Grahalakshmi annabhagya status ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಯಾರು ಯಾರಿಗೆ ಜಮೆಯಾಗಿದೆ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರೆಂಟಿಯೋಜನೆಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ತಮಗೆ ಪ್ರತಿ ತಿಂಗಳು ಈ ಯೋಜನೆಗಳ ಅಡಿಯಲ್ಲಿ ಹಣ ಜಮೆಯಾಗುತ್ತಿದೆಯೋ ಇಲ್ಲವೋ ಎಂಬುದನ್ನು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
Grahalakshmi annabhagya status ಜಮೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನ ಚೆಕ್ ಮಾಡಲು ಈ
https://play.google.com/store/apps/details?id=com.dbtkarnataka
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ನಿಮಗೆ ಕಾಣಿಸುತ್ತದೆ. ಅಲ್ಲಿ ಅಲ್ಲಿ ನೀವು install ಮೇಲೆ ಕ್ಲಿಕ್ ಮಾಡಬೇಕು. ಇದಾದನಂತರ Open ಮೇಲೆ ಕ್ಲಿಕ್ ಮಾಡಬೇಕು. ಎರಡು ಸಲ ಅಲೋ ಮೇಲೆ ಕ್ಲಿಕ್ ಮಾಡಿದ ನಂತರ ಆಧಾರ್ ಕಾರ್ಡ್ ನಂಬರ್ ನಮೂದಿಸಿ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇದಾದ ಮೇಲೆ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ಹಾಕಿದ ನಂತರ ಪಿನ್ ನಂಬರ್ ನೀವೇ ಕ್ರಿಯೇಟ್ ಮಾಡಿಕೊಳ್ಳಬೇಕು ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹೆಸರು, ವಿಳಾಸ ಹಾಗೂ ನಿಮ್ಮ ಫೋಟೋ ಕಾಣಿಸುತ್ತದೆ. ನಂತರ ನಿಮ್ಮಮೊಬೈಲ್ ನಂಬರ್ ಹಾಕಿ ಓಕೆ ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
Grahalakshmi annabhagya status ಚೆಕ್ ಮಾಡುವುದು ಹೇಗೆ?
ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಬದಲಾಗಿ ಹಣ ಜಮೆ ಮಾಡಲಾಗುತ್ತಿದೆ.ನಿಮ್ಮ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ?
ಈ https://ahara.kar.nic.in/lpg/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಕಾಣುವ ಪೇಜ್ ನಲ್ಲಿ ನಿಮ್ಮ ಜಿಲ್ಲೆಗಳು ಕಾಣಿಸುತ್ತವೆ. ನಿಮ್ಮ ಜಿಲ್ಲೆಯ ಮೇಲಿರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನೇರ ನಗದು ವರ್ಗಾವಣೆಯ ಸ್ಥಿತಿ status of DBT ಮೇಲೆ ಕ್ಲಿಕ್ ಮಾಡಬೇಕು. ಆಗ ಮತ್ತೊಂದು ಪೇಜ್ ಓಪನ್ ಆಗುವುದು. ಅಲ್ಲಿ ನೀವು ಯಾವ ತಿಂಗಳ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ತಿಂಗಳು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಪಡಿತರ ಚೀಟಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಇದಾದನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.
ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಐದು ಗ್ಯಾರೆಂಟಿ ಯೋಜನೆಗಳನ್ನುಜಾರಿಗೆ ತರಲಾಗುವುದೆಂದು ಘೋಷಣೆ ಮಾಡಿತ್ತು. ಅದೇ ರೀತಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಶಕ್ತಿ ಯೋಜನೆಯಡಿ ರಾಜ್ಯದ ಯಾವುದೇ ಮೂಲೆಗಳಲ್ಲಿಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ಯೋಜನೆಯನ್ನು ಜಾರಿಗೆ ತಂದಿತು.
ಇದನ್ನೂ ಓದಿ : Baragala parihara amount:1.26 ಲಕ್ಷ ರೈತರಿಗೆ ಬರ ಪರಿಹಾರ ಜಮೆ
ಗೃಹಶಕ್ತಿ ಯೋಜನೆಯಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯೂ ಚಾಲನೆಯಲ್ಲಿದೆ. ಈ ಯೋಜನೆಯಡಿಯಲ್ಲಿ ಈಗಾಗಲೇ ಫಲಾನುಭವಿಗಳಿಗೆ ಸರಾಸರಿ ಆಧಾರದ ಮೇಲೆ ಉಚಿತ ವಿದ್ಯುತ್ ನೀಡಲಾಗುತ್ತಿದೆ.
ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ 2 ಸಾವಿರ ರೂಪಾಯಿ ನೀಡುವ ಯೋಜನೆಗೂ ಚಾಲನೆ ನೀಡಲಾಗಿದೆ. ಅತೀ ಶೀಘ್ರದಲ್ಲಿ ಯುವನಿಧಿ ಯೋಜನೆಯನ್ನು ಜಾರಿಗೆ ತರಲಾಗುವುದೆಂದು ಸರ್ಕಾರ ಭರವಸೆ ನೀಡಿದೆ.