ಇಂದಿನಿಂದ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲಿದೆ ಮಾಹಿತಿ

Written by Ramlinganna

Published on:

From today onwards rain : ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಇಂದಿನಿಂದ ಮತ್ತೆ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು,  ಉಡುಪಿ, ಹಾಸನ, ದಕ್ಷಿಣ ಕನ್ನಡ, ಮೈಸೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆ ಬಿರುಗಾಳಿ ಸಹಿತ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 14 ರವರೆಗೆ ಮುಂಗಾರು ಅಬ್ಬರ ಜೋರಾಗು ಲಕ್ಷಣವಿದೆ. ಜೂನ್ 14 ರವರೆಗೆ ರಾಜ್ಯದ ಹಲವು ಕಡೆ ಸಾಧಾರಣ ಹಾಗೂ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಅಲ್ಲಲ್ಲಿ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

From today onwards rain  ಇಂದು ಎಲ್ಲೆಲ್ಲಿ ಮಳೆಯಾಗಲಿದೆ ?

ಉಡುಪಿ, ಬಳ್ಳಾರಿ, ವಿಜಯನಗರ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರು, ಬೆಂಗಳೂರು , ಮೈಂಸೂರು, ಚಿತ್ರದುರ್ಗ, ದಾವಣಗೆರೆ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಜೂನ್ 12 ರಂದು ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಉಡುಪಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಡರುಕತ ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಆರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಜೂನ್ 13 ರಂದು ಎಲ್ಲೆಲ್ಲಿ ಮಳೆಯಾಗಲಿದೆ

ಜೂನ್ 12 ರಂದು ಕರಾವಳಿ ಜಿಲ್ಲೆಗಳಾದ್ಯಂತೆ ಮಳೆಯಾಗುವ ಸಾಧ್ಯತೆಯಿದೆ. ಹಾಗಾಗೇ ಆರೇಂಜ್ ಅಲರ್ಟ್ ಎಚ್ಚರಿಕೆ ನೀಲಾಗಿದೆ.

ಗದಗ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೋಲಾರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಹಾಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ಹನಿ ನೀರಾವರಿ ಘಟಕ ನಿರ್ಮಾಣಕ್ಕೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ  ಪಡೆಯಬಹುದು.

Leave a Comment