ಮೇಕೆ ಸಾಕಾಣಿಕೆ ಘಟಕ ಸ್ಥಾಪನೆಗೆ 43 ಸಾವಿರ ಸಬ್ಸಿಡಿ ಸಿಗಲಿದೆ ಇಲ್ಲಿದೆ ಮಾಹಿತಿ

Written by Ramlinganna

Published on:

goat unit subsidy check ಅಮೃತ ಸ್ವಾಭಿಮಾನಿ ಯೋಜನೆ ಅಡಿಯಲ್ಲಿ ಕುರಿ ಸಾಕಾಣಿಕೆ ಘಟಕ ಸ್ಥಾಪನೆಗೆ ಕರ್ನಾಟಕ ಸರ್ಕಾರವು 43750 ರೂಪಾಯಿ ಸಬ್ಸಿಡಿ ನೀಡುವುದು.

ಹೌದು, ರೈತ ಮಿತ್ರರೇ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಅಡಿಯಲ್ಲಿ ಈ ಸೌಲಭ್ಯ ರೈತರಿಗೆ ಸಿಗಲಿದೆ. ಅರ್ಜಿ ಎಲ್ಲಿ ಸಲ್ಲಿಸಬೇಕು ಯಾವಾಗ ಸಲ್ಲಿಸಬೇಕು. ಸಬ್ಸಿಡಿ ಹೇಗೆ ಸಿಗಲಿದೆ ಯಾವ ರೈತರಿಗೆ ಸಬ್ಸಿಡಿ ಸಿಗಲಿದೆ ಎಂಬ ಮಾಹಿತಿ ಇಲ್ಲಿದೆ.

ಕುರಿ ಮೇಕೆ ಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಸರ್ಕಾರವು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ 20 ಕುರಿ ಅಥವಾ ಮೇಕೆ ಮತ್ತು ಒಂದು ಟಗರು ಅಥವಾ ಹೋತ ಖರೀದಿಗೆ ಸಬ್ಸಿಡಿ ನೀಡಲಾಗುವುದು. ಒಟ್ಟು 1,75,000 ರೂಪಾಯಿ ವೆಚ್ಚದಲ್ಲಿ ಶೇ. 50 ರಷ್ಟು ಸಾಲ ಮತ್ತು ಶೇ. 25 ರಷ್ಟು  ಸಹಾಯಧನ ಹಾಗೂ ಶೇ. 25 ರಷ್ಟು ಫಲಾನುಭವಿ ವಂತಿಗೆ ಇರುತ್ತದೆ.

goat unit subsidy check ಸರ್ಕಾರದ ಸಹಾಯಧನ ಯಾರಿಗೆ ಎಷ್ಟು ಸಿಗುವುದು?

ಕುರಿಗಾಹಿಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಕರ್ನಾಟಕ ಸರ್ಕಾರವು ಒಟ್ಟು ವೆಚ್ಚದ ಶೇ. 25 ರಷ್ಟು ಮೊತ್ತವನ್ನು ಸಹಾಯಧನದ ರೂಪದಲ್ಲಿ ನೀಡಲಾಗುವುದು. ಅಂದರೆ 43,750 ರೂಪಾಯಿಯನ್ನು ಹಣವು ಉಚಿತ ಸಹಾಯಧನವಾಗಿದ್ದು, ಇದನ್ನು ರೈತರು ಮರುಪಾವತಿ ಮಾಡುವ ಅಗತ್ಯವಿರುವುದಿಲ್ಲ.

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಈ ಯೋಜನೆಯ ಲಾಭ ಪಡೆಯಲು ಅರ್ಜಿದಾರರು ಕಡ್ಡಾಯವಾಗಿ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು 18 ವರ್ಷ ಪೂರ್ಣಗೊಳಿಸಿರಬೇಕು. ಕುರಿಗಾಹಿ ವೃತ್ತಿಯಲ್ಲಿ ತೊಡಗಿಸಿಕೊಂಡಿರಬೇಕು. ಅರ್ಜಿದಾರರ ಬಳಿ ಆಧಾರ್ ಕಾರ್ಡ್ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟಿಗೆ ಲಿಂಕ್ ಆಗಿರಬೇಕು. ಫೋಟೋ ಇರಬೇಕು. ಜಾತಿ ಪ್ರಮಾಣ ಪತ್ರ ಇರಬೇಕು.

ರೈತರ ಬಳಿ ಏನೇನು ಇರಬೇಕು?

ಕುರಿ ಸಾಕಾಣಿಕೆಯನ್ನು ವೈಜ್ಞಾನಿಕವಾಗಿ ಸಾಕಲು ಅರ್ಜಿದಾರರ ಬಳಿ 1000 ಚದರ ಅಡಿ ಸ್ವಂತ ಜಾಗ ಇರಬೇಕು. ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಈ ಸೌಲಭ್ಯ ಸಿಗುತ್ತದೆ. ಒಂದು ವೇಳೆ ಈ ಹಿಂದೆ ನೆರವು ಪಡೆದಿದ್ದಲ್ಲಿ ಅವರು ಈ ಯೋಜನೆಗೆ ಅನರ್ಹರಾಗಿರುತ್ತಾರೆ.

ಅರ್ಜಿದಾರರು ಅರ್ಜಿ ಎಲ್ಲಿ ಸಲ್ಲಿಸಬೇಕು?

ಈ ಯೋಜನೆಯ ಅಡಿಯಲ್ಲಿ ಸೌಲಭ್ಯ ಪಡೆಯಲು ತಮ್ಮ ವ್ಯಾಪ್ತಿಯ ತಾಲೂಕು ಪಶು ಸಂಗೋಪನಾ ಮತ್ತು  ಪಶು ವೈದ್ಯಕೀಯ ಸೇವಾ ಇಲಾಖೆಯ ಕಚೇರಿಗೆ ಅಥವಾ ಸಹಾಯಕ ನಿರ್ದೇಶಕರ ಕಚೇರಿಗೆ ಖುದ್ದಾಗಿ ಭೇಟಿ ನೀಡಬೇಕು. ಅಲ್ಲಿ ಇಲಾಖೆಯು ನಿಗದಿಪಡಿಸಿದ ಅಧೃತ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು. ನಂತರ ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಸ್ಥಳೀಯ ಕಚೇರಿಗೆ ಸಲ್ಲಿಸಬೇಕು.

ಉಚಿತ ಕುರಿ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನ

ಕಲಬುರಗಿ ಎಸ್.ಬಿ.ಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಕುರಿ, ಮೇಕೆ ಸಾಕಾಣಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆಗೆ ತರಬೇತಿ ನೀಡಲಾಗುವುದು ಎಂದು ಸಂಸ್ಥೆಯ ಎಸ್.ಬಿ.ಐ. ಆರ್ ಸೆಟ್ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ ನಿಮ್ಮ ಸರ್ವೆ ನಂಬರಿನಲ್ಲಿ ಯಾರ ಯಾರ ಹೆಸರಿದೆ? ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ

ಜನವರಿ  30 ರಿಂದ ಫೆಬ್ರವರಿ  11 ರವರೆಗೆ ಕೃಷಿ ಉದ್ಯಮಿ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಜನವರಿ 29 ರಂದು ಕೊನೆಯ ದಿನವಾಗಿದೆ. ಫೆಬ್ರವರಿ 23 ರಿಂದ 24 ರವರೆಗೆ ಟಿವಿ ರಿಪೇರಿ ತರಬೇತಿ ಸಹ ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ಫೆಬ್ರವರಿ 22 ಕೊನೆಯ ದಿನವಾಗಿದೆ.

ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುವುದು. ವಯೋಮಿತಿ 18 ರಿಂದ 45 ವಯೋಮಾನದೊಳಗಿರಬೇಕು. ಬಿಪಿಎಲ್, ಅಂತ್ಯೋದಯ, ರೇಶನ್ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ಪಡೆದು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 9901694389, 9900135705, 7019939996 ಹಾಗೂ 9901098123 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment