ಶುಕ್ರವಾರದಿಂದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೋಚಾ ಚಂಡಮಾರುತ ಒಡಿಸ್ಸಾ ಅಥವಾ ಪಶ್ಚಿಮ ಬಂಗಾಳ ತೀರ ಪ್ರವೇಶಿಸುವ ಸಾಧ್ಯತೆಯಿಲ್ಲ. ಚಂಡಮಾರುತ ತೀವ್ರಗೊಂಡರೂ ಅದು ಮ್ಯಾನ್ಮಾರ್ ಹಾಗೂ ಬಾಂಗ್ಲಾದೇಶದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಗುರುವಾರ ಓಡಿಸ್ಸಾ ಅಥವಾ ಪಶ್ಚಿಮ ಬಂಗಾಳಕ್ಕೆ ಚಂಡಮಾರು ಅಪ್ಪಳಿಸುವ ಸಾಧ್ಯತೆಯಿದೆ. ಇದರಿಂದಾಗಿ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ : ಈ ಲಿಸ್ಟ್ ನಲ್ಲಿರುವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ ಇಲ್ಲೇ ಚೆಕ್ ಮಾಡಿ
ಬುಧವಾರ ಬೆಳಗ್ಗೆ 8.30 ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಯ ಅವಧಿಯಲ್ಲಿ ಹಾವೇರಿಯ ರಾಣೆಬೆನ್ನೂರಿನಲ್ಲಿ5 ಸೆಂ. ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಕಲಬುರಗಿ ಜಿಲ್ಲೆಯ ಆಳಂದ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು, ಶಿವನಿ, ನರಸಿಂಹರಾಜಪುರ, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ, ಶಿವಮೊಗ್ಗ ಜಿಲ್ಲೆಯ ಹಂಚದಕಟ್ಟೆ, ಮೈಸೂರು ಜಿಲ್ಲೆಯ ಟಿ. ನರಸಿಪುರದಲ್ಲಿ 4 ಸೆಂ. ಮೀಟ ಮಳೆಯಾಗಿದೆ.
ಮಳೆಯ ಮಾಹಿತಿ ಮೊಬೈಲ್ ನಲ್ಲೇ ಪಡೆಯಿರಿ
ಸಾರ್ವಜನಿಕರು ಮಳೆಯ ಮಾಹಿತಿಯನ್ನು ಒಂದೇ ನಿಮಿಷದಲ್ಲಿ ಪಡೆಯಬಹುದು. ಹೌದು, ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ಮಳೆಯ ಮಾಹಿತಿಯನ್ನು ಪಡೆಯಬಹುದು. 9243345433 ಸಹಾಯವಾಣಿ ನಂಬರಿಕೆ ಕರೆ ಮಾಡಿ ಮುಂದಿನ ಯಾವ ದಿನ ನಿಮ್ಮೂರಿನಲ್ಲಿ ಮಳೆಯಾಗುತ್ತದೆ ಎಂಬುದರ ಮಾಹಿತಿಯನ್ನು ಮೊಬೈಲ್ ನಲ್ಲೇ ಪಡೆಯಬಹುದು.
ಇದರೊಂದಿಗೆ ಸಾರ್ವಜನಿಕರುಗುಡುಗು ಸಿಡಿಲಿನ ಮಾಹಿತಿಯನ್ನು ಸಹ ಪಡೆಯಬುದು. ಸಿಡುವ ಬೀಳುವ ಐದು ನಿಮಿಷ ಮೊದಲೇ ಮೊಬೈಲಿಗೆ ಸಂದೇಶ ಬರಲಿದೆ. ಹೌದು, ದಾಮಿನಿ ಅಥವಾ ಸಿಡಿಲು ಈ ಆ್ಯಪ್ ಗಳು ನಿಮ್ಮ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಸಿಡಿಲು ಬೀಳುವ ಮೊದಲೇ ನೀವು ಮಾಹಿತಿಯನ್ನು ಪಡೆದು ಸಿಡಿಲಿನಿಂದ ತಪ್ಪಿಸಿಕೊಳ್ಳಬಹುದು.