ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗಿಲ್ಲಿದೆ ಗುಡ್ ನ್ಯೂಸ್. ಫೆಬ್ರವರಿ 27 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಿಂಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿ 27 ರಂದು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಳಗಾವಿಗೆ ಆಗಮಿಸಲಿದ್ದು, ಅಂದೇ ಮೊದಲ ಬಾರಿಗೆ ಕರ್ನಾಟಕದಿಂದ ನೇರವಾಗಿ ರೈತರ ಖಾತೆಗೆ ಪಿಎಂ ಕಿಸಾನ್ ಹಣ ವರ್ಗಾವಣೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಕ್ರಮದದ ವೇದಿಕೆ ನಿರ್ಮಾಣ ಸ್ಥಳದಲ್ಲಿ ಸಿದ್ಧತೆ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಜನ್ಮದಿನದಂದು ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ವರ್ಗಾವಣೆ ಮಾಡುತ್ತಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಬಾರಿ ಅಂದರೆ ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಹಣ ದೆಹಲಿ ಗ್ರಾಮೀಣ ಕ್ಷೇತ್ರದಿಂದ ರೈತರ ಖಾತೆಗೆ 22 ಸಾವಿರ ಕೋಟಿ ರೂಪಾಯಿ ವರ್ಗಾವಣೆ ಮಾಡಲಾಗಿತ್ತು. ಈ ಸಲ ಕರ್ನಾಟಕ ರಾಜ್ಯದಿಂದ ರೈತರ ಖಾತೆಗೆ ವರ್ಗಾವಣೆ ಮಾಡುತ್ತಿರುವುದು ವಿಶೇಷವಾಗಿದೆ. ಇದುವರೆಗೆ 14 ಕೋಟಿ ರೈತರ ಖಾತೆಗೆ 2.70 ಲಕ್ಷ ಕೋಟಿ ರೂಪಾಯಿ ವರ್ಗಾವಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೂ ಚೆಕ್ ಮಾಡಬಹುದು (Check your pm kisan beneficiary list)

ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ರೈತರು ಈ

https://pmkisan.gov.in/VillageDashboard_Portal.aspx

ಲಿಂಕ್ ಮೇಲೆಕ್ಲಿಕ್ ಮಾಡಬೇಕು. ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮ ಆಯ್ಕೆ ಮಾಡಿಕೊಂಡು submit ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದುಪೇಜ್ ಓಪನ್ ಆಗುತ್ತದೆ. ಅಲ್ಲಿ Aadhar authentication status ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಕಾಣಿಸುತ್ತದೆ. ಅಲ್ಲಿ successfully authenticated ಕೆಳಗಡೆ ಇರುವ ರೈತರಿಗೆ ಮಾತ್ರ 13ನೇ ಕಂತಿನ ಹಣ ಜಮೆಯಾಗಲಿದೆ. ಅಲ್ಲಿ ಹೆಸರುಗಳ ಪಟ್ಟಿ ಇರುತ್ತದೆ. ನಿಮ್ಮ ಹೆಸರು ಯಾವ ಅಕ್ಷರಿಂದ ಆರಂಭವಾಗುತ್ತದೆ ಎಂಬುದನ್ನು ನೋಡಿಕೊಂಡು ಸ್ಕ್ರಾಲ್ ಮಾಡಿ ನಿಮ್ಮ ಹೆಸರು ಪಟ್ಟಿಯಲ್ಲಿರುವುದನ್ನು ಚೆಕ್ ಮಾಡಬಹುದು.

ಪಿಎಂ ಕಿಸಾನ್ 13ನೇ ಕಂತಿನ ಹಣ ಎಷ್ಟು ಜಮೆಯಾಗಲಿದೆ? (How much money credit to pm kisan beneficiary)

ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ಹಿಂದಿನ ಕಂತಿನಂತೆ 2000 ರೂಪಾಯಿ ಜಮೆಯಾಗಲಿದೆ. ಕೇಂದ್ರ ಬಜೆಟಿನಲ್ಲಿ 6 ಸಾವಿರದಿಂದ 8 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂಬ ಚರ್ಚೆ ನಡೆಯುತ್ತಿತ್ತು. ಆದರೆ ಕೇಂದ್ರ ಸರ್ಕಾರದಿಂದ ಇದುವರೆಗೆಯ ಯಾವುದೇ ಹೇಳಿಕೆ ಬಿಡುಗಡೆಯಾಗಿಲ್ಲ. ಹಾಗಾಗಿ 13ನೇ ಕಂತಿನ ಹಣ 2 ಸಾವಿರ ರೂಪಾಯಿ ಜಮೆಯಾಗಲಿದೆ.

ಇಕೆವೈಸಿ ಸಕ್ಸೆಸ್ ಆಗಿದೆಯೋ ಇಲ್ಲವೋ ಇಲ್ಲೇ ಚೆಕ್ ಮಾಡಿ check your Ekyc status here)

ರೈತರು ತಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ search ಮೇಲೆ ಕ್ಲಿಕ್ ಮಾಡಬೇಕು. ನೀವು ಇಕೆವೈಸಿ ಮಾಡಿಸಿದ್ದರೆ Ekyc is Already done ಎಂಬ ಮೆಸೆಜ್ ಕಾಣಿಸುತ್ತದೆ. ಇಕೆವೈಸಿ ಆಗಿರದಿದ್ದರೆ ಮೊಬೈಲ್ ನಂಬರ್ ಹಾಕಿದ ನಂತರ ಓಟಿಪಿ ಬರುತ್ತದೆ.ಆ ಆಧಾರದಮೇಲೆ ಇಕೆವೈಸಿ ಮಾಡಿಸಿಕೊಳ್ಳಬಹುದು.

Leave a Reply

Your email address will not be published. Required fields are marked *