Goat farming subsidy information : ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ರೈತರಿಗೆ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, 2025-26ನೇ ಸಾಲಿನಲ್ಲಿ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಮುದಾಯದ ಫಲಾನುಪೇಕ್ಷಿಗಳಿಗೆ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಈ ಕೆಳಕಂಡ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಕುರಿ ಸಾಕಾಣಿಕೆ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ (ಸ್ವಾವಲಂಭಿ ಸಾರಥಿ, ಫುಡ್‌ಕಾರ್ಟ್-ಮೊಬೈಲ್ ಕಿಚನ್ ಉದ್ದೇಶಕ್ಕಾಗಿ, ಹೈನುಗಾರಿಕೆ, ವ್ಯಾಪಾರ ಮತ್ತು ಇನ್ನಿತರ ಉದ್ದೇಶಕ್ಕಾಗಿ), ಮೈಕ್ರೋ ಕ್ರೆಡಿಟ್ ಕಿರುಸಾಲ ಯೋಜನೆ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಹೈನುಗಾರಿಕೆ ಯೋಜನೆಯಡಿ 1.25 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ಈ ಹಿಂದಿನ ಸಾಲಿನಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅರ್ಹ ಫಲಾನುಭವಿಗಳು ಕರ್ನಾಟಕ ಒನ್/ಗ್ರಾಮ ಒನ್/ಸೇವಾ ಸಿಂಧು ಪೋರ್ಟಲ್‌ದಲ್ಲಿ ಆನ್‌ಲೈನ್ ಮೂಲಕ 2025ರ ಸೆಪ್ಟೆಂಬರ್ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
Goat farming subsidy information ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಪ್ರಸಕ್ತ 2025-26ನೇ ಸಾಲಿನಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಮುದಾಯದ ಫಲಾನುಪೇಕ್ಷಿಗಳಿಗೆ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಈ ಕೆಳಕಂಡ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಕುರಿ ಸಾಕಾಣಿಕೆ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ (ಸ್ವಾವಲಂಭಿ ಸಾರಥಿ, ಫುಡ್‌ಕಾರ್ಟ್-ಮೊಬೈಲ್ ಕಿಚನ್ ಉದ್ದೇಶಕ್ಕಾಗಿ, ಹೈನುಗಾರಿಕೆ, ವ್ಯಾಪಾರ ಮತ್ತು ಇನ್ನಿತರ ಉದ್ದೇಶಕ್ಕಾಗಿ), ಮೈಕ್ರೋ ಕ್ರೆಡಿಟ್ ಕಿರುಸಾಲ ಯೋಜನೆ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಈ ಹಿಂದಿನ ಸಾಲಿನಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅರ್ಹ ಫಲಾನುಭವಿಗಳು ಕರ್ನಾಟಕ ಒನ್/ಗ್ರಾಮ ಒನ್/ಸೇವಾ ಸಿಂಧು ಪೋರ್ಟಲ್‌ದಲ್ಲಿ ಆನ್‌ಲೈನ್ ಮೂಲಕ 2025ರ ಸೆಪ್ಟೆಂಬರ್ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಲು ಕೋರಲಾಗಿದೆ.





