sheep farming free training ಕುರಿ ಸಾಕಾಣಿಕೆ ಮಾಡಲಿಚ್ಚಿಸುವ ರೈತರಿಗೆ ಸಂತಸದ ಸುದ್ದಿ. ರೈತರಿಗೆ ವೈಜ್ಞಾನಿಕವಾಗಿ ಕುರಿ ಮತ್ತು ಮೇಕೆ ಹೇಗೆ ಸಾಕಾಣಿಕೆ ಮಾಡಬೇಕೆಂಬುದರ ಕುರಿತು ರೈತರಿಗೆ ತರಬೇತಿ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಲಬುರಗಿ ನಗರದ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ (ಕಿಟಸರ್ಡ್) ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಹತ್ತು ದಿನಗಳ ಕಾಲ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಈ ತರಬೇತಿಯು 2021ರ ನವೆಂಬರ್ 29 ರಿಂದ ಡಿಸೆಂಬರ್ 8 ರವರೆಗೆ ಹತ್ತು ದಿನಗಳ ಕಾಲ ನೀಡಲಾಗುತ್ತಿದ್ದು, ಜಿಲ್ಲೆಯ ಗ್ರಾಮೀಣ ಭಾಗದ ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್./ ಅಂತ್ಯೋದಯ ಕಾರ್ಡ್ ಹಾಗೂ ಎಂ.ಜಿ.ಎನ್.ಆರ್.ಇ.ಜಿ.ಎ. ಕಾರ್ಡ್ ಹೊಂದಿರುವ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಕನ್ನಡ ಓದಲು ಹಾಗೂ ಬರೆಯಲು ಬರಬೇಕು.
ಇದನ್ನೂ ಓದಿ : ರೈತರಿಗೆ ಸಂತಸದ ಸುದ್ದಿ. ಇನ್ನೂ ಮುಂದೆ ರೈತರು ಮೊಬೈಲ್ ನಲ್ಲಿಯೇ ಜಮೀನಿನ ಅಳತೆ ಮಾಡಬಹುದು… ಅದು ಹೇಗೆ ಅಂದುಕೊಂಡಿದ್ದೀರಾ….ಇಲ್ಲಿದೆ ಸಂಪೂರ್ಣ ಮಾಹಿತಿ
ಸಂಸ್ಥೆಯಿAದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2021ರ ನವೆಂಬರ್ 27 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ 2021ರ ನವೆಂಬರ್ 28 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9243602888, 9886781239 ಹಾಗೂ 9900135705 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
sheep farming free training ರೈತರಿಗೆ ವೈಜ್ಞಾನಿಕ ಕುರಿ ಹಾಗೂ ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
ಕಲಬುರಗಿಯ ಸೇಡಂ ರಸ್ತೆಯಲ್ಲಿರುವ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕಲಬುರಗಿ, ಯಾದಗಿರಿ ಹಾಗೂ ರಾಯಚೂರ ಜಿಲ್ಲೆಗಳ ರೈತರಿಗೆ 2021ರ ಡಿಸೆಂಬರ್ 9 ಹಾಗೂ 10 ರಂದು ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಹಾಗೂ ಡಿಸೆಂಬರ್ 14 ಹಾಗೂ 15 ರಂದು ವೈಜ್ಞಾನಿಕ ಹೈನುಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಉಪನಿರ್ದೇಶಕರು ತಿಳಿಸಿದ್ದಾರೆ.
ತರಬೇತಿಗೆ ಹಾಜರಾಗುವ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಮಾಸ್ಕ್ನ್ನು ಅವರೇ ತರಬೇಕು. ರೈತರಿಗೆ ಯಾವುದೇ ಭತ್ಯೆ ಇರುವುದಿಲ್ಲ. ಮಧ್ಯಾಹ್ನ ಅಲ್ಪ ಉಪಹಾರ ನೀಡಲಾಗುತ್ತದೆ. ಎರಡು ದಿನಗಳ ಕಾಲ ಕಡ್ಡಾಯವಾಗಿ ತರಬೇತಿಗೆ ಹಾಜರಾದವರಿಗೆ ಮಾತ್ರ ತರಬೇತಿ ಪ್ರಮಾಣಪತ್ರ ನೀಡಲಾಗುತ್ತದೆ.
ಈ ತರಬೇತಿಗೆ ಹಾಜರಾಗುವ ರೈತರು ಅರ್ಜಿಯ ಜೊತೆಗೆ ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಆಧಾರ ಕಾರ್ಡ್ ಪ್ರತಿ ಲಗತ್ತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣಪತ್ರ ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಪಶು ಪಾಲನೆ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ಸೇಡಂ ರಸ್ತೆ ಕಲಬುರಗಿ ವಿಳಾಸಕ್ಕೆ ಅಥವಾ ಕಚೇರಿ ದೂರವಾಣಿ ಸಂಖ್ಯೆ 08472-220576ಗೆ ಸಂಪರ್ಕಿಸಲು ಕೋರಲಾಗಿದೆ.