Goods vehicle subsidy : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಫಲಾಫೇಕ್ಷಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Goods vehicle subsidy ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ ಘಟಕ ವೆಚ್ಚದ ಶೇ. 75 ರಷ್ಟು ಸಹಾಯಧನ ಅಥವಾ ಗರಿಷ್ಠ 4 ಲಕ್ಷ ರೂಪಾಯಿ ರೂಪಾಯಿಗಳ ಸಾಲ ಸೌಲಭ್ಯವನ್ನು ಒದಗಿಸಲಾಗುವುದು.
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ಸಹಯೋಗದೊಂದಿಗೆ ) ಯಡಿ ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ. 70 ರಷ್ಟು ಸಹಾಯಧನ ಅಥವಾ ಗರಿಷ್ಠ 2ಲಕ್ಷ ರೂಪಾಯಿಗಳ ಸಾಲ ನೀಡಲಾಗುವುದು.
ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕ ವೆಚ್ಚ 1 ಲಕ್ಷ ರೂಪಾಯಿಗಳಿಗೆ 50 ಸಾವಿರ ರೂಪಾಯಿಗಳ ಸಹಾಯಧನ ಹಾಗೂ ಶೇ. 4 ರಷ್ಟು ಬಡ್ಡಿ ದರದಲ್ಲಿ 50 ಸಾವಿರ ರೂಪಾಯಿಗಳ ಸಾಲ ಮಂಜೂರು ಮಾಡಲಾಗುವುದು.
ಪ್ರೇರಣಾ (ಮೈಕ್ರೋ ಕ್ರೆಡಿಟ್ ಫೈನಾನ್ಸ್ ) ಯೋಜನೆಯಡಿ ನೋಂದಾಯಿತ ಸ್ವ ಸಹಾಯ ಮಹಿಳಾ ಸಂಘದ 10 ಸದಸ್ಯರು ಕಿರು ಆರ್ಥಇಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕ ವೆಚ್ಚ 2.50 ಲಕ್ಷ ರೂಪಾಯಿಗಳಿಗೆ 1.50 ಲಕ್ಷ ರೂಪಾಯಿಗಳ ಸಹಾಯಧನ ಹಾಗೂ 1 ಲಕ್ಷ ರೂಪಾಯಿಗಳನ್ನುಸಾಲದ ರೂಪದಲ್ಲಿ ನೀಡಲಾಗುವುದು.
ಸಮಗ್ರ ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ನೀರಾವರಿ ಕೊಳವೆಬಾವಿ, 1. 20 ರಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ ವಿದ್ಯೂದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿ ಕೊಡಲಾಗುವುದು.
ಅರ್ಜಿದಾರರು ಕನಿಷ್ಟ ಕಳೆದ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರು ವ್ಯವಸಾಯ ಉದ್ದೇಶಕ್ಕೆ ಸಂಬಂಧಪಟ್ಟಂತೆ 18 ರಿಂದ 60 ವರ್ಷ, ವಾಹನ, ಸ್ವಯಂ ಉದ್ಯೋಗ ಉದ್ದೇಶಗಳಿಗೆ ಸಂಬಂಧಪಟ್ಟಂತೆ 18 ರಿಂದ 50 ವರ್ಷದೊಳಗಿನ ವಯೋಮಾನದವರಾಗಿರಬೇಕು. ಕೊಳವೆಬಾವಿ ಸೌಲಭ್ಯಕ್ಕೆ ವಯೋಮಿತಿಇರುವುದಿಲ್ಲ.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ 1,50,000 ಹಾಗೂ ನಗರ ಪ್ರದೇಶದವರಿಗೆ 2,00,000 ರೂಪಾಯಿಗಳ ಮಿತಿಯೊಳಗಿರಬೇಕು.
ಇದನ್ನೂ ಓದಿ : Ration card list ನಿಂದ ಯಾರ ಹೆಸರು ಡಿಲೀಟ್ ಆಗಿದೆ? ಚೆಕ್ ಮಾಡಿ
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು.
ವಾಹನಗಳಿಗೆ ಆರ್ಥಿಕ ನೆರವು ಬಯಸುವ ಫಲಾಫೇಕ್ಷಿಯು ಚಾಲನಾ ಪರವಾನಗಿಯೊಂದಿಗೆ ಬ್ಯಾಡ್ಜ್ ಹೊಂದಿರಬೇಕು.
ಗಂಗಾ ಕಲ್ಯಾಣ ಯೋಜನೆ ಅಡಿ ಸೌಲಭ್ಯ ಪಡೆಯಲಿಚ್ಚಿಸುವವರು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ಭೂ ಒಡೆತನ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾಪೇಶ್ರಿಯು ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾ ಕೃಷಿ ಕೂಲಿ ಕಾರ್ಮಿಕರಾಗಿರಬೇಕು.
Goods vehicle subsidy ಅರ್ಜಿ ಸಲ್ಲಿಸುವ ವಿಧಾನ
ಅಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿದಾರರು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು?
ಅರ್ಜಿ ಸಲ್ಲಿಸಲು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಬೇಕಾಗುತ್ತದೆ. ಆರ್.ಡಿ. ಸಂಖ್ಯ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಸಲ್ಲಿಸಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಪಾಸ್ ಬುಕ್ ಸಲ್ಲಿಸಬೇಕಾಗುತ್ತದೆ.
ಆಸಕ್ತ ಅರ್ಜಿದಾರರು ಸೇವಾಸಿಂಧು ಪೋರ್ಟೋಲ್ https://sevasindhu.karnataka.gov.in/
ಮೂಲಕ ನವೆಂಬರ್ 23 ರೊಳಗಾಗಿ ಅರ್ಜಿ ಸಲ್ಲಿಸಬೇಕು.