ಗ್ರಾಪಂಗಳಲ್ಲಿ ಖಾಲಿಯಿರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಯಾದಗಿರಿ ಹಾಗೂ ಗದಗ ಜಿಲ್ಲೆಯಲ್ಲಿ ವಿವಿಧ ಗ್ರಾಪಂಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಯಾದಗಿರಿ ಜಿಲ್ಲೆಯ ಯಾದಗಿರಿ, ಗುರುಮಠಕಲ್, ಶಹಾಪುರ, ಸುರಪುರ ಹಾಗೂ  ವಡಗೇರಾ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅದೇ ರೀತಿ ಗದಗ ಜಿಲ್ಲೆಯ 16 ಗ್ರಾಮ ಪಂಚಾಯತಿಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗದಗ ಜಿಲ್ಲೆಯ ಅಮರಗೋಳ, ಬೆನಕನಕೊಪ್ಪ, ಬಿಡನಾಳ, ಗೋವನಾಳ, ಗುಳಗುಳಿ, ಹೊಸಳ್ಳಿ, ಹುಲ್ಲೂರ, ಜಂತ್ಲಿ, ಶಿರೂರ, ಕಳಸಾಪುರ, ಕೌಜಗೇರಿ, ಮಾಡಳ್ಳಿ, ಮಜ್ಜೂರ, ಮಾರನಬಸರಿ, ಮುರಡಿ, ಶಿವಾಜಿನಗರ, ತಿಪ್ಪ್ಮಾಪುರಗಳಲ್ಲಿನ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು ಯಾವುವು? (eligibility for apply )

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ಥಳೀಯ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇರಿರಬೇಕು. ತಹಶೀಲ್ದಾರ ಅವರಿಂದ ಪಡೆದ ರಹವಾಸಿ ಪ್ರಮಾ್ಣ ಪತ್ರ ಲಗತ್ತಿಸಬೇಕು. ದ್ವಿತೀಯ ಪಿಯುಸಿ ಪಾಸಾಗಿರುವ ಅಂಕಪಟ್ಟಿ ಲಗತ್ತಿಸಬೇಕು.

ಇದನ್ನೂ ಓದಿ Anganwadi ಕಾರ್ಯಕರ್ತೆಯರ ಹುದ್ದೆಗೆ ವಿವಿಧ ಜಿಲ್ಲೆಗಳಿಂದ ಅರ್ಜಿ ಆಹ್ವಾನ- ಇಂದೇ ಅರ್ಜಿ ಸಲ್ಲಿಸಿ

ಗ್ರಂಥಾಲಯ ವಿಜ್ಞಾನ ತರಬೇತಿ ಪ್ರಮಾಣ ಪತ್ರ ಪಡೆದಿರಬೇಕು. ಕನಿಷ್ಠ ಮೂರು ತಿಂಗಳ ಕಾಲ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.

ಯಾವ ಯಾವ ದಾಖಲೆಗಳನ್ನು ಸಲ್ಲಿಸಬೇಕು? (what are document needs)

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು. ಇತ್ತೀಚಿನ ಎರಡು ಭಾವಚಿತ್ರ ಹೊಂದಿರಬೇಕು. ಆಧಾರ್ ಕಾರ್ಡ್ ಲಗತ್ತಿಸಬೇಕು. ರೇಷನ್ ಕಾರ್ಡ್ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? (last date for apply)

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇದೇ ಮಾರ್ಚ್ ತಿಂಗಳ 23 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಬೇಗನೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಅರ್ಜಿಗಳನ್ನು ಎಲ್ಲಿ ಸಲ್ಲಿಸಬೇಕು?

ಅರ್ಜಿಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಬೇಕು.  ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತ್ ನೋಟಿಸ್ ಬೋರ್ಡ್ ಅಥವಾ ಆಯಾ ಜಿಲ್ಲೆಯ ಜಿಲ್ಲಾ ಪಂಚಾಯತ್ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಲಾಗಿದೆ.

ವೇತನ ಶ್ರೇಣಿ

ಗ್ರಂಥಾಲಯಗಳಲ್ಲಿ ಖಾಲಿಯಿರುವ ಮೇಲ್ವಿಚಾರಕರ ಹುದ್ದೆಗಳಿಗೆ 12 ಸಾವಿರ ರೂಪಾಯಿ ಗೌರವ ಸಂಭಾವನೆ ನೀಡಲಾಗುವುದು. ಸದರಿ ಹುದ್ದೆಯು ಗೌರವಧನದ ಹುದ್ದೆಯಾಗಿದ್ದು, ಷರತ್ತಿಗೊಳಪಟ್ಟು ಆಯಾ ಗ್ರಾಮಪಂಚಾಯತ್ ಕೇಂದ್ರಗಳಲ್ಲಿ ನಿಗದಿಪಡಿಸಿದ ಮೀಸಾತಿಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 13 ಕೊನೆಯ ದಿನವಾಗಿದೆ. ಮೀಸಲಾತಿ ಅನ್ವಯ ನೇರ ನೇಮಕಾತಿ ಜರುಗುವುದು.

ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳು ಯಾರಿಗೆ ಸಂಪರ್ಕಿಸಬೇಕು?

ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳು ಹುದ್ದೆ, ಅರ್ಜಿ ಕುರಿತಂತೆ ಆಯಾ ಗ್ರಾಮ ಪಂಚಾಯತ್ ಕಚೇರಿಗೆ ಸಂಪರ್ಕಿಸಬಹುದು. ಇನ್ನೂ ಹೆಚ್ಚಿನ ಮಾಹಿತಿಗಾಗಿ 08473 253758ಗೆ ಸಂಪರ್ಕಿಸಲು ಕೋರಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ  ದೂರವಾಣಿ ಸಂಖ್ಯೆ 08266 200397 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *