ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

GangaKalyana scheme subsidy : ಗಂಗಾ ಕಲ್ಯಾಣ ಏತ ನೀರಾವರಿ ಯೋಜನೆಯಡಿಯಲ್ಲಿ ಬೋರ್ವೆಲ್ ಕೊರೆಯಲು ರೈತರಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಪ್ರತಿವರ್ಷದಂತೆ ಈ ವರ್ಷವೂ ಸಹ ಅರ್ಹ ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೊರ್ವೆಲ್ ಹಾಕಲು, ಗೂಡ್ಸ್, ವಾಹನ, ಟ್ಯಾಕ್ಸಿ ವಾಹನ ಹಾಗೂ  ಆಟೋ ರಿಕ್ಷಾ ಖರೀದಿಗೆ ಸಬ್ಸಿಡಿ ಸೇರಿದಂತೆ ಇನ್ನಿತರ ಸೌಲಭ್ಯ ನೀಡಲು  ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಎಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು ಯಾರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಕೊನೆಯ ದಿನಾಂಕ ಯಾವುದು ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಪ್ರಸಕ್ತ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನರು, ಬೌದ್ಧ ಧರ್ಮಿಯರು, ಸಿಖ್ ಹಾಗೂ ಪಾರ್ಸಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಾರ್ಷಿಕ ವರಮಾನ ನಗರ ಪ್ರದೇಶದಲ್ಲಿ 1.03 ಲಕ್ಷ ಮತ್ತು ಗ್ರಾಮೀಣ ಪ್ರದೇಶದಲ್ಲಿ 81 ಸಾವಿರ ರೂಪಾಯಿ ಹಾಗೂ 18 ರಿಂದ 55 ವಯೋಮಾನದೊಳಗಿರನ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್  17 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಆನ್ಲೈನ್

 https://kmdc.karnataka.gov.in/kn

ಮೂಲಕ ಅರ್ಜಿ ಸಲ್ಲಿಸಬಹುದು.

ಇದೇ ರೀತಿ ಅರಿವು, ಶ್ರಮಶಕ್ತಿ ಸಾಲ ಯೋಜನೆ, ವೃತ್ತಿ ಪ್ರೋತ್ಸಾಹ ಸಾಲ ಯೋಜನೆ, ಗಂಗಾ ಕಲ್ಯಾಣ ಏತ ನೀರಾವರಿ, ಮಹಿಳಾ ಸ್ವಸಹಾಯ ಗುಂಪುಗಳ ಸಾಲ ಯೋಜನೆ, ಸ್ವಾವಲಂಬಿರ ಸಾರಥಿ ವಾಹನ ಖರೀದಿಗೆ ಸಹಾಯಧನ ಯೋಜನೆ ಸೇರಿದಂತೆ ಹಲವು ಯೋಜನೆಗಳಡಿ ಸಾಲ ಪಡೆಯಬಹುದಾಗಿದೆ.

GangaKalyana scheme subsidy ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಅರ್ಜಿದಾರರು ಸರ್ಕಾರಿ ಆದೇಸದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆಯಿಂದ 5 ಎಕರೆಯವರೆಗೆ ಖುಷ್ಕಿ ಜಮೀನು ಇರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು ಸಣ್ಣ ಅತೀ ಸಣ್ಣ ಹಿಡುವಳಿದಾರ ರೈತನಾಗಿರಬೇಕು. ಎಲ್ಲಾ ಮೂಲಗಳಿಂದ ಕೌಟಂಬಿಕ ಆದಾಯ 6 ಲಕ್ಷ ಮೀರಿರಬಾರದು. ಅರ್ಜಿದಾರರು ಕನಿಷ್ಠ 18 ವರ್ಷ ಇರಬೇಕು. 55 ಗರಿಷ್ಠ ವಯೋಮಿತಿಯಾಗಿರುತ್ತದೆ.

ದಾಖಲೆಗಳು : ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಇತ್ತೀಚಿನ ಜಮೀನನ ಪಹಣಿ ಪ್ರತಿ, ಬ್ಯಾಂಕ್ ಪಾಸ್ ಬುಕ್, ಭೂ ಕಂದಾಯ ಪಾವತಿಸಿದ ರಸೀದಿ, ಸ್ವಯಂ ಘೋಷಣೆ ಪತ್ರ ಇರಬೇಕು.

ಮಾರ್ಗಸೂಚಿಗಳು : ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. ಬ್ಯಾಂಕುಗಳಿಂದ ಮಂಜೂರಾತಿ ನೀಡಿ ಫಲಾನುಭವಿಗಳಿಗೆ ಬೋರ್ವೆಲ್ ಕೊರೆಯಲು, ಗೂಡ್ಸ್ ವಾಹನ, ಟ್ಯಾಕ್ಸಿ ಖರೀದಿ, ಆಟೋ ರಿಕ್ಷಾ ಖರೀಗಿಗೆ ವಾಹನದ ಮೌಲ್ಯದ ಮೊತ್ತು ಶೇ. 50 ರಷ್ಟು ಸಬ್ಸಿಡಿ ನೀಡಲಾಗುವುದು. ಅಂದರೆ ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು.

ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಈ ಯೋಜನೆಯಡಿ ಖರೀದಿಸಲಾಗಿರುವ ವಾಹನವನ್ನು ಫಲಾನುಭವಿಗಳುಗ ಸಾಲದ ಅವಧಿಯಲ್ಲಿ ಇತರರಿಗೆ ಪರಬಾರೆ ಮಾಡಬಾರದು. ನಿಗಮದಿದಂದ ಪಡೆದ ವಾಹನದ ಜೊತೆಯಲ್ಲಿ ಫಲಾನುಭವಿ ಭಾವಚಿತ್ರವನ್ನು ಕಡ್ಡಾಯವಾಗಿ ಜಿಲ್ಲಾ ವ್ಯವಸ್ಥಾಪಕರು ದೃಢೀಕರಿಸಿ ಕಡತದಲ್ಲಿ ಇಡತಕ್ಕದ್ದು. ನಗರ ಪ್ರದೇಶದಲ್ಲಿನ ಪ್ಯಾಸೆಂಜರ್ ಅಟೋ ರಿಕ್ಷಾಗಳಿಗೆ ಪರ್ಮಿಟ್ ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ ಬೈಕ್ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಆನ್ಲೈನ್ ಅರ್ಜಿತ ಫಲಾನುಭವಿಯ ಇತ್ತೀಚಿತ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ವಹಾನ ಚಾಲನ ಪರವಾನಗಿ ಪ್ರಮಾಣ ಪತ್ರ, ಅರ್ಜಿದಾರರ ಮತ್ತು ಕುಟುಂಬ ಸದಸ್ಯರು ಗಂಗಾ ಕಲ್ಯಾಣ ಯೋಜನೆಯಡಿ ಸಾಲ ಸೌಲಭ್ಯ ಪಡೆದಿಲ್ಲದಿರುವ ಬಗ್ಗೆ ಜಿಲ್ಲಾ ವ್ಯವಸ್ಥಾಪಕರಿದಂ ದೃಢೀಕರಣ ಪತ್ರ ಇರಬೇಕು. ಈ ಯೋಜನಯೆಡಿ ಪಡೆದ ವಾಹನವನ್ನು ಯಾರಿಗೂ ಪರವಬಾರೆ ಮಾಡದಿರುವ ಬಗ್ಗೆ ದೃಢೀಕರಣ ಪತ್ರ ಹೊಂದಿರಬೇಕು.

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಯ ಕಚೇರಿಗಳಲ್ಲಿ ಸಂಪರ್ಕಿಸಲು ಕೋರಲಾಗಿದೆ.

Leave a Comment