Ganga kalyana borewell subsidy : ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದಕ್ಕಾಗಿ ಕೊಳವೆ ಬಾವಿಗೆ 4 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಮಗ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸೇರಿದಂತೆ ಇನ್ನಿತರ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ನಿರುದ್ಯೋಗಿಗಳು ಆಗಸ್ಟ್ 31 ರೊಳಗಗಾಗಿ ಸೇವಾ ಸಿಂಧು ತಂತ್ರಾಂಶದ ಮೂಲಕ ಆನ್ನಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲಿಚ್ಚಿಸುವ ಫಲಾನುಭವಿಗಳಿಗೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕದ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರುಜಿಲ್ಲೆಗಳಿಗೆ 4.75 ಲಕ್ಷ ರೂಪಾಯಿ ಇರುತ್ತದೆ. ಇದರಲ್ಲಿ ವಿದ್ಯುದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 75 ಸಾವಿರ ರೂಪಾಯಿಯನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು.
ಇನ್ನುಳಿದ ಜಿಲ್ಲೆಗಳಿಗೆ 3.75 ಲಕ್ಷ ರೂಪಾಯಿ ನೀಡಲಾಗುವುದು. ಇದರಲ್ಲಿ ವಿದ್ಯುದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 75 ಸಾವಿರ ರೂಪಾಯಿ ಎಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ವೆಚ್ಚ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50 ಸಾವಿರ ರೂಪಾಯಿ ಸಾಲವನ್ನು ಶೇ. 4 ರ ಬಡ್ಡಿ ದರದಲ್ಲಿಮಂಜೂರು ಮಾಡಲಾಗುವುದು.
ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂಹಾಸ ಜಿಲ್ಲೆಗಳಿಗೆ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಿಗೆ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.
Ganga kalyana borewell subsidy ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರಿರುತ್ತಾರೆ?
ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗಲ್ಲ, ಮರಾಠ ಹಾಗೂ ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ -1 , 2ಎ, 3ಎ, ಮತ್ತು 3 ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.
ಇದನ್ನೂ ಓದಿ : ನಿಮ್ಮ ಜಮೀನಿನ ಟಿಪ್ಪಣಿ, ಮೂಲ ಸರ್ವೆ ಪ್ರತಿ ಇಲ್ಲೇ ಚೆಕ್ ಮಾಡಿ
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, ಶ್ರೀ, ಶ್ರೀಮತಿ, ಕುಮಾರು ಮುಂತಾದ ಮಾಹಿತಿಗಳೆಲ್ಲವು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೆ ಇರುವ ಫಲಾಫೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿ ಎಲ್ಲಿ ಸಲ್ಲಿಸಬೇಕು?
ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯಲಿಚ್ಚಿಸುವ ರೈತರು ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in
ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ.