Goat purchase subsidy get : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿಯಲ್ಲಿ 10 + 1 ಕುರಿ ಅಥವಾ ಮೇಕೆ ಘಟಕ ಯೋಜನೆಯನ್ನು ಅನುಷ್ಠಾನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು ಜಿಲ್ಲೆಗೆ ಪರಿಶಿಷ್ಟ ಜಾತಿ -23, ಪರಿಶಿಷ್ಟ ಪಂಗಡ 22 ಸೇರಿ ಒಟ್ಟು 45 ಗುರಿಯನ್ನು ನೀಡಲಾಗಿದ್ದು, ಸರ್ಕಾರದ ಮಾರ್ಗ ಸೂಚಿಗಳಂತೆ ವಿಧಾನ ಸಭಾ ಕ್ಷೇತ್ರದ ಶಾಸಕ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಫಲಾನುಭವಿಗಳ ಆಯ್ಕೆ ಸಮಿತಿ ಮೂಲಕ ಆಯ್ಕೆ ನಡೆಯಲಿದೆ.
ಈ ಯೋಜನೆಯ ಗ್ರಾಮೀಣ ಭಾಗದ ಎಸ್ಟಿ ಮತ್ತು ಎಸ್ಟಿ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಪಡೆದು ಮಾರ್ಚ್ 11 ರೊಳಗಾಗಿ ದ್ವಿ ಪ್ರತಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು ಮುಖ್ಯ ಪಶು ವೈದ್ಯಾಧಿಕಾರಿಗಳು ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ನಿಗಮದ ಸಹಾಯಕ ನಿರ್ದೇಶಕ ಕಚೇರಿ ರಾಯಚೂರುರನ್ನು ಸಂಪರ್ಕಿಸಬಹುದು ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
Goat purchase subsidy get ಬಾಗಲಕೋಟೆ ಜಿಲ್ಲೆಯಿಂದಲೂ ಅರ್ಜಿ ಆಹ್ವಾನ
ಪ್ರಸಕ್ತ 2025-26ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ವಿಶೇಷ ಘಟಕ ಯೋಜನೆ ಅಡಿಯಲ್ಲಿ ಜಿಲ್ಲೆಗೆ 18 ಜನ ಫಲಾನುಭವಿಗಳು ಹಾಗೂ ಗಿರಿಜಯ ಉಪ ಯೋಜನೆಯಡಿ 5 ಜನ ಫಲಾನುಭವಿಗಳಿಗೆ 10 + 1 ಕುರಿ ಮೇಕೆ ಘಟಕ ಸ್ಥಾಪಿಸುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಹಾಗೂ ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು.
ಇದನ್ನೂ ಓದಿ ದನಕಾಯುವವರಿಗೆ ತಿಂಗಳಿಗೆ 10 ಸಾವಿರ ರುಪಾಯಿ ನೀಡುವ ಯೋಜನೆ ಮಾಹಿತಿ ಇಲ್ಲಿದೆ
ಅರ್ಜಿದಾರರು ಆರ್. ಡಿ ನಂಬರ್ ಹೊಂದಿರುವ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು. ರೇಶನ್ ಕಾರ್ಡ್, ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಆಸಕ್ತರು ಅರ್ಜಿಗಳನ್ನು ಆಯಾ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ಪಶು ಆಸ್ಪತ್ರೆಯಿಂದ ಪಡೆದುಕೊಂಡು ಪ್ರಕಟಣೆ ದಿನಾಕಂದಿಂದ 10 ದಿನದ ಒಳಗಾಗಿ ಅರ್ಜಿಯನ್ನು ದ್ವಿ ಪ್ರತಿಯಲ್ಲಿ ಸಲ್ಲಿಸುವಂತೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕುರಿ ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಕುರಿ ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಸಾಗಿದೆ.
ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಫ ಯೋಜನೆ ಅಡಿಯಲ್ಲಿ (10 + 1 ) ಕುರಿ ಅಥವಾ ಮೇಕೆ ಘಟಕ ಸ್ಥಾಪಿಸಲು ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು, ಮತ್ತು ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡಿರುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಶೇಷ ಘಟಕ ಯೋಜನೆ 14 ಕುರಿ ಮೇಕೆ ಘಟಕ ಹಾಗೂ ಗಿರಿಜನ ಉಫ ಯೋಜನೆ 8 ಕುರಿ ಮೇಗೆ ಘಟಕಗಳನ್ನು ಸ್ಥಾಪಿಸಲು ಹಾವೇರಿ ಜಿಲ್ಲೆಗೆ ಒಟ್ಟು 22 ಗುರಿಗಳಿದ್ದು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಹಾವೇರಿ ಕಚೇರಿಯಿಂದ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಮಾರ್ಚ್ 12 ರ ಸಂಜೆ 5 ಗಂಟೆಯೊಳಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಹಾವೇರಿ ಕಚೇರಿ ಸಲ್ಲಿಸೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಕಚೇರಿ ಸಂಪರ್ಕಿಸಲು ಕೋರಲಾಗಿದೆ.





