Goat farming ಕಲಬುರಗಿಯ ಸೇಡಂ ರಸ್ತೆಯಲ್ಲಿರುವ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕಲಬುರಗಿ, ಯಾದಗಿರಿ ಮತ್ತು ರಾಯಚೂರ ಜಿಲ್ಲೆಗಳ ರೈತರಿಗೆ ನವೆಂಬರ್ 9 ಹಾಗೂ 10 ರಂದು ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಹಾಗೂ ನವೆಂಬರ್ 23 ಹಾಗೂ 24 ರಂದು ವೈಜ್ಞಾನಿಕ ಹೈನುಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಉಪನಿರ್ದೇಶಕರು ತಿಳಿಸಿದ್ದಾರೆ.
Goat farming ತರಬೇತಿಯಲ್ಲಿ ಏನೇನು ನೀಡಲಾಗುವುದು?
ತರಬೇತಿಗೆ ಹಾಜರಾಗುವ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಮಾಸ್ಕ್ ನ್ನು ರೈತರೇ ತರಬೇಕು. ರೈತರಿಗೆ ಯಾವುದೇ ಭತ್ಯೆ ಇರುವುದಿಲ್ಲ. ಮಧ್ಯಾಹ್ನ ಅಲ್ಪ ಉಪಹಾರ ನೀಡಲಾಗುತ್ತದೆ. ಎರಡು ದಿನಗಳ ಕಾಲ ಕಡ್ಡಾಯವಾಗಿ ತರಬೇತಿಗೆ ಹಾಜರಾದವರಿಗೆ ಮಾತ್ರ ತರಬೇತಿ ಪ್ರಮಾಣಪತ್ರ ನೀಡಲಾಗುತ್ತದೆ.
ಈ ತರಬೇತಿಗೆ ಹಾಜರಾಗುವ ರೈತರು ಅರ್ಜಿಯ ಜೊತೆಗೆ ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಆಧಾರ ಕಾರ್ಡ್ ಪ್ರತಿ ಲಗತ್ತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣಪತ್ರ ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಪಶು ಪಾಲನೆ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ಸೇಡಂ ರಸ್ತೆ ಕಲಬುರಗಿ ವಿಳಾಸಕ್ಕೆ ಅಥವಾ ಕಚೇರಿ ದೂರವಾಣಿ ಸಂಖ್ಯೆ 08472-220576ಗೆ ಸಂಪರ್ಕಿಸಲು ಕೋರಲಾಗಿದೆ.
ಉಚಿತ ಸಹಾಯವಾಣಿಗೆ ಕರೆ ಮಾಡಿ ಪಡೆಯಿರಿ ಮಾಹಿತಿ
ರಾಜ್ಯ ಸರ್ಕಾರವು ಹೈನುಗಾರಿಕೆ,ಕುರಿ ಸಾಕಾಣಿಕೆ ಮಾಡಲಿಚ್ಚಿಸುವ ರೈತರಿಗೆ ಉಚಿತ ಸಹಾಯವಾಣಿಯನ್ನು ಆರಂಭಿಸಿಂದೆ. ಕೇವಲ ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆಯಷ್ಟೇ ಅಲ್ಲ, , ಕೋಳಿ ಸಾಕಾಣಿಕೆ, ಮೊಲ ಸಾಕಾಣಿಕೆ ಹಾಗೂ ಹಂದಿ ಸಾಕಾಣಿಕೆ ಕುರಿತು ಸಹ ಸಂಪೂರ್ಣವಾಗಿ ಉಚಿತ ಮಾಹಿತಿ ಪಡೆಯಬಹುದು.
ಇದನ್ನೂ ಓದಿ ನಿಮ್ಮ ಜಮೀನಿನ ಮ್ಯಾಪ್ mobileನಲ್ಲಿ ಡೌನ್ಲೋಡ್ ಮಾಡಿ
ಇದಕ್ಕಾಗಿ ರೈತರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಮಾಹಿತಿ ಪಡೆಯಲು ಪಶು ಇಲಾಖೆ ಕಚೇರಿಗೂ ಹೋಗುವ ಅವಶ್ಯಕತೆಯಿಲ್ಲ. ಮನೆಯಲ್ಲಿಯೇ ಕುಳಿತು ಮಾಹಿತಿ ಪಡೆಯಬಹುದು. . ಪಶು ಇಲಾಖೆಯ ತಜ್ಞರಿಂದ ಮಾಹಿತಿ ಪಡೆಯಲು ಬಯಸಿದ್ದರೆ 8277 100 200 ಈ ಉಚಿತ ಸಹಾಯವಾಣಿಗೆ 24*7 ಕರೆ ಮಾಡಿದರೆ ಸಾಕು ನಿಮ್ಮ ಜಿಲ್ಲೆಯ, ತಾಲೂಕಿನ ಪಶು ಇಲಾಖೆಯ ಸಿಬ್ಬಂದಿಯೊಂದಿಗೆ ಸಂಪರ್ಕ ನೀಡಲಾಗುವುದು. ಉಚಿತ ಸಹಾಯವಾಣಿಗೆ ಕರೆ ಮಾಡಿದ ರೈತರಿಗೆ ಪಶುವೈದ್ಯರು ಮತ್ತು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆಯಬಹುದು.
ಈ ಉಚಿತ ಸಹಾಯವಾಣಿಯಿಂದ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಹೀಗೂ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲಸೌಲಭ್ಯ ಕುರಿತು ಮಾಹಿತಿ ನೀಡಲಾಗುವುದು.