ರೈತರಿಗೆ ಹೈನುಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನ

Written by By: janajagran

Updated on:

Goat and animal husbandry training ಕಲಬುರಗಿಯ ಸೇಡಂ ರಸ್ತೆಯಲ್ಲಿರುವ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ರೈತರಿಗೆ ಇದೇ ನವೆಂಬರ್ 23 ಹಾಗೂ 24 ರಂದು ಎರಡು ದಿನಗಳ ಕಾಲ ವೈಜ್ಞಾನಿಕ ಹೈನುಗಾರಿಕೆ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಉಪನಿರ್ದೇಶಕರು ತಿಳಿಸಿದ್ದಾರೆ.

ತರಬೇತಿಗೆ ಹಾಜರಾಗುವ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಮಾಸ್ಕ್ ನ್ನು ಅವರೇ ತರಬೇಕು. ರೈತರಿಗೆ ಯಾವುದೇ ಭತ್ಯೆ ಇರುವುದಿಲ್ಲ. ಮಧ್ಯಾಹ್ನ ಅಲ್ಪ ಉಪಹಾರ ನೀಡಲಾಗುತ್ತದೆ.  ಎರಡು ದಿನಗಳ ಕಾಲ ಕಡ್ಡಾಯವಾಗಿ ತರಬೇತಿಗೆ ಹಾಜರಾದವರಿಗೆ ಮಾತ್ರ ತರಬೇತಿ ಪ್ರಮಾಣಪತ್ರ ನೀಡಲಾಗುತ್ತದೆ.

ಈ ತರಬೇತಿಗೆ ಹಾಜರಾಗುವ ರೈತರು ಅರ್ಜಿಯ ಜೊತೆಗೆ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಆಧಾರ ಕಾರ್ಡ್ ಪ್ರತಿ ಲಗತ್ತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣಪತ್ರ ಲಗತ್ತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸೇಡಂ ರಸ್ತೆಯಲಿರುವ ಪಶು ಪಾಲನೆ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಕುರಿ ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲು ರೇಷನ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ…ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ  (ಆರ್.ಕೆ.ವಿ.ವೈ) ಕುರಿ/ಮೇಕೆ ಘಟಕ ಸ್ಥಾಪಿಸಲು ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ 9 , ಗಿರಿಜನ ಉಪಯೋಜನೆ ಪರಿಶಿಷ್ಟ ಪಂಗಡಕ್ಕೆ 4 ಮತ್ತು ಸಾಮಾನ್ಯ ಯೋಜನೆಯಡಿ 42 ಗುರಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದ್ದು, ನಿಗದಿತ ಅರ್ಜಿಗಳನ್ನು ಸಹಾಯಕ ನಿರ್ದೇಶಕರು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಕೊಪ್ಪಳ ಕಚೇರಿಯಿಂದ ಪಡೆದುಕೊಂಡು ಅರ್ಹ ದಾಖಲಾತಿಗಳೊಂದಿಗೆ ನವೆಂಬರ್ 25 ರ ಸಾಯಂಕಾಲ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುರಿ, ಮೇಕೆ ಘಟಕ ಸ್ಥಾಪನೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮದ ವತಿಯಿಂದ 2021-22ನೇ ಸಾಲಿನಲ್ಲಿ ಆರ್.ಕೆ.ವಿ.ವೈ ಯೋಜನೆಯಡಿ ಕುರಿ, ಮೇಕೆ ಘಟಕ (10+1) ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ರೈತರು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ನಿಗದಿತ ಅರ್ಜಿಗಳನ್ನು ಆಯಾ ತಾಲೂಕುಮಟ್ಟದ ಸಹಾಯಕ ನಿರ್ದೇಶಕರು/ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 24 ರೊಳಗೆ ಕಚೇರಿಗೆ ಸಲ್ಲಿಸಬೇಕು. ಅರ್ಜಿಯನ್ನು ಆಯಾ ತಾಲೂಕುಗಳ ಪಶು ಆಸ್ಪತ್ರೆ, ಸಹಾಯಕ ನಿರ್ದೇಶಕರು (ಆಡಳಿತ) ಪಶುಪಾಲನಾ ಇಲಾಖೆ ಇವರಿಂದ ಪಡೆಯಬಹುದು. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಪಶು ಆಸ್ಪತ್ರೆ, ಆವರಣ, ಅರುಣ ಟಾಕೀಸ್ ಎದುರು, ಪಿ.ಬಿ. ರಸ್ತೆ, ದಾವಣಗೆರೆ ಅವರನ್ನು ಸಂಪರ್ಕಿಸಲು ಕೋರಲಾಗಿದೆ.

Goat and animal husbandry training ಪಶುಪಾಲಕರ ಸಹಾಯವಾಣಿ

ರಾಜ್ಯದ ಪಶುಸಂಗೋಪನಾ ಚಟುವಟಿಕೆಗಳಲ್ಲಿ ನಿರತರಾಗಿರುವ ರೈತರಿಗಾಗಿ ಸರ್ಕಾರವು ಉಚಿತವಾಗಿ ಪಶುಪಾಲನಾ ಸಹಾಯವಾಣಿ ಆರಂಭಿಸಿದೆ. ರೈತರು 8277 100 200 ಕ್ಕೆ ದಿನದ 24 ಗಂಟೆ ಕರೆ ಮಾಡಿ ಸಹಾಯವಾಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯರು ಮತ್ತು ಇತರೆ ವಿಷಯ ತಜ್ಞರಿಂದ ಅಗತ್ಯ ಮಾಹಿತಿ ಪಡೆಯಬಹುದು.

ಸಹಾಯವಾಣಿ ಮೂಲಕ ರೈತರಿಗೆ ಲಭ್ಯವಿರುವ ತಾಂತ್ರಿಕ ಸೇವೆಗಳ ಬಗ್ಗೆ ಮಾಹಿತಿ ನೀಡಲಾಗುವುದು. ಹೈನುಗಾರಿಕೆ, ಕುರಿ ಮತ್ತು ಮೇಕೆ, ಮೊಲ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ದೇಶೀ ಹಾಗೂ ವಿದೇಶಿ ಜಾನುವಾರುಗಳ ತಳಿಗಳ ಬಗ್ಗೆ ಮಾಹಿತಿ ನೀಡಲಾಗುವುದು. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲಸೌಲಭ್ಯ ಕುರಿತು ಮಾಹಿತಿ ನೀಡಲಾಗುವುದು. ಯಶಸ್ವಿ ಹೈನುಗಾರಿಕೆಗೆ ಅಗತ್ಯವಿರುವ ಮೇವಿನ ಬೆಳೆಗಳ ಬಗ್ಗೆ ಮಾಹಿತಿ ನೀಡಲಾಗುವುದು. ತುರ್ತು ಪಶುವೈದ್ಯ ಸೇವೆಗಾಗಿ ಒಳಬರುವ ಕರೆಗಳನ್ನು ಹತ್ತಿರದ ಇಲಾಖಾ ತಾಂತ್ರಿಕ ಸಿಬ್ಬಂದಿ ಅತವಾ ಅಧಿಕಾರಿಗಳಿಗೆ ವರ್ಗಾಯಿಸಿ ಅಗತ್ಯ ಸೇವೆ ದೊರೆಯುವಂತೆ ಸಹಕರಿಸಲಾಗುವುದು.

Leave a Comment