Gangakalyana and car subsidy : ರೈತ ಬಾಂಧವರಿಗೆ ಇಲ್ಲಿದೆ ಗುಡ್ ನ್ಯೂಸ್, ನಿಮ್ಮ ಜಮೀನಿನಲ್ಲಿ ಉಚಿತ ಬೋರ್ವೆಲ್ ಕೊರೆಯಲು ಹಾಗೂ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ
ಹೌದು, ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Gangakalyana and car subsidy ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಈ ಕೆಳಕಂಡ ವಿವಿಧ ಯೋಜನೆಗಳಡಿ ಸಹಾಯಧನ/ ಸಾಲ-ಸೌಲಭ್ಯವನ್ನು ಪಡೆಯಲು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್ದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ (ಈ ಯೋಜನೆಯಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು), ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆಗಳಡಿ ಅರ್ಹ ಫಲಾನುಭವಿಗಳು ಕಲಬುರಗಿ-ಒನ್/ಕರ್ನಾಟಕ-ಒನ್/ಅಟಲ್-ಜಿಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದೇ ರೀತಿ ಸ್ವಾತಂತ್ರö್ಯ ಅಮೃತ ಮುನ್ನಡೆ ಯೋಜನೆಯಡಿ ಅರ್ಜಿಯನ್ನು
https://www.kaushalkar.com/
ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ 2025ರ ಜುಲೈ 2 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿಗಮದ
https://kvcdcl.karnataka.gov.in/
ವೆಬ್ಸೈಟ್ನ್ನು ಅಥವಾ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 080-22374848/ 7899899039 ಗಳಿಗೆ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ, 2ನೇ ಮಹಡಿ, ಸಿಟಿ ಸ್ಕೆ÷್ವರ್ ಬೀಲ್ಡಿಂಗ್, ಬಡೇಪೂರ 3ನೇ ಕ್ರಾಸ್, ವೀರಶೈವ ಕಲ್ಯಾಣ ಮಂಟಪದ ಎದುರುಗಡೆ, ಖರ್ಗೆ ಪೆಟ್ರೋಲ್ ಬಂಕ್ ಹತ್ತಿರ, ಕಲಬುರಗಿ-585105 ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278635 (ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಸಂಪರ್ಕಿಸಲು ಕೋರಲಾಗಿದೆ.
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಈ ಕೆಳಕಂಡ ವಿವಿಧ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್ದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಇದನ್ನೂ ಓದಿ ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿ ಸಲ್ಲಿಸಲು ಪ್ರವರ್ಗ-3(ಬಿ) ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣಪತ್ರವು ಚಾಲ್ತಿಯಲ್ಲಿರಬೇಕು).
ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ (ಪ್ರೇಶ್ ಸ್ಟುಟೆಂಡ್ಸ್), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (ಪ್ರೇಶ್ ಸ್ಟುಟೆಂಡ್ಸ್), ಮರಾಠ ಮಿಲ್ಟಿç ಹೊಟೇಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ) ಹಾಗೂ ಸ್ವಾವಲಂಬಿ ಸಾರಥಿ ಯೋಜನೆಗಳಡಿ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅದೇ ರೀತಿ ಸ್ವಾತಂತ್ರ್ಯಯ ಅಮೃತ್ ಮೊಹೋತ್ಸವ ಮುನ್ನಡೆ ಯೋಜನೆಯಡಿ
https://www.kaushalkar.com
ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ 2025ರ ಜುಲೈ 4ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. (ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ).
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್
https://kmcdc.karnataka.gov.in
ವೆಬ್ಸೈಟ್ನ್ನು, ನಿಗಮದ ಸಹಾಯವಾಣಿ: 8867537799/ ದೂ.ಸಂ. 080-29903994 (ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ), ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ/ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, 2ನೇ ಮಹಡಿ, ಸಿಟಿ ಸ್ಕೆ÷್ವರ್ ಬೀಲ್ಡಿಂಗ್, ಬಡೇಪೂರ 3ನೇ ಕ್ರಾಸ್, ವೀರಶೈವ ಕಲ್ಯಾಣ ಮಂಟಪದ ಎದುರುಗಡೆ, ಖರ್ಗೆ ಪೆಟ್ರೋಲ್ ಬಂಕ್ ಹತ್ತಿರ, ಕಲಬುರಗಿ-585105 ಕಚೇರಿ ವಿಳಾಸಕ್ಕೆ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278635ಗೆ ಸಂಪರ್ಕಿಸಲು ಕೋರಲಾಗಿದೆ.