goat sheep unit money : ಕುರಿ ಮೇಕೆ ಸಾಕಾಣಿಕೆ ಘಟಕ ಸ್ಥಾಪಿಸಲು, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯಡಿ ಕುರಿ ಮೇಕೆ ಘಟಕಗಳ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಚಾಮರಾಜನಗರ ಜಿಲ್ಲೆಗೆ ವಿಶೇಷ ಘಟಕ ಯೋಜನೆಯಡಿ 16 ಮತ್ತು ಗಿರಿಜಯ ಉಪಯೋಜನೆಯಡಿ 6 ಘಟಕಗಳಿಗೆ ಗುರಿ ನಿಗದಿಗೊಳಿಸಿದೆ.
ಯೋಜನೆಯನ್ನು ಅನುಷ್ಠಾನಗೊಳಿಸಲು ವಿಶೇಷ ಘಟಕ ಯೋಜನೆ (ಎಸ್.ಸಿ.ಪಿ) ಮತ್ತು ಗಿರಿಜನ ಉಪ ಯೋಜನೆ (ಟಿಎಸ್.ಪಿ) ಅಡಿಯಲ್ಲಿ 10 +1 ಕುರಿ, ಮೇಕೆ ಘಟಕಗಳ ವಿತರಣೆ ಹಾಗೂ ಸಹಾಯಧನ ಪಡೆಯಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿರುವ ಆಸಕ್ತ ರೈತರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲೂಕುಗಳ ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯ ಸಂಪರ್ಕಿಸಬಹುದು.
goat sheep unit money ಬಾಗಲಕೋಟೆ ಜಿಲ್ಲೆಯಿಂದಲೂ ಅರ್ಜಿ ಆಹ್ವಾನ
ಪ್ರಸಕ್ತ 2025-26ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ವಿಶೇಷ ಘಟಕ ಯೋಜನೆ ಅಡಿಯಲ್ಲಿ ಜಿಲ್ಲೆಗೆ 18 ಜನ ಫಲಾನುಭವಿಗಳು ಹಾಗೂ ಗಿರಿಜಯ ಉಪ ಯೋಜನೆಯಡಿ 5 ಜನ ಫಲಾನುಭವಿಗಳಿಗೆ 10 + 1 ಕುರಿ ಮೇಕೆ ಘಟಕ ಸ್ಥಾಪಿಸುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಹಾಗೂ ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು.
ಅರ್ಜಿದಾರರು ಆರ್. ಡಿ ನಂಬರ್ ಹೊಂದಿರುವ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು. ರೇಶನ್ ಕಾರ್ಡ್, ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಆಸಕ್ತರು ಅರ್ಜಿಗಳನ್ನು ಆಯಾ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ಪಶು ಆಸ್ಪತ್ರೆಯಿಂದ ಪಡೆದುಕೊಂಡು ಪ್ರಕಟಣೆ ದಿನಾಕಂದಿಂದ 10 ದಿನದ ಒಳಗಾಗಿ ಅರ್ಜಿಯನ್ನು ದ್ವಿ ಪ್ರತಿಯಲ್ಲಿ ಸಲ್ಲಿಸುವಂತೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕುರಿ ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಕುರಿ ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಸಾಗಿದೆ.
ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಫ ಯೋಜನೆ ಅಡಿಯಲ್ಲಿ (10 + 1 ) ಕುರಿ ಅಥವಾ ಮೇಕೆ ಘಟಕ ಸ್ಥಾಪಿಸಲು ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು, ಮತ್ತು ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡಿರುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಶೇಷ ಘಟಕ ಯೋಜನೆ 14 ಕುರಿ ಮೇಕೆ ಘಟಕ ಹಾಗೂ ಗಿರಿಜನ ಉಫ ಯೋಜನೆ 8 ಕುರಿ ಮೇಗೆ ಘಟಕಗಳನ್ನು ಸ್ಥಾಪಿಸಲು ಹಾವೇರಿ ಜಿಲ್ಲೆಗೆ ಒಟ್ಟು 22 ಗುರಿಗಳಿದ್ದು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ 243.52 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ವಿತರಣೆಗೆ ಚಾಲನೆ
ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಹಾವೇರಿ ಕಚೇರಿಯಿಂದ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಮಾರ್ಚ್ 12 ರ ಸಂಜೆ 5 ಗಂಟೆಯೊಳಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಹಾವೇರಿ ಕಚೇರಿ ಸಲ್ಲಿಸೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಕಚೇರಿ ಸಂಪರ್ಕಿಸಲು ಕೋರಲಾಗಿದೆ. ಇದೇ ರೀತಿ ರಾಯಚೂರು ಜಿಲ್ಲೆಯಿಂದಲೂ ಅರ್ಜಿ ಆಹ್ವಾನಿಸಲಾಗಿದೆ.





