ಗಂಗಾ ಕಲ್ಯಾಣ ಯೋಜನೆ ಬೋರ್ವೆಲ್ ಕೊರೆಯಲು 3.50 ಲಕ್ಷ ರೂಪಾಯಿ ಸಬ್ಸಿಡಿ

Written by Ramlinganna

Published on:

Ganga Kalyana scheme subsidy get : ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿ (ಬೋರ್ವೆಲ್ ಕೊರೆಯಲು)  3 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ರೈತರು ತಮ್ಮ ಜಮೀನಿನಲ್ಲಿ ನೀರಾವರಿ ಸೌಲಭ್ಯ ಮಾಡಿಕೊಳ್ಳುವುದಕ್ಕಾಗಿ ರಾಜ್ಯ ಸರ್ಕಾರವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರೆಯಲು ಸಬ್ಸಿಡಿ ಮತ್ತು ಸಾಲ ಸೌಲಭ್ಯ ನೀಡಲಿದೆ.

1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದೀಕರಣದೊಂದಿಗೆ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು.

Ganga Kalyana scheme subsidy get ಘಟಕ ವೆಚ್ಚ ಎಷ್ಟಿರುತ್ತದೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಿಗೆ 4.75 ಲಕ್ಷ ರೂಪಾಯಿ ಹಾಗೂ ಬಾಕಿ ಉಳಿದ ಜಿಲ್ಲೆಗಳಿಗೆ 3.75 ಲಕ್ಷ ರೂಪಾಯಿ ನೀಡಲಾಗುವುದು. ಇದರಲ್ಲಿ 50 ಸಾವಿರ ರೂಪಾಯಿ ಸಾಲವೂ ಸೇರಿರುತ್ತದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ.

ಯಾವ ಯಾವ ನಿಗಮಗಳಿಂದ ಅರ್ಜಿ ಆಹ್ವಾನ

ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ ಸಹಯೋಗದೊಂದಿಗೆ) ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ರೈತರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಸೇವಾ ಸಿಂಧು ವೆಬ್ಸೈಟ್ ಮೂಲಕ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

https://sevaone.karnataka.gov.in/services

ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

ರೈತರ ಹೆಸರಿಗೆ ಜಮೀನು ಇರಬೇಕು. ಪಹಣಿ ಹೊಂದಿರಬೇಕು.  ಈ ಹಿಂದೆ ಸೌಲಭ್ಯ ಪಡೆದಿರಬಾರದು. ಅರ್ಜಿ ಸಲ್ಲಿಸಲು ಭಾವಚಿತ್ರ ಬೇಕು. ಜಾತಿ ಪತ್ರ (ಆರ್.ಡಿ ಸಂಖ್ಯೆ ಹೊಂದಿರಬೇಕು), ಆದಾಯ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು), ಆಧಾರ್ ಕಾರ್ಡ್ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು.

ಇದನ್ನೂ ಓದಿ : ನಿಮ್ಮ ಜಮೀನಿನ ಇ ಸ್ವತ್ತು ಮೊಬೈಲ್ ನಲ್ಲಿ ಈಗೆ ಚೆಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಚೇರಿ ಅಥವಾ ನಿಗಮಗಳ ವೆಬ್ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ, ಎಸ್.ಟಿ ಸಹಾಯವಾಣಿ 9482300400 ಗೆ ಸಂಪರ್ಕಿಸಬಹುದು.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಹರಿಯುವ ನದಿ, ತೊರೆ, ನಾಲಾ ಹಳ್ಳಕೊಳ್ಳದಿಂದ ಪಿವಿಸಿ ಪೈಪ್ ಗಳ ಮುಖಾಂತಹ 10ಹೆಚ್ ಪಿ ಪಂಪ್ ಸೆಟ್ ಮುಖೇನ ಪರಿಶಿಷ್ಟ ಜಾತಿಯ ಸಣ್ಣ ಮತ್ತು ಅತೀ ಸಣ್ಣ ರೈತರುಗಳ ಖುಷ್ಟಿ ಜಮೀನುಗಳಿಗೆ ನೀರನ್ನು ಹಾಯಿಸಿ ನೀರಾವರಿ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಸದರಿ ಯೋಜನೆಯಡಿ ಕನಿಷ್ಟ 3 ಅಥವಾ 4 ಫಲಾನುಭವಿಗಳು ಒಳಗೊಂಡಂತೆ ಕನಿಷ್ಟ 8 ಎಕರೆಗಳಿಂದ ಗರಿಷ್ಠ 15 ಎಕರೆವರೆಗಿನ ಘಟಕಕ್ಕೆ ವಿದ್ಯುತ್ ಸಂಪರ್ಕ ಮತ್ತು ನಿರ್ವಹಣೆ ತಗಲುವ ವೆಚ್ಚವನ್ನು ಸೇರಿದಂತೆ  ಒಟ್ಘು ಘಟಕ ವೆಚ್ಚ 5 ಲಕ್ಷಗಳಾಗಿರುತ್ತವೆ.

Leave a Comment