Gangakalyana scheme subsidy now : ರೈತ ಬಾಂಧವರಿಗೆ ಗುಡ್ ನ್ಯೂಸ್. ಅದೇನಪಾ ಅಂದ್ರೆ ಈಗ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ರೈತರಿಗೆ ಬೋರ್ವೆಲ್ ಕೊರೆಯಲು (ಕೊಳವೆಬಾವಿ) 4 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, 1.20 ಎಕರೆಯಿಂದ 5 ಎಕರೆಯವರೆಗೆ ಜಮೀನು ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ವಿದ್ಯುದೀಕಣದೊಂದಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ಬೆಂಗಳೂರು ನಗರ, ಬೆಂಗಳೂರ ಗ್ರಾಮಾಂತರ,ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ 4.75 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು. ಹಾಗೂ ಬಾಕಿ ಉಳಿದ ಜಿಲ್ಲೆಗಳಿಗೆ 3.75 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು.ಇದರಲ್ಲಿ 50 ಸಾವಿರ ರೂಪಾಯಿ ಸಾಲವು ಸೇರಿರುತ್ತದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ.
Gangakalyana scheme subsidy now ಯಾವ ಯಾವ ನಿಗಮಗಳಿಂದ ಅರ್ಜಿ ಆಹ್ವಾನ
ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ ಸಹಯೋಗದೊಂದಿಗೆ) ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ರೈತರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಸೇವಾ ಸಿಂಧು ವೆಬ್ಸೈಟ್ ಮೂಲಕ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
https://sevaone.karnataka.gov.in/services
ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದವರಾಗಿರಬೇಕು. ಆದಿ ಕರ್ನಾಟಕ, ಆದಿ ಆಂದ್ರ, ಆದಿ ದ್ರಾವಿಡ ಎಂಬ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದಲ್ಲಿ ಕಡ್ಡಾಯವಾಗಿ ಮೂಲ ಜಾತಿಯನ್ನು ನಮೂದಿಸಿದ ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
ಅರ್ಜಿ ಸಲ್ಲಿಸಲು ಭಾವಚಿತ್ರ ಬೇಕು. ಜಾತಿ ಪತ್ರ (ಆರ್.ಡಿ ಸಂಖ್ಯೆ ಹೊಂದಿರಬೇಕು), ಆದಾಯ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು), ಆಧಾರ್ ಕಾರ್ಡ್ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು.
ಹಸು ಎಮ್ಮೆ ಖರೀದಿಸಲು ತೆಗೆದುಕೊಂಡ ಸಾಲಗಳ ಮೇಲೆ ಬಡ್ಡಿ ಸಬ್ಸಿಡಿ ಮತ್ತು ಜಾನುವಾರುಗಳಿಗೆ ವಿಮಾ ರಕ್ಷಣೆಯೂ ದೊರೆಯುತ್ತದೆ.
ಇದನ್ನೂ ಓದಿ ಮತದಾರರ ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಇಲ್ಲೇ ಚೆಕ್ ಮಾಡಿ
ಹೈನುಗಾರಿಕೆ ಕೈಗೊಳ್ಳಲು ಅಂದರೆ ಎರಡು ಎಮ್ಮೆ ಅಥವಾ ಎರಡು ಹಸು ಸಾಕಾಣಿಕೆಗೆ ಒಂದು ಲಕ್ಷ 25 ಸಾವಿರ ರೂಪಾಯಿ ಸಬ್ಸಿಡಿ ನೀಡಲಾಗುವುದು.
ಹೌದು, ಹಸು ಅಥವಾ ಎಮ್ಮೆ ಘಟಕ ವೆಚ್ಚದ ಶೇ. 50 ರಷ್ಟು ಅತವಾ ಗರಿಷ್ಠ ಒಂದು ಲಕ್ಷ 25 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ಹಾಗಾದರೆ ಯಾವ ಯಾವ ನಿಗಮಗಳಿಂದ ಅರ್ಜಿ ಕರೆಯಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಚೇರಿ ಅಥವಾ ನಿಗಮಗಳ ವೆಬ್ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ, ಎಸ್.ಟಿ ಸಹಾಯವಾಣಿ 9482300400 ಗೆ ಸಂಪರ್ಕಿಸಲು ಕೋರಲಾಗಿದೆ.





