ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಇಲ್ಲಿದೆ

Written by By: janajagran

Updated on:

ಸಣ್ಣ ಮತ್ತು ಅತೀ ಸಣ್ಣ ರೈತರ ಖುಷ್ಕಿ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರ ಗಂಗಾ ಕಲ್ಯಾಣ ಯೋಜನೆಯನ್ನು (Ganga kalyana subsidy scheme ) ಜಾರಿಗೆ ತಂದಿದೆ.

ಈ ಯೋಜನೆಯಡಿ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆದು ಪಂಪ್ ಸೆಟ್ ಹಾಗೂ ಇತರ ಪೂರಕ ಸಾಮಗ್ರಿಗಳನ್ನು  ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗುವುದು. ಆದರೆ ಈ ಯೋಜನೆಯಡಿ ಫಲಾನುಭವಿಗಳನ್ನು ಹೇಗೆ ಆಯ್ಕೆ ಮಾಡುತ್ತಾರೆಂಬುದು ನಿಮಗೆ ಗೊತ್ತೇ…. ಇಲ್ಲಿದೆ ಸಂಪೂರ್ಣ ಮಾಹಿತಿ.

ಗಂಗಾ ಕಲ್ಯಾಣ ಯೋಜನೆಯು 1983 ರಿಂದ ಪ್ರಾರಂಭವಾಗಿದೆ.  ಈ ಯೋಜನೆಯಡಿ 1½ ಎಕರೆಯಿಂದ 5.00 ಎಕರೆ ಜಮೀನು ಹೊಂದಿರುವ  ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿ, ಪಂಪ್ ಸೆಟ್ ಅಳವಡಿಸಿ ವಿದ್ಯುದ್ಧೀಕರಣಗೊಳಿಸಿ ನೀರಾವರಿ ಸೌಲಭ್ಯ ಕಲ್ಪಿಸಿಕೊಡಲಾಗುವುದು.

ಘಟಕದ ವೆಚ್ಚ ಮೂರು ಲಕ್ಷ ರೂಪಾಯಿ. ಇದು ಆಯಾ ಸಮುದಾಯಕ್ಕೆ ಹೆಚ್ಚುಕಡಿಮೆಯಾಗುತ್ತದೆ.  ಇದರಲ್ಲಿ 2.50 ಲಕ್ಷ ಸಹಾಯಧನ ನೀಡಲಾಗುವುದು. 50 ಸಾವಿರ ರೂಪಾಯಿ ಅವಧಿ ಸಾಲ ಹಾಗೂ ವಿದ್ಯುದ್ದೀಕರಣ ಬಾಬ್ತು 50 ಸಾವಿರ ರೂಪಾಯಿಗಳು ಒಳಗೊಂಡಿರುತ್ತದೆ. ಸಾಲಕ್ಕೆ ವಾರ್ಷಿಕ ಶೇ. 6 ರಷ್ಟು ಬಡ್ಡಿದರ ವಿಧಿಸಲಾಗುವುದು. ಸಾಲ ಮತ್ತು ಬಡ್ಡಿಯನ್ನು 6 ವರ್ಷಗಳಲ್ಲಿ ಅರ್ಧವಾರ್ಷಿಕ ಕಂತುಗಳಲ್ಲಿ ಮರುಪಾವತಿ ಮಾಡಬೇಕಾಗುತ್ತದೆ.

ಈ ಸೌಲಭ್ಯ ಪಡೆಯಬಯಸುವ ಫಲಾನುಭವಿಗಳು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕ. 1ಎಕರೆ 20 ಗುಂಟೆಯಿಂದ 5 ಎಕರೆಯವರೆಗೆ ಕುಷ್ಕಿ ಜಮೀನಿರಬೇಕು ಮತ್ತು ವ್ಯವಸಾಯ ವೃತ್ತಿಯನ್ನೇ ಅವಲಂಬಿಸಿರಬೇಕು.

ಈ ಯೋಜನೆಯಡಿ, ನೈಸರ್ಗಿಕವಾಗಿ ನದಿ, ತೊರೆ, ನಾಲೆಗಳ ಅಕ್ಕಪಕ್ಕದಲ್ಲಿರುವ ಪರಿಶಿಷ್ಟ ಪಂಗಡದ ಕನಿಷ್ಟ 3 ಸಣ್ಣ ಮತ್ತು ಅತಿ ಸಣ್ಣ ರೈತರುಗಳ ಜಮೀನುಗಳಿಗೆ ಪಂಪ್ಸೆಟ್ ಮತ್ತು ಪೈಪ್ಲೈನ್ ಅಳವಡಿಸಿ ಉಚಿತವಾಗಿ ನೀರಾವರಿ ಸೌಲಭ್ಯವನ್ನು ಒದಗಿಸಲಾಗುವುದು. ಸಾಲಕ್ಕೆ ವಾರ್ಷಿಕ ಶೇ.6ರ ದರದಲ್ಲಿ ಬಡ್ಡಿ ವಿಧಿಸಲಾಗಿವುದು. ಸಾಲ ಮತ್ತು ಬಡ್ಡಿಯನ್ನು 6 ವರ್ಷಗಳಲ್ಲಿ ಅರ್ಧವಾರ್ಷಿಕ ಕಂತುಗಳಲ್ಲಿ ಮರುಪಾವತಿ ಮಾಡಬೇಕಾಗಿರುತ್ತದೆ.

ಈ ಯೋಜನೆಯಡಿಯಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ವಾಪ್ತಿಗೆ ಬರುವ ಅಂಬೇಡ್ಕರ್ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಬೋವಿ ಅಭಿವೃದ್ಧಿ ನಿಗಮ, , ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ದೇವರಾಜು ಅರಸು ಅಭಿವೃದ್ಧಿ ನಿಗಮ ಸೇರಿದಂತೆ ಒಟ್ಟು 8 ನಿಗಮಗಳಿಂದ ಪ್ರತಿ ವರ್ಷ ಅಂದಾಜು 10 ಸಾವಿರ ಕೊಳವೆ ಬಾವಿ ಕೊರೆಯಲಾಗುತ್ತದೆ.

ಕೊಳವೆಬಾವಿ ಕೊರೆಸಲು ಮಿತಿ?

ಬಯಲು ಸೀಮೆ ಭಾಗದ ಜಿಲ್ಲೆಗಳಿಗೆ 500 ರಿಂದ 1 ಸಾವಿರ ಅಡಿಯವರೆಗೆ, ಕರಾವಳಿ ಭಾಗದ ಜಿಲ್ಲೆಗಳಿಗೆ 300 ರಿಂದ 500 ಅಡಿಯವರೆಗೆ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಿಗೆ 100 ಅಡಿಯವರೆಗೆ ಉಚಿತವಾಗಿ ಬೋರ್ ವೆಲ್ ಕೊರೆಸಲು ಅನುಮತಿ ನೀಡಲಾಗಿದೆ.

ಫಲಾನುಭವಿಗಳ ಆಯ್ಕೆ ಹೇಗೆ ನಡೆಯುತ್ತದೆ ?

ಫಲಾನುಭವಿಗಳನ್ನು ಎರಡು ರೀತಿಯಲ್ಲಿ ಆಯ್ಕೆ ಮಾಡಲಾಗುತ್ತದೆ. ಒಟ್ಟು ಗುರಿಯ ಶೇ. 80 ಫಲಾನುಭವಿಗಳನ್ನು ಆಯಾ ಜಿಲ್ಲೆಗಳ ಹಾಗೂ ಮತಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯ ಆಯ್ಕೆ ಸಮಿತಿಗಳು ಆಯ್ಕೆ ಮಾಡುತ್ತವೆ. ಉಳಿದ ಶೇ. 20 ಫಲಾನುಭವಿಗಳನ್ನು ಸಮಾಜಕಲ್ಯಾಣ ಸಚಿವರು (ಶೇ. 15) ಹಾಗೂ ನಿಗಮಗಳ ಅಧ್ಯಕ್ಷರು (ಶೇ.5) ಆಯ್ಕೆ ಮಾಡುತ್ತಾರೆ.

ಅರ್ಜಿ ಸಲ್ಲಿಸುವುದು ಎಲ್ಲಿ?

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ಕೊರೆಸಲು ಸಣ್ಣ ಮತ್ತು ಅತೀ ಸಣ್ಣ ರೈತರು ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಇರಬೇಕು.  ಬಿಪಿಎಲ್ ಕಾರ್ಡ್, ಜಮೀನಿನ ಪಹಣಿ ಸೇರಿದಂತೆ ಮತ್ತಿತರ ದಾಖಲಾತಿಗಳೊಂದಿಗೆ ಅರ್ಜಿಯನ್ನು ಆಯಾ ಸಮುದಾಯದ ಜನರು ಸಮುದಾಯಕ್ಕೆ ಸಂಬಂಧಿಸಿದ ಅಭಿವೃದ್ಧಿ ನಿಗಮದ ಕಚೇರಿಗೆ ಅರ್ಜಿ ಸಲ್ಲಿಸಬೇಕು. ನಿಗಮದ ವ್ಯವಸ್ಥಾಪಕರು ಅರ್ಜಿ ಪರಿಶೀಲಿಸಿ ಬೋರವೆಲ್ ಕೊರೆಯಲು ಏಜೇನ್ಸಿಗಳಿಗೆ ಅನುಮತಿ ನೀಡುತ್ತಾರೆ. ನಂತರ ನಿಮ್ಮ ಜಮೀನಿನಲ್ಲಿ ನೀವು ತೋರಿಸಿದ ಸ್ಥಳದಲ್ಲಿ ಕೊಳವೆಬಾವಿ ಕೊರೆಯಲಾಗುತ್ತದೆ.

ಗಂಗಾ ಕಲ್ಯಾಣ ಯೋಜನೆಯಡಿ ಮಂಜೂರಾದ 45 ದಿನಗಳಲ್ಲಿ ಕಾರ್ಯ ಮುಗಿಸಲು ಗಡವು

ಗಂಗಾ ಕಲ್ಯಾಣ ಯೋಜನೆಯಡಿ ಗುತ್ತಿಗೆದಾರರ ಮೂಲಕ ಕೊಳವೆಬಾವಿ ಹಾಕಿಸಿಕೊಳ್ಳುವ ವ್ಯವಸ್ಥೆಯನ್ನು ಕೊನೆಗಾಣಿಸಿ ಫಲಾನುಭವಿಗಳೇ ನೋಂದಾಯಿತ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳುವ  ವಿನೂನತ ಕ್ರಮಕ್ಕೆ ಯೋಚಿಸಲಾಗುತ್ತಿದೆ .

ಇದನ್ನೂ ಓದಿ:SMAM ಯೋಜನೆಯಡಿ ಶೇ.80ರವರೆಗೆ ಕೃಷಿ ಯಂತ್ರೋಪಕರಣಗಳಿಗೆ ಸಬ್ಸಿಡಿ ಪಡೆಯಿರಿ

ಸಣ್ಣ ಹಿಡುವಳಿ ಹೊಂದಿರುವ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುವ ಗಂಗಾ‌ ಕಲ್ಯಾಣ ಯೋಜನೆ ಅನುಷ್ಠಾನಕ್ಕೆ ಒಬ್ಬನೇ ಗುತ್ತಿಗೆದಾರರನ್ನು ನೇಮಿಸುವ ಬದಲು, ನೋಂದಾಯಿತ ಹಲವು ಕಂಪನಿಗಳ ಹೆಸರನ್ನು ಸೂಚಿಸಲಾಗುವುದು. ರೈತರು ತಾವು ಆಯ್ಕೆ ಮಾಡಿ ಕೊಳ್ಳುವ ಕಂಪನಿಯಿಂದಲೇ ಕೊಳವೆ ಬಾವಿ ಹಾಕಿಸಿಕೊಳ್ಳಬಹುದು. ಇದಕ್ಕಿಂತ ಮುಂಚೆ ಗುತ್ತಿಗೆದಾರರಿಗಾಗಿ ಕಾಯುವಂತಹ ಪರಿಸ್ಥಿತಿಯಿತ್ತು. ರೈತರಿಗೆ ಸುಲಭವಾಗಿ ಈ ಸೌಲಭ್ಯ ಸಿಗಲಿ ಎಂಬ ಉದ್ದೇಶದಿಂದ ಹೊಸ ಮಾರ್ಗ ಸೂಚಿ ರಚಿಸಲಾಗುತ್ತಿದೆ. ಇನ್ನೂ ಮುಂದೆ ಯೋಜನೆ ಫಲಾನುವಭಿಯ ವಿವೇಚನೆಗೆ ತಕ್ಕಂತೆ ರೂಪಿಸಲಾಗುತ್ತಿದೆ.

ಕೃಪೆ: ವಿಜಯವಾಣಿ

Leave a Comment