Goat and hen farming training ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ವಿವಿಧ ಕುರಿ, ಮೇಕೆ,ಹೈನುಗಾರಿಕೆ ಹಾಗೂ ಕೋಳಿ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದು ಎಂದು ತುಮಕೂರು ಜಿಲ್ಲೆಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುರಿ, ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಜುಲೈ 6 ಮತ್ತು 7 ರಂದು ನೀಡಲಾಗುವುದು. ಅದೇ ರೀತಿ ಹೈನುಗಾರಿಕೆ ತರಬೇತಿಯನ್ನು ಜುಲೈ 10 ಮತ್ತು 11 ರಂದು ನೀಡಲಾಗುವುದು. ಕೋಳಿ ಸಾಕಾಣಿಕೆ ತರಬೇತಿಯನ್ನು ಜುಲೈ 13 ಮತ್ತು 14 ರಂದು ಹಮ್ಮಿಕೊಳ್ಳಲಾಗಿದೆ.
ನಿಗದಿಪಡಿಸಿದ ದಿನಾಂಕದಂದು ಬೆಳಗ್ಗೆ 10 ಗಂಟೆಗೆ ತರಬೇತಿಗೆ ಹಾಜರಾಗಬೇಕಾಗುತ್ತದೆ. ತರಬೇತಿಗೆ ಹಾಜರಾಗಲು ಇಚ್ಚಿಸುವವರು 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಾಗಿದ್ದಲ್ಲಿ) ವನ್ನು ಕಡ್ಡಾಯವಾಗಿ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಅಥವಾ ದೂರವಾಣಿ ಸಂಖ್ಯೆ 0816 2251214 ಗೆ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
Goat and hen farming training ಪಶುಪಾಲನೆ ತರಬೇತಿಗೆ ಅರ್ಜಿ ಆಹ್ವಾನ
ರೈತರಿಗೆ, ರೈತ ಮಹಿಳೆಯರಿಗೆ ಹಾಗೂ ಆಸಕ್ತಿಯುಳ್ಳ ಎಲ್ಲರಿಗೂ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ಹಾಸನ ವತಿಯಿಂದ ತರಬೇತಿಯನ್ನು ಏರ್ಪಡಿಸಲಾಗಿದೆ.
ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಯಾವುದೇ ಪ್ರಯಾಣ ಭತ್ಯೆ ಅಥವಾ ಸ್ಟೈಫಂಡ್ ನೀಡಲಾಗುವುದಿಲ್ಲ.ಆಸಕ್ತಿಯುಳ್ಳವರು ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಯೊಂದಿಗೆ ತರಬೇತಿ ಪ್ರಾರಂಭವಾಗುವ ದಿನಾಂಕದಂದು ಬೆಳಗ್ಗೆ 10.30 ಗಂಟೆಗೆ ಉಪ ನಿರ್ದೇಶಕರ ಕಚೇರಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ಸಂತೇಪೇಟೆ, ಹಾಸನದಲ್ಲಿ ಹಾಜರಾಗಲು ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ದೂರವಾಣಿ ಸಂಖ್ಯೆ 08172 235226, ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಉಪ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ : ಪಿಎಂ ಕಿಸಾನ್ 14ನೇ ಕಂತಿನ ಫಲಾನುಭವಿಗಳ ಪಟ್ಟಿ ಬಿಡುಗಡೆ – ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ ಇಲ್ಲೇ ಚೆಕ್ ಮಾಡಿ
ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ 10.07.2023 ರಿಂದ 11.07.2023, ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ 17.07.2023 ಹಾಗೂ ರೈತರಿಗೆ ಕೋಳಿ ಸಾಕಣಿಕೆ ತರಬೇತಿಯನ್ನು ಜುಲೈ 24 ರಿಂದ 25 ರವರೆಗೆ ನೀಡಲಾಗುವುದು.
ಕುರಿ ಸಾಕಾಣಿಕೆದಾರರಿಗೆ ಪರಿಕರ ಕಿಟ್ ನೀಡಲು ಅರ್ಜಿ ಆಹ್ವಾನ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ವಿಜಯನಗರ ಜಿಲ್ಲೆಯ ಸಂಚಾರಿ, ಅರೆ ಸಂಚಾರಿ ಕುರಿ, ಮೇಕೆ ಸಾಕಾಣಿಕೆದಾರರಿಗೆ ಪರಿಕರ ಕಿಟ್ ಗಳನ್ನು ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ನಿರ್ದೇಶಕ ಡಾ. ಬಸಯ್ಯ ಸಾಲಿ ತಿಳಿಸಿದ್ದಾರೆ.
ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಆದ್ಯತೆ ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ತಮ್ಮ ಭಾವಚಿತ್ರದೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ತುಂಬಿ ಅದರ ಜತೆಗೆ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಕುರಿಗಾರರ ಪಾಸ್ ಪುಸ್ತಕ, ಝರಾಕ್ಸ್ ಪ್ರತಿ, ನಿಗಮದಲ್ಲಿನೋಂದಾಯಿತ ಸಹಕಾರ ಸಂಘದ ಸದಸ್ಯತ್ವ ಪತ್ರದ ದೃಢೀಕೃತ ಪ್ರತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದಲ್ಲಿ ಜಾತಿ ಪ್ರಮಾಣದ ಪ್ರತಿಯನ್ನು ಕಚೇರಿಗೆ ಜುಲೈ 7 ರೊಳಗಾಗಿ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಆಯಾ ತಾಲೂಕು ಪಶು ಆಸ್ಪತ್ರೆ ಅಥವಾ ಹೊಸಪೇಟೆಯ ಪಶು ಆಸ್ಪತ್ರೆ ಆವರಣದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.