ಬೆಳೆಹಾನಿ ಪರಿಹಾರಕ್ಕೆ ಫ್ರೂಟ್ಸ್ ಐಡಿ ಕಡ್ಡಾಯ

Written by Ramlinganna

Updated on:

Fruits id is mandatory : ರೈತರು ಬೆಳೆ ಹಾನಿ ಪರಿಹಾರ ಪಡೆಯಲು ಫ್ರೂಟ್ಸ್ ಐಡಿ ಇರುವುದು ಕಡ್ಡಾಯವಾಗಿದೆ. ರೈತರು ತಮ್ಮ ಫ್ರೂಟ್ಸ್ ಐಡಿ ಇದೆಯೋ ಇಲ್ಲವೋ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ರೈತರು ತಮ್ಮ ಬಳಿಯಿರುವ ಮೊಬೈಲ್ ನಿಂದಲೇ ಮನೆಯಲ್ಲಿ ಕುಳಿತು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಲು ರೈತರು ಫ್ರೂಟ್ಸ್ ಐಡಿಯನ್ನು ಹೊಂದಿರುವುದರ ಜೊತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲಾ ಸರ್ವೆ ನಂಬರ್ ಗಳನ್ನು ಫ್ರೂಟ್ಸ್ ಐಡಿಗೆ ಸೇರಿಸಿಕೊಳ್ಳುವುದು ಕಡ್ಡಾಯವಾಗಿದೆ.

ಫ್ರೂಟ್ಸ್ ಐಡಿ ಹೊಂದಿರುವ ರೈತರು ಆಧಾರ್ ಕಾರ್ಡ್ ಹಾಗೂ ಉತಾರ (ಪಹಣಿ) ದಾಖಲಾತಿಗಳೊಂದಿಗೆ ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತುರ್ತಾಗಿ ಬಾಕಿಯಿರುವ ಸರ್ವೆ ನಂಬರ್ ಗಳನ್ನು ಸೇರಿಸಿಕೊಳ್ಳಬೇಕು. ಇಲ್ಲವಾದಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಸಿಗುವುದಿಲ್ಲ. ಹಾಗಾಗಿ ರೈತರು ಫ್ರೂಟ್ಸ್ ಐಡಿ ಹೊಂದಿರುವುದರ ಜೊತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲಾ ಸರ್ವೆ ನಂಬರ್ ಗಳನ್ನು ಫ್ರೂಟ್ಸ್ ಐಡಿ ಸೇರಿಸಿಕೊಳ್ಳಲು ಕೋರಲಾಗಿದೆ. ಇದಲ್ಲದೆ ಫ್ರೂಟ್ಸ್ ಐಡಿ ಹೊಂದಿರದ ರೈತರು ಎಲ್ಲಾ ದಾಖಲಾತಿಗಳೊಂದಿಗೆ ಫ್ರೂಟ್ಸ್ ಐಡಿ ಮಾಡಿಕೊಳ್ಳಲು ಕೋರಲಾಗಿದೆ.

Fruits id is mandatory ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದೆಯೋ ಇಲ್ಲವೋ ? ಚೆಕ್ ಮಾಡಿ

ರೈತರು ತಮ್ಮ ಹೆಸರಿಗೆ ಪ್ರೂಟ್ಸ್ ಐಡಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಫ್ರೂಟ್ಸ್ ಪಿಎಂ ಕಿಸಾನ್ ಪೇಜ್ ತೆರೆದುಕೊಳ್ಳುತ್ತದೆ. ನಂತರ Find the details ಕೆಳಗಡೆ ನಿಮ್ಮ ಆಧಾರ್ ಕಾರ್ಡ್ ನ್ನು ನಮೂದಿಸಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ಕಾಣಿಸುತ್ತದೆ. ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇಲ್ಲದಿದ್ದರೆ ಫ್ರೂಟ್ಸ್ ಐಡಿ ಪೇಜ್ ಓಪನ್ ಆಗುವುದಿಲ್ಲ.

ಫ್ರೂಟ್ಸ್ ತಂತ್ರಾಂಶದಲ್ಲಿ ಕೂಡಲೇ ಭೂ ವಿವರ ನೋಂದಾಯಿಸಿ

ರೈತರು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ಭೂ ವಿವರಗಳನ್ನು ನೋಂದಾಯಿಸಿಕೊಳ್ಳಬೇಕು. ಹೌದು, ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದ ನೋಂದಣಿಯು ಕಡ್ಡಾಯವಾಗಿದೆ. ಕೂಡಲೇ ರೈತರು ತಮ್ಮಮಾಲಿಕತ್ವಕ್ಕೆ ಒಳಪಡುವ ಎಲ್ಲಾ ಸರ್ವೆ ನಂಬರ್ ಗಳನ್ನು ಸಂಬಂಧಪಟ್ಟ ದಾಖಲಾತಿಯೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿ ಮಾಡುವಂತೆ ಕೋರಲಾಗಿದೆ.

ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ವೈಯಕ್ತಿಕ ಮಾಹಿತಿ, ಜಮೀನಿನ, ಬೆಳೆಯ ವಿವರ ಹಾಗೂ ಈ ಹಿಂದೆ ಸರ್ಕಾರದಿಂದ ಪಡೆದ ಎಲ್ಲಾ ಇಲಾಖೆಗಳ ಸವಲತ್ತಿನ ವಿವರ  ಒಳಗೊಂಡಿರುತ್ತದೆ.

ಇದನ್ನೂ ಓದಿ ಗೃಹಲಕ್ಷ್ಮೀ ಯೋಜನೆಯ ಎರಡನೇ ಕಂತಿನ ಹಣ ಬಿಡುಗಡೆ- ಯಾರಿಗೆ ಜಮೆ? ಇಲ್ಲೇ ಚೆಕ್ ಮಾಡಿ

ರೈತರು ಸರ್ಕಾರದ ಯಾವುದೇ ಇಲಾಖೆಯಲ್ಲಿ ಸವಲತ್ತು ಪಡೆಯಲು ಪ್ರತಿ ಸಲ ದಾಖಲಾತಿ ನೀಡುವ ಅವಶ್ಯಕತೆ ಇರುವುದಿಲ್ಲ. ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಹಾಗೂ ಬೆಳೆ ವಿಮೆ, ರೇಷ್ಮೆ ಇಲಾಖೆಯಿಂದ ಫ್ರೂಟ್ಸ್ ನೋಂದಾಯಿತ ರೈತರಿಗೆ ಸವಲತ್ತು ನೀಡಲಾಗುತ್ತಿದೆ. ಪಶು ಸಂಗೋಪನೆ ಇಲಾಖೆಯಿಂದ ಪಶುಭಾಗ್ಯ, ಕೆಎಂಎಫ್ ಪ್ರೋತ್ಸಾಹಧನ, ಸಹಕಾರ ಇಲಾಖೆಯಿಂದ ಬೆಂಬಲ ಬೆಲ ಯೋಜನೆ ಹಾಗೂ ಕಂದಾಯ ಇಲಾಖೆಯಿಂದ ಬೆಳೆ ನಾಶ , ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳನ್ನು ಫ್ರೂಟ್ಸ್ ತಂತ್ರಾಂಶದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

 

Leave a Comment