ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ

Written by Ramlinganna

Published on:

Ganga kalyan yojana subsidy :  ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಉಚಿತವಾಗಿ ಬೋರ್ವೆಲ್ ಕೊರೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಯಾವ ಯಾವ ರೈತರು ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಹತೆಗಳೇನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಗಂಗಾ ಕಲ್ಯಾಣ ಯೋಜನೆಯಡಿ 1½ ಎಕರೆಯಿಂದ 5.00 ಎಕರೆ ಜಮೀನು ಹೊಂದಿರುವ ಪರಿಶಿಷ್ಟ ಜಾತಿಯ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿ, ಪಂಪ್ ಸೆಟ್ ಅಳವಡಿಸಿ ವಿದ್ಯುದ್ಧೀಕರಣಗೊಳಿಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು(ಗ್ರಾ), ಬೆಂಗಳೂರು(ನಗರ), ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕೆಳಗೆ ಕುಸಿದಿರುವುದರಿಂದ ಈ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.4.75 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ಇದರಲ್ಲಿ ರೂ.4.25 ಲಕ್ಷ ಸಹಾಯಧನವಿದ್ದು, ಉಳಿದ ರೂ.50,000/- ಅವಧಿಸಾಲವಾಗಿರುತ್ತದೆ. ಇತರೆ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.3.75 ಲಕ್ಷ ನಿಗದಿಪಡಿಸಿದ್ದು, ಇದರಲ್ಲಿ ರೂ.3.25 ಲಕ್ಷ ಸಹಾಯಧನ ಮತ್ತು ರೂ.50,000/- ಅವಧಿಸಾಲವಾಗಿರುತ್ತದೆ. ಘಟಕ ವೆಚ್ಚದ ಪೈಕಿ ವಿದ್ಯುದ್ದೀಕರಣಕ್ಕೆ ಘಟಕ ವೆಚ್ಚದ ಸಹಾಯಧನದ ಮಿತಿಯಲ್ಲಿ ಪ್ರತಿ ಕೊಳವೆಬಾವಿಗೆ ರೂ.75,000/-ಗಳನ್ನು ಸಂಬಂಧಿಸಿದ ಎಸ್ಕಾಂಗಳಿಗೆ ಬಿಡುಗಡೆ ಮಾಡಲಾಗುವುದು.

Ganga kalyan yojana subsidy ಯಾವ ಯಾವ ಯೋಜನೆಗಳಡಿ ಅರ್ಜಿ ಆಹ್ವಾನ

ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಮುದಾಯದ ಫಲಾನುಪೇಕ್ಷಿಗಳಿಗೆ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ  ನೇರಸಾಲ ಯೋಜನೆ, ಕುರಿ ಸಾಕಾಣಿಕೆ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ (ಸ್ವಾವಲಂಬಿ ಸಾರಥಿ ಮತ್ತು ಪುಡ್ ಕಾರ್ಟ್-ಮೊಬೈಲ್ ಕಿಚನ್ ಉದ್ದೇಶಕ್ಕಾಗಿ, ಹೈನುಗಾರಿಕೆ,  ವ್ಯಾಪಾರ ಮತ್ತು ಇನ್ನಿತರ ಉದ್ದೇಶಕ್ಕಾಗಿ),  ಮೈಕ್ರೋ ಕ್ರೆಡಿಟ್ ಕಿರುಸಾಲ ಯೋಜನೆ, ಗಂಗಾ ಕಲ್ಯಾಣ ಹಾಗೂ  ಭೂ ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ ನಿಮ್ಮ ಜಮೀನು ಯಾರ ಯಾರ ಹೆಸರಿನೊಂದಿಗೆ ಜಂಟಿಯಲ್ಲಿದೆ? ಇಲ್ಲೇ ಚೆಕ್ ಮಾಡಿ

ಈ ಹಿಂದಿನ ಸಾಲಿನಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅರ್ಹ ಫಲಾನುಭಿಗಳು ಕರ್ನಾಟಕ ಒನ್/ಗ್ರಾಮ ಒನ್/ಸೇವಾ ಸಿಂಧು ಪೋರ್ಟಲ್‌ದಲ್ಲಿ ಆನ್‌ಲೈನ್ ಮೂಲಕ 2025ರ ಸೆಪ್ಟೆಂಬರ್ 10 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಲು ಕೋರಲಾಗಿದೆ.

 

Leave a Comment