ಕುರಿ ಸಾಕಾಣಿಕೆಗೆ 50 ಸಾವಿರ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Goat and Sheep subsidy: ಕುರಿ, ಮೇಕೆ ಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಗುಡ್ ನ್ಯೂಸ್ ಇಲ್ಲಿದೆ. ಕುರಿ ಸಾಕಾಣಿಕೆ ಮಾಡಿ ಸ್ವಯಂ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ರೈತರಿಗೆ ಸರ್ಕಾರದ ವತಿಯಿಂದ  50 ಸಾವಿರ ರೂಪಾಯಿ ಸಬ್ಸಿಡಿ ನೀಡಲಾಗುವುದು.

ಹೌದು, ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ 50 ಸಾವಿರ ರೂಪಾಯಿಸಹಾಯಧನ ಹಾಗೂ 50 ಸಾವಿರ ರೂಪಾಯಿ  ಸಾಲ ಮಂಜೂರು ಮಾಡಲಾಗುವುದು.

ಕುರಿ ಸಾಕಾಣಿಕೆ ಘಟಕದ ವೆಚ್ಚ 1 ಲಕ್ಷ ರೂಪಾಯಿ ಇರಲಿದೆ. ಇದರಲ್ಲಿ 50 ಸಾವಿರ ರೂಪಾಯಿ ಸಬ್ಸಿಡಿ ನೀಡಲಾಗುವುದು. ಉಳಿದ 50 ಸಾವಿರ ರೂಪಾಯಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು.

ಕುರಿ ಸಾಕಾಣಿಕೆಗೆ 50 ಸಾವಿರ ರೂಪಾಯಿ ಸಬ್ಸಿಡಿ ನೀಡಲು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನವಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರು ಉದ್ದೇಶ ಬದಲಾವಣೆಗೆ ಇಚ್ಚಿಸಿದಲ್ಲಿ ನೇರವಾಗಿ ವೆಬ್ಸೈಟ್ ವಿಳಾಸ https://swdcorp.karnataka.gov.in/ADCIPortal ನಲ್ಲಿಉದ್ದೇಶ ಬದಲಾವಣೆ ಮಾಡಬಹುದು. ಅಥವಾ ಸಂಬಂಧಿಸಿದ ಜಿಲ್ಲಾ ಕಚೇರಿಗಳಲ್ಲಿ ಮನವಿ ಪತ್ರ ಸಲ್ಲಿಸಬಹುದು.

2023-24 ಹಾಗೂ 2024-25ನೇ ಸಾಲಿನಲ್ಲಿಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

Goat and Sheep subsidy ಅರ್ಜಿ ಎಲ್ಲಿ ಸಲ್ಲಿಸಬೇಕು?

ಕುರಿ ಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರು ಡಿಸೆಂಬರ್ 29 ರೊಳಗಾಗಿ https://sevasindhu.karnataka.gov.in

ನಲ್ಲಿ ಗ್ರಾಮ ಒನ್, ಬೆಂಗಳೂರು, ಕರ್ನಾಟಕ ಒನ್ ಅಥವಾ ಸಿ.ಎಸ್.ಸಿ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಚೇರಿ ಅಥವಾ ನಿಗಮಗಳ ವೆಬ್ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ, ಎಸ್.ಟಿ ಸಹಾಯವಾಣಿ 9482300400 ಗೆ ಸಂಪರ್ಕಿಸಬಹುದು.

ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ಕುರಿ, ಮೇಕೆ ಸಾಕಾಣಿಕೆಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ರುಡ್ ಸೆಟ್ ಸಂಸ್ಥೆ  ಡಿಸೆಂಬರ್ 26 ರಿಂದ ಕುರಿ ಮೇಕೆ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ PM kisan eKYC ನಿಮ್ಮ Mobile ನಲ್ಲಿ ಹೀಗೆ ಚೆಕ್ ಮಾಡಿ

ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಡಿಸೆಂಬರ್ 23 ರೊಳಗೆ ಅರ್ಜಿ ಸಲ್ಲಿಸಬೇಕು.

ವಿಳಾಸ ರುಡ್ ಸೆಟ್ ಸಂಸ್ಥೆ, ಅರಿಶಿನ ಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೊಬೈಲ್ ಸಂಖ್ಯೆ 9380162042,9241482541, 9740982585 ಗೆ ಸಂಪರ್ಕಿಸಲು ಕೋರಲಾಗಿದೆ.

ಉಚಿತವಾಗಿ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ

ಉಚಿತವಾಗಿ 20 ಕೋಳಿ ಮರಿಗಳನ್ನು ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಹೌದು, ಕಲಬುರಗಿ, ಯಾದಗಿರಿ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2024-25ನೇ ಸಾಲಿನ 5 ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಉಚಿತವಾಗಿ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಪಶುಪಾಲನಾ ಇಲಾಖೆ ಉಪ ನಿರ್ದೇಶಕ (ಆಡಳಿತ) ಡಾ. ರಾಜು ದೇಶಮುಖ ಅವರು ತಿಳಿಸಿದ್ದಾರೆ.

ಯಾರು ಯಾರಿಗೆ  ಉಚಿತ ಕೋಳಿ ವಿತರಿಸಲಾಗುವುದು?

ಕರ್ನಾಟಕ ಸಹಕಾರ ಕುಕ್ಕಟ ಮಂಡಳಿ ನಿಯಮಿತ ವತಿಯಿಂದ 5 ವಾರದ ಕೋಳಿಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20 ರಂತೆಕೋಳಿ ಮರಿಗಳನ್ನು ವಿತರಿಸಿ ಅವರ ಆದಾಯ ಹೆಚ್ಚಿಸುವ ಕಾರ್ಯಕ್ರಮಕ್ಕೆ ಸಂಬಂಧಿಸಿದ ಮಹಿಳಾ ರೈತರಿಂದ ಜಿಲ್ಲೆಯ ಎಲ್ಲಾ ತಾಲೂಕಿನ ಪಶು ವೈದ್ಯಾಧಿಕಾರಿಗಳು (ಆಡಳಿತ)ಅಥವಾ ಸಹಾಯಕ ನಿರ್ದೇಶಕರು ಕಚೇರಿ ಸಮಯದಲ್ಲಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಪಶು ವೈದ್ಯ ಸಂಸ್ಥೆ ಅಥವಾ ತಾಲೂಕು ಸಹಾಯಕ ನಿರ್ದೇಶಕರು ಕಚೇರಿಗೆ ಡಿಸೆಂಬರ್ 23 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment