ಕುರಿ, ಮೊಲ ಸಾಕಾಣಿಕೆಗೆ ಶೇ. 50 ರಷ್ಟು ಸಹಾಯಧನ

Written by By: janajagran

Updated on:

Goat unit subsidy ನೇರ ಸಾಲ ಯೋಜನೆಯಡಿಯಲ್ಲಿ ಕುರಿ, ಮೇಕೆ,ಮೀನು ಮೊಲ ಸಾಕಾಣಿಕೆ ಘಟಕ ಸ್ಥಾಪಿಸಲು ಶೇಕಡಾ 50 ರಷ್ಟು ಸಹಾಯಧನ ನೀಡಲು ವಿವಿಧ ನಿಗಮದ ವತಿಯಿಂತ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ.

ಹೌದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಸಮುದಾಯ ಅಭಿವೃದ್ಧಿ ಕೋಶದಿಂದ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗರಿಷ್ಟ ಘಟಕ ವೆಚ್ಚ ರೂ. 50,000/- (ಶೇ. 50 ಸಾಲ ಮತ್ತು ಶೇ. 50 ಸಹಾಯಧನ) ನೀಡಲಾಗುವುದು. ಯೋಜನೆಯ ಘಟಕ ವೆಚ್ಚ ರೂ. 50,000/- ಗಳಾಗಿದ್ದು, ಈ ಪೈಕಿ ರೂ. 25,000/- ಸಹಾಯಧನ ಮತ್ತು ರೂ. 25,000/- ಸಾಲವಾಗಿರುತ್ತದೆ. ಸಾಲದ ಮೊತ್ತವನ್ನು ಶೇ. 4ರ ಬಡ್ಡಿದರದಲ್ಲಿ 30 ಸಮಾನ ಕಂತುಗಳಲ್ಲಿ ನಿಗಮಕ್ಕೆ ಮರು ಪಾವತಿಸಬೇಕಾಗುತ್ತದೆ.  ಈಗಾಗಲೇ ಆನ್ಲೈನ್ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ.

ಈಗಾಗಲೇ ನೇರಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದವರು ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ  ಮಾಹಿತಿಗಾಗಿ ಆಯಾ ನಿಗಮದ ಅಧಿಕಾರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Goat unit subsidy ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇತ್ತೀಚಿನ ಭಾವಚಿತ್ರ ಹೊಂದಿರಬೇಕು. ಜಾತಿ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು). ಆದಾಯ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು). ಹೊಂದಿರಬೇಕು. ಪಹಣಿ (ಆರ್.ಟಿ.ಸಿ), ಆಧಾರ್ ಕಾರ್ಡ್ ಹೊಂದಿರಬೇಕು. ರೇಷನ್ ಕಾರ್ಡ್ ಇರಬೇಕು.ಒಂದು ಬಿಳಿ ಪೇಜ್ ಮೇಲೆ ಸಹಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

ಆದಿಯ ಜಾಂಬವ ಅಭಿವೃದ್ಧಿ ನಿಗಮ:

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಡಿಯಲ್ಲಿ ಬರುವ ರೈತರು  https://adijambava.online/apl-su-nera-saala.php ಲಿಂಕ್ ಮೇಲೆ ಕ್ಲಿಕ್ ಮಾಡಿ ಸೆಪ್ಟೆಂಬರ್ 9 ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ . ಅಥವಾ ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ ನಂ, 17/5, ಓಬ್ಲಾಂಗ್ ಬ್ಲಾಕ್, 2ನೇ ಮಹಡಿ, ಯುನಿಟಿ ಕಟ್ಟಡ, ಜಯಚಾಮರಾಜೇಂದ್ರ ರಸ್ತೆ, ಬೆಂಗಳೊರು 560 002 ದೂರವಾಣಿ 080-22215222 ಗೆ ಕರೆ ಮಾಡಬಹುದು.

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ:

ಕರ್ನಾಟಕ ತಾಂಡ ಅಭಿವೃದ್ಧಿನಿಗಮ  ದಡಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 15 ರೊಳಗಗಾಗಿ ಅರ್ಜಿ ಸಲ್ಲಿಸಬೇಕು ರೈತರು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಕೋರಲಾಗಿದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಯಸುವ ಆಸಕ್ತ ರೈತರು

http://ktdcl.in/web4/online/onlineapp.php

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತಾಂಡಾ ಅಭಿವೃದ್ಧಿ ನಿಗಮದ ಪೇಜ್ ಓಪನ್ ಆಗುತ್ತದೆ ಅಲ್ಲಿ ನೇರ ಸಾಲ ಯೋಜನೆ ಮೇಲೆ ಕ್ಲಿಕ್ ಮಾಡಬೇಕು. ಆಗ ನೇರ ಸಲ ಯೋಜನೆ ಪೇಜ್ ತೆರೆಯಲ್ಪಡುತ್ತದೆ.. ಅಲ್ಲಿ ಎಲ್ಲಾ ಮಾಹಿತಿ ನೀಡಲಾಗಿರುತ್ತದೆ. ಎಲ್ಲಾ ಮಾಹಿತಿಗಳನ್ನು ಓದಿಕೊಳ್ಳಬೇಕು.  ಹೆಸರು, ತಂದೆಯ ಹೆಸರು, ಮೊಬೈಲ್ ನಂಬರ್, ವಿದ್ಯಾರ್ಹತೆ, ಪೂರ್ಣ ವಿಳಾಸ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ,  ಸೇರಿದಂತೆ ಇನ್ನಿತರ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸು ಮೇಲೆ ಕ್ಲಿಕ್ ಮಾಡಬೇಕು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ:

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಡಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು

https://ksskdc.kar.nic.in/schemes/

ಲಿಂಕ್ ಮೇಲೆ ಕ್ಲಿಕ್ ಮಾಡಿ  ಸೆಪ್ಟೆಂಬರ್ 20 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಮೇಲಿನ ಲಿಂಕ್ ಕ್ಲಿಕ್ ಮಾಡಿದಾಗ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಪೇಜ್ ತೆರೆಯಲ್ಪಡುತ್ತದೆ. ಅಲ್ಲಿ ಅಪ್ಲೈ ಮೇಲೆ ಕ್ಲಿಕ್ ಮಾಡಿ ಕೇಳಿದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ

ಡಿ. ದೇವರಾಜ ಅಱಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಇತರ ನಿಗಮಗಳಿಂದ ಅತೀ ಶೀಘ್ರದಲ್ಲಿ ಅರ್ಜಿ ಆಹ್ವಾನಿಸಲಾಗುವುದು.

Leave a Comment