ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಬೋರ್ವೆಲ್ ಕೊರೆಯಲು ಪರಿಶಿಷ್ಚ ಜಾತಿಯ ಬಂಜಾರ/ ಲಂಬಾಣಿ ಸಮುದಾಯದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಯಲು ಅರ್ಜಿ ಆಹ್ವಾನಿಸಲಾಗಿದೆ.  ಸೆಪ್ಟೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಈ ಯೋಜನೆಯಡಿಯಲ್ಲಿ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆದು ಪಂಪ್ ಸೆಟ್ ಹಾಗೂ ಇತರ ಪೂರಕ ಸಾಮಗ್ರಿಗಳನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಘಟಕದ ವೆಚ್ಚ 3.5 ಲಕ್ಷ ರೂಪಾಯಿ ಆಗಿದ್ದು, 3 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. 50 ಸಾವಿರ ರೂಪಾಯಿಯವರೆಗೆ ಸಾಲಸೌಲಭ್ಯವೂ ಇರತ್ತದೆ. 3 ಲಕ್ಷ ರೂಪಾಯಿಯ ಸಹಾಯಧನದಲ್ಲಿ 50 ಸಾವಿರ ರೂಪಾಯಿ ವಿದ್ಯುದ್ದೀಕಾರಣ ಬಾಬ್ತು ಒಳಗೊಂಡಿರುತ್ತದೆ. ನಿಗಮವು ನೀಡುವ ಸಾಲಕ್ಕೆ ವಾರ್ಷಿಕ ಶೇ. 6 ರಷ್ಟು ಬಡ್ಡಿ ಇದೆ. ಇದನ್ನು 6 ವರ್ಷಗಳಲ್ಲಿ ಅರ್ಧ ವಾರ್ಷಿಕ ಕಂತುಗಳಲ್ಲಿ ಮರುಪಾವತಿ ಮಾಡಬೇಕಾಗುತ್ತದೆ.

ಅಂತರ್ಜಾಲಮಟ್ಟ ಕುಸಿದಿರುವ ಜಿಲ್ಲೆಗಳಾದ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಿಗೆ ಘಟಕ ವೆಚ್ಚವನ್ನು 4.5 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ. 50 ಸಾವಿರ ರೂಪಾಯಿ ಸಾಲ ಒಳಗೊಂಡಿರುತ್ತದೆ. ಮೇಲೆ ತಿಳಿಸಿದ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳಿಗೆ 3.5 ಲಕ್ಷ ರೂಪಾಯಿ ಘಟಕದ ವೆಚ್ಚ ನಿಗದಿಪಡಿಸಲಾಗಿದೆ.

ಆಸಕ್ತ ರೈತರು ರೈತರು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಕೋರಲಾಗಿದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಯಸುವ ಆಸಕ್ತ ರೈತರು

http://ktdcl.in/web4/online/onlineapp.php ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತಾಂಡಾ ಅಭಿವೃದ್ಧಿ ನಿಗಮದ ಪೇಜ್ ಓಪನ್ ಆಗುತ್ತದೆ ಅಲ್ಲಿ ಗಂಗಾ ಕಲ್ಯಾಣ ಯೋಜನೆ ಮೇಲೆ ಕ್ಲಿಕ್ ಮಾಡಬೇಕು. ಆಗ ಗಂಗಾ ಕಲ್ಯಾಣ ಯೋಜನೆ ಪೇಜ್ ತೆರೆಯಲ್ಪಡುತ್ತದೆ.ಅಥವಾ http://ktdcl.in/web4/ganga.php  ಈ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಗಂಗಾ ಕಲ್ಯಾಣ ಪೇಜ್ ಓಪನ್ ಆಗುತ್ತದೆ. ಅಲ್ಲಿ ಎಲ್ಲಾ ಮಾಹಿತಿ ನೀಡಲಾಗಿರುತ್ತದೆ. ಎಲ್ಲಾ ಮಾಹಿತಿಗಳನ್ನು ಓದಿಕೊಳ್ಳಬೇಕು.  ಹೆಸರು, ತಂದೆಯ ಹೆಸರು, ಮೊಬೈಲ್ ನಂಬರ್, ವಿದ್ಯಾರ್ಹತೆ, ಪೂರ್ಣ ವಿಳಾಸ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ,  ಸೇರಿದಂತೆ ಇನ್ನಿತರ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸು ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: ಗಂಗಾ ಕಲ್ಯಾ ಯೋಜನೆ (Ganga Kalyan Scheme) ಯಡಿ ಫಲಾನುಭವಿಗಳ ಆಯ್ಕೆ ಹೇಗೆ ಮಾಡುತ್ತಾರೆ ನಿಮಗೆ ಗೊತ್ತೇ..? ಇಲ್ಲಿದೆ ಸಂಪೂರ್ಣ ಮಾಹಿತಿ

ಈಗಾಗಲೇ ಗಂಗಾ ಕಲ್ಯಾಣ ಯೋಜನೆಡಯಲ್ಲಿ ಸೌಲಭ್ಯ ಪಡೆದವರು ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ  ಮಾಹಿತಿಗಾಗಿ ನಿಮ್ಮ ಜಿಲ್ಲೆಯ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮರವರನ್ನು ಸಂಪರ್ಕಿಸಬಹುದು.

ಅರ್ಹತೆ:

ಅರ್ಜಿದಾರರು ಪರಿಶಿಷ್ಟ ಜಾತಿಯಲ್ಲಿ ಬರುವ ಬಂಜಾರಾ/ಲಂಬಾಣಿ ಜಾತಿಗೆ ಸೇರಿದವರಾಗಿರಬೇಕು.ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.ಅರ್ಜಿದಾರರು 21 ವರ್ಷ ಮೇಲ್ಪಟ್ಟ ವಯೋಮಾನದವರಾಗಿರಬೇಕು. ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಅರ್ಹರಿರುವುದಿಲ್ಲ.

ನಿಯಮಗಳು:

ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ. 1,50,000/- ಹಾಗೂ ನಗರ ಪ್ರದೇಶದಲ್ಲಿ ರೂ.2,00,000/- ಮಿತಿಯೊಳಗಿರಬೇಕು.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇತ್ತೀಚಿನ ಭಾವಚಿತ್ರ ಹೊಂದಿರಬೇಕು. ಜಾತಿ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು). ಆದಾಯ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು). ಹೊಂದಿರಬೇಕು. ಪಹಣಿ (ಆರ್.ಟಿ.ಸಿ), ಆಧಾರ್ ಕಾರ್ಡ್ ಹೊಂದಿರಬೇಕು. ರೇಷನ್ ಕಾರ್ಡ್ ಇರಬೇಕು.ಒಂದು ಬಿಳಿ ಪೇಜ್ ಮೇಲೆ ಸಹಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

ಲೇಖನ: ರಾಮಲಿಂಗ್ ಬಾಣ್ಣೋತ್, ಮೊಬೈಲ್ ನಂಬರ್ 9731491393

Leave a Reply

Your email address will not be published. Required fields are marked *