goat farming subsidy 50 thousand : ಕುರಿ ಸಾಕಾಣಿಕೆಗೆ ಘಟಕ ಸ್ಥಾಪಿಸಿಲು 50 ಸಾವಿರ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕುರಿ ಸಾಕಾಣಿಕೆ ಮಾಡಲು 50 ಸಾವಿರ ಸಬ್ಸಿಡಿ ಮತ್ತು ಹಾಗೂ 50 ಸಾವಿರ ರೂಪಾಯಿಯವರೆಗೆ ಸಾಲ ನೀಡಲಾಗುವುದು. ಈ ಸಾಲಕ್ಕೆ ಶೇ. 4 ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಕುರಿಸಾಕಾಣಿಕೆಗೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಹಾಗೂ ಯಾರು ಯಾರು ಅರ್ಜಿ ಸಲ್ಲಿಸಲಬಹುದು ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ.
goat farming subsidy 50 thousand ಯಾವ ಯಾವ ನಿಗಮಗಳಿಂದ ಅರ್ಜಿ ಆಹ್ವಾನ
ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ ಸಹಯೋಗದೊಂದಿಗೆ) ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ರೈತರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಸೇವಾ ಸಿಂಧು ವೆಬ್ಸೈಟ್ ಮೂಲಕ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
https://sevaone.karnataka.gov.in/services
ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.
ಹೈನುಗಾರಿಕೆಗೂ ಸಬ್ಸಿಡಿ ಸಿಗಲಿದೆ
ಸಫಾಯಿ ಕರ್ಮಚಾರಿ ನಿಗಮ ಹೊರತು ಪಡಿಸಿ ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮ ಹಸುಗಳಿಗೆ ಘಟಕ ವೆಚ್ಚದ ಶೇ. 50 ರಷ್ಟು ಅಥವಾ ಗರಿಷ್ಠ 1.25 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು.
ಇದನ್ನೂ ಓದಿ : ನಿಮ್ಮ ಜಮೀನಿನ ಇ ಸ್ವತ್ತು ಮೊಬೈಲ್ ನಲ್ಲಿ ಈಗೆ ಚೆಕ್ ಮಾಡಿ
ಇತರೆ ಉದ್ದೇಶ – ಸಣ್ಮ ಕೈಗಾರಿಕೆ, ಸೇವಾ ಕ್ಷೇತ್ರ, ವ್ಯಾಪಾರ ಮತ್ತು ಇತರೆ ಉದ್ದೇಶಗಳಿಗೆ ಘಟಕ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಠ 2 ಲಕ್ಷ ರೂಪಾಯಿಗಳ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದವರಾಗಿರಬೇಕು. ಆದಿ ಕರ್ನಾಟಕ, ಆದಿ ಆಂದ್ರ, ಆದಿ ದ್ರಾವಿಡ ಎಂಬ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದಲ್ಲಿ ಕಡ್ಡಾಯವಾಗಿ ಮೂಲ ಜಾತಿಯನ್ನು ನಮೂದಿಸಿದ ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
ಅರ್ಜಿ ಸಲ್ಲಿಸಲು ಭಾವಚಿತ್ರ ಬೇಕು. ಜಾತಿ ಪತ್ರ (ಆರ್.ಡಿ ಸಂಖ್ಯೆ ಹೊಂದಿರಬೇಕು), ಆದಾಯ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು), ಆಧಾರ್ ಕಾರ್ಡ್ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಚೇರಿ ಅಥವಾ ನಿಗಮಗಳ ವೆಬ್ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ, ಎಸ್.ಟಿ ಸಹಾಯವಾಣಿ 9482300400 ಗೆ ಸಂಪರ್ಕಿಸಬಹುದು.





