ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

Written by By: janajagran

Updated on:

Goat sheep farming ಕುರಿ, ಮೇಕೆ ಸಾಕಾಣಿಕೆ ಮಾಡಲಿಚ್ಚಿಸುವ ರೈತರಿಗೆ ಸಂತಸದ ಸುದ್ದಿ. ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದಲ್ಲಿ ರೈತರಿಗೆ ವೈಜ್ಞಾನಿಕವಾಕವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡಲು ರೈತರಿಂದ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ.

ಕಲಬುರಗಿ ಸೇಡಂ ರಸ್ತೆಯ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದ ಪಶು ಆಸ್ಪತ್ರೆಯ ಆವರಣದಲ್ಲಿ ರೈತರಿಗೆ ಇದೇ ಸೆಪ್ಟೆಂಬರ್ 7 ಹಾಗೂ 8 ರಂದು ಎರಡು ದಿನಗಳ ಕಾಲ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಾಗೂ ಸೆಪ್ಟೆಂಬರ್ 14 ಹಾಗೂ 15 ರಂದು ಎರಡು ದಿನಗಳ ಕಾಲ ವ್ಶೆಜ್ಞಾನಿಕ ಹೈನುಗಾರಿಕೆ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಕಲಬುರಗಿ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದ ಉಪನಿರ್ದೇಶಕರು ತಿಳಿಸಿದ್ದಾರೆ.

ತರಬೇತಿಗೆ ಹಾಜರಾಗುವ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಮಾಸ್ಕ್ ನ್ನು ತಾವೇ ತರಬೇಕು. ತರಬೇತಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ. ಮಧ್ಯಾಹ್ನ ಅಲ್ಪ ಉಪಹಾರ ನೀಡಲಾಗುತ್ತದೆ. ಎರಡು ದಿನಗಳ ಕಾಲ ಕಡ್ಡಾಯವಾಗಿ ತರಬೇತಿಗೆ ಹಾಜರಾದ್ದಲ್ಲಿ ಮಾತ್ರ ತರಬೇತಿ ಪ್ರಮಾಣಪತ್ರ ನೀಡಲಾಗುತ್ತದೆ.

ಇದನ್ನೂ ಓದಿ : ನಿಮ್ಮ ಜಮೀನಿಗೆ ಹೋಗುವ ಕಾಲುದಾರಿ, ಎತ್ತಿನಬಂಡಿ ಹೋಗುವ ದಾರಿ, ಕೆರೆಕಟ್ಟೆ, ನಿಮ್ಮ ಸರ್ವೆನಂಬರ್ ನೋಡಬೇಕೆ… ಇಲ್ಲಿದೆ ಮಾಹಿತಿ

ರೈತರು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಆಧಾರ್ ಕಾರ್ಡ್ ಝೆರಾಕ್ಸ್, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರವನ್ನು  ತರಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-220576ಗೆ ಸಂಪರ್ಕಿಸಲು ಕೋರಲಾಗಿದೆ.

ಕುರಿ ಸಾಕಾಣಿಕೆ ಮಾಹಿತಿ ನೀಡಲು (FREE HELPLINE FOR GOAT FARMING)ಉಚಿತ ಸಹಾಯವಾಣಿ

ಶುಪಾಲನೆ, ಕುರಿ ಸಾಕಾಣಿಕೆ ಅಷ್ಟೇ ಅಲ್ಲ, ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಮೊಲ ಸಾಕಾಣಿಕೆ ಹಾಗೂ ಹಂದಿ ಸಾಕಾಣಿಕೆ ಕುರಿತು ಸಹ  ಸಂಪೂರ್ಣ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವುದೇ ಕರೆ ಶುಲ್ಕ ಪಾವತಿಸುವ ಅವಶ್ಯಕತೆಯಿಲ್ಲ. ಪಶು ಇಲಾಖೆಯ ತಜ್ಞರಿಂದ ಮಾಹಿತಿ ಪಡೆಯಲು ಬಯಸಿದ್ದರೆ ಈ ಉಚಿತ ಸಹಾಯವಾಣಿಗೆ ಕರೆ ಮಾಡಿದರೆ ಸಾಕು ನಿಮ್ಮ ಜಿಲ್ಲೆಯ, ತಾಲೂಕಿನ ಪಶು ಇಲಾಖೆಯ ಸಿಬ್ಬಂದಿಯೊಂದಿಗೆ ಸಂಪರ್ಕ ನೀಡಲಾಗುವುದು. ನಿಮಗೆ ಬೇಕಾದ ಮಾಹಿತಿ ಪಶು ಇಲಾಖೆಯ ಸಿಬ್ಬಂದಿಗಳಿಗೆ ಮನೆಯಲ್ಲಿಯೇ ಕುಳಿತು ಪಡೆಯಬಹುದು. ಅದು ಹೇಗೆ ಅಂದುಕೊಂಡಿದ್ದೀರಾ. ಇಲ್ಲಿದೆ  ಸಂಪೂರ್ಣ ಮಾಹಿತಿ.

ರೈತರು ದೂರವಾಣಿ ಸಂಖ್ಯೆ 8277 100 200 (ಉಚಿತ)  24*7  ಕರೆ ಮಾಡಿ ಪಶುವೈದ್ಯರು ಮತ್ತು  ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆಯಬಹುದು.

Goat sheep farming ಸಹಾಯವಾಣಿಯ ಮೂಲಕ ಲಭ್ಯವಿರುವ ಮಾಹಿತಿಗಳು:

ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು.

ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಹಾಗೂ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ವಿವರ ನೀಡಲಾಗುವುದು

ದೇಶಿ ಹಾಗೂ ವಿದೇಶಿ ಜಾನವಾರು ತಳಿಗಳ ಬಗ್ಗೆ ಮಾಹಿತಿ ನೀಡಲಾಗುವುದು.

ಜಾನುವಾರುಗಳಲ್ಲಿ ನಿಯಮಿತವಾಗಿ ನೀಡಬೇಕಾಗಿರುವ ಲಸಿಕೆಗಳ ಕುರಿತು ಮಾಹಿತಿ ನೀಡಲಾಗುವುದು.

ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲ ಸೌಲಭ್ಯ ಕುರಿತು ಮಾಹಿತಿ ನೀಡಲಾಗುವುದು.

ಮಿಶ‍್ರತಳಿ ಹಸು, ಕುರಿ ಮತ್ತು ಮೇಕೆ, ಹಂದಿಗಳ ಅಂದಾಜು ಬೆಲೆ ಹಾಗೂ ಅವುಗಳ ಲಭ್ಯತೆ ಕುರಿತಂತೆ ಸೂಕ್ತ ಸ್ಥಳಗಳ ವಿವರ ನೀಡಲಾಗುವುದು.

ಯಶಸ್ವಿ ಹೈನುಗಾರಿಕೆಗೆ ಅಗತ್ಯವಿರುವ ಮೇವಿನ ಬೆಳೆಗಳ ಬಗ್ಗೆ ಮಾಹಿತಿ ನೀಡಲಾಗುವುದು.

ತುರ್ತು ಪಶುವೈದ್ಯ ಸೇವೆಗಾಗಿ ಒಳಬರುವ ಕರೆಗಳನ್ನು ಹತ್ತಿರದ ಇಲಾಖಾ ತಾಂತ್ರಿಕ ಸಿಬ್ಬಂದಿ/ಅಧಿಕಾರಿಗೆ ವರ್ಗಾಯಿಸಿ, ಅಗತ್ಯ ಸೇವೆ ದೊರೆಯುವಂತೆ ಸಹಕರಿಸಲಾಗುವುದು.

Leave a Comment