ಕುರಿ, ಮೇಕೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ

Written by Ramlinganna

Updated on:

10 days free training ಕುರಿ, ಮೇಕೆ ಸಾಕಾಣಿಕೆ ಹಾಗೂ ಹೈನುಗಾರಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಉಚಿತವಾಗಿ ತರಬೇತಿ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯಿಂದ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು 10 ದಿನಗಳ ಕಾಲ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ- ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವಯೋಮಾನದವರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 10 ಕೊನೆಯ ದಿನವಾಗಿದೆ.

ಆಸಕ್ತರು ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಖುದ್ದಾಗಿ ಭೇಟಿ ನೀಡಬಹುದು. ಅಥವಾ ಕಚೇರಿ ದೂರವಾಣಿ ಸಂಖ್ಯೆ080 27728166, ಮೊಬೈಲ್ ನಂಬರ್ 9113880324, 8884554510, 8050549412. 9241482541, 9740982585 ಇಲ್ಲಿಗೆ ಸಂಪರ್ಕಿಸಬಹುದು ಎಂದು ರುಡ್ ಸೆಟ್ ಸಂಸ್ಥೆ ಬೆಂಗಳೂರು ಶಾಖೆ ನಿರ್ದೇಶಕ ಆನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

10 days free training ಕುರಿ, ಕೋಳಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಕುರಿ, ಕೋಳಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ರೈತರಿಗೆ, ರೈತ ಮಹಿಳೆಯರಿಗೆ ಹಾಗೂ ಆಸಕ್ತಿಯುಳ್ಳ ಹಾಸನ ಜಿಲ್ಲೆಯ ಎಲ್ಲರಿಂದ ಜಿಲ್ಲಾ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ಕುರಿ, ಕೋಳಿ, ಮೇಕೆ ಸೇರಿದಂತೆ ಆಧುನಿಕ ಹೈನುಗಾರಿಕೆ ತರಬೇತಿ ನೀಡಲಾಗುವುದು.

ಅಕ್ಟೋಬರ್ 6 ರಿಂದ 28 ರವರೆಗೆ ನಗರದ ಸಂತೇಪೇಟೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಉಪ ನಿರ್ದೇಶಕ ಕಚೇರಿಯಲ್ಲಿ ಏರ್ಪಡಿಸಲಾಗಿದೆ. ಆಸಕ್ತಿಯುಳ್ಳವರು ತರಬೇತಿ ಪ್ರಾರಂಭವಾಗುವ ದಿನಾಂಕದಂದು ಬೆಳಗ್ಗೆ 10.30 ಗಂಟೆಗೆ ಹಾಜರಾಗುವುದರ ಜೊತೆಗೆ ತಮ್ಮ ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಯನ್ನು ತರಬೇಕು. ಶಿಬಿರಾರ್ಥಿಗಳಿಗೆ ಯಾವುದೇ ಪ್ರಯಾಣ ಭತ್ಯೆ ಅಥವಾ ಸ್ಟೈಫಂಡ್ ನೀಡಲಾಗುವುದಿಲ್ಲ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಉಪ ನಿರ್ದೇಶಕು ತಿಳಿಸಿದ್ದಾರೆ.

ಇದನ್ನೂ ಓದಿ : ಮೊಬೈಲ್ ನಂಬರ್ ಹಾಕಿ ನಿಮ್ಮ ಪಿಎಂ ಕಿಸಾನ್ ಯೋಜನೆ ಹಣ ಜಮೆ ಸ್ಟೇಟಸ್ ಚೆಕ್ ಮಾಡಿ

ಅಕ್ಟೋಬರ್ 6 ರಿಂದ 7 ರವರೆಗೆ ಆಧುನಿಕ ಹೈನುಗಾರಿಕೆ ತರಬೇತಿ, ಅಕ್ಟೋಬರ್ 10 ರಿಂದ 11 ರವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ, ಅಕ್ಟೋಬರ್ 12 ರಿಂದ 13 ರವರೆಗೆ ಕೋಳಿ ಸಾಕಾಣಿಕೆ ತರಬೇತಿ, ಅಕ್ಟೋಬರ್ 14 ರಿಂದ 15 ರವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ನೀಡಲಾಗುವುದು.

ಅಕ್ಟೋಬರ್ 14 ರಿಂದ 15 ರವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ, ಅಕ್ಟೋಬರ್ 20 ರಿಂದ 21 ರವರೆಗೆ ಆಧುನಿಕ ಹೈನುಗಾರಿಕೆ ತರಬೇತಿ ಮತ್ತು27 ರಿಂದ 28 ರವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08172 235226, 9449249283 ಹಾಗೂ 8861740791 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಚಿತ ಸಹಾಯವಾಣಿ

ಕುರಿ ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಹೈನುಗಾರಿಕೆ ಸೇರಿದಂತೆ ಪಶುಪಾಲನೆ ಕುರಿತಂತೆ ರೈತರು ಮನೆಯಲ್ಲಿಯೇ ಕುಳಿತು ಮಾಹಿತಿ ಪಡೆಯಬಹುದು. ಇದಕ್ಕಾಗಿ ಸರ್ಕಾರವು ಪಶುಪಾಲನಾ ಸಹಾಯವಾಣಿಯನ್ನು ಆರಂಭಿಸಿದೆ.

ಹೌದು ರೈತರು ಈ 8277 100 200 ಪಶುಪಾಲನಾ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

Leave a Comment