Goat and sheep free training : ಕಲಬುರಗಿ ಎಸ್.ಬಿ.ಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಕುರಿ ಮತ್ತು ಆಡು ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ ಆರ್.ಸೆಟ್ ನಿರ್ದೇಶಕರು ತಿಳಿಸಿದ್ದಾರೆ.
ಫೆಬ್ರವರಿ 26 ರಿಂದ ಮಾರ್ಚ್ 7 ರವರೆಗೆ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಫೆಬ್ರವರಿ 25 ಕೊನೆಯ ದಿನವಾಗಿದೆ. ಮಾರ್ಚ್ 17 ರಿಂದ ಏಪ್ರೀಲ್ 15 ರವರೆಗೆ ವಸ್ತ್ರ ಚಿತ್ರಕಲಾ ಉದ್ಯಮಿ (ಕಸೂತಿ ಮತ್ತು ಬಟ್ಟೆಯ ಚಿತ್ರಕಲೆ) ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಮಾರ್ಚ್ 16 ಕೊನೆಯ ದಿನವಾಗಿದೆ. ಈ ತರಬೇತಿ ಸಂದರ್ಭದಲ್ಲಿಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ.
Goat and sheep free training ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ವಯೋಮಿತಿ 18 ರಿಂದ 45 ವಯೋಮಾನದೊಳಗಿನ ಬಿಪಿಎಲ್, ಅಂತ್ಯೋದಯ ರೇಶನ್, ಎಮ್.ಜಿ.ಎನ್.ಆರ್.ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ ಯಾವ ಯಾವ ಸರ್ವೆ ನಂಬರಿಗೆ FID ಲಿಂಕ್ ಆಗಿವೆ? ಇಲ್ಲೇ ಚೆಕ್ ಮಾಡಿ
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 944899485, 9886781239 ಹಾಗೂ 9900135705 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
2 ಲಕ್ಷ ರೈತರಿಗೆ 76 ಕೋಟಿ ಬೆಳೆ ವಿಮೆ ಪರಿಹಾರ ಜಮೆ
ಪ್ರಸಕ್ತ 2024-25ನೇ ಸಾಲಿನ ಬೆಳೆ ವಿಮೆ ಸ್ಥಳೀಯ ವಿಕೋಪದಡಿ ಜಿಲ್ಲೆಯ ಒಟ್ಟು 2,03,720 ರೈತರಿಗೆ 76.94 ಕೋಟಿ ರೂಪಾಯಿ ಪರಿಹಾರ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ.
ಹೌದು, ರೈತರು ತಮ್ಮ ಬ್ಯಾಂಕುಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳುವಂತೆ ಕಲಬುರಗಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.
ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ
2023-24 ನೇ ಸಾಲೀನ ಮುಂಗಾರು ಹಂಗಾಮಿನ ಬೆಳೆ ವಿಮೆ ಹಣ ಜಮೆಯಾಗಿದೆಯೋಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು 2024-25 ರ ಕೆಳಗಡೆ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಫಾರ್ಮರ್ಸ್ ಕಾಲಂ ಕೆಳಗಡೆ ಕಾಣುವ Check Status ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊದು ಪೇಜ್ ತೆರೆದುಕೊಳ್ಳುತ್ತದೆ.
ಅಲ್ಲಿ ನಿಮಗೆ Proposal ಹಾಗೂ Mobile No. ಮತ್ತು Aadhaar ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು ಮೊಬೈಲ್ ನಂಬರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಬೆಳೆ ವಿಮೆ ಮಾಡಿಸುವಾಗ ಯಾವ ಮೊಬೈಲ್ ನಂಬರ್ ಕೊಟ್ಟಿರುತ್ತಾರೋ ಆ ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ಮೇಲೆ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಒಂದು ವೇಳೆ ಕ್ಯಾಪ್ಚ್ಯಾ ಕೋಡ್ ಸರಿಯಾಗಿ ಕಾಣಿಸದಿದ್ದರೆ ರಿಫ್ರೆಶ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಹೊಸ ಕ್ಯಾಪ್ಚ್ಯಾ ಕೋಡ್ ಅಪ್ಡೇಟ್ ಆಗುತ್ತದೆ. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬ ಮಾಹಿತಿ ಕಾಣಿಸುತ್ತದೆ. ಈಗಲೇ ಚಕ್ ಮಾಡಿಕೊಳ್ಳಬಹುದು.