ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕಲಬುರಗಿ ಜಿಲ್ಲಾ ಪಂಚಾಯತನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅವಶ್ಯಕತೆ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದಗಳಿಗಾಗಿ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ವಿದ್ಯಾರ್ಹತೆ
ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ಜನವರಿ 1ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು. ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ2019-20, 2020-21 ಹಾಗೂ 2021-22ನೇ ಅವಧಿಯಲ್ಲಿ ಕನಿಷ್ಠ ಎರಡು ವರ್ಷ ಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಬೇಕು.
ವಯೋಮಿತಿ ದಿನಾಂಕ 01-01-2022 ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಬಾರದು. ಓದು ಮತ್ತು ಬರಹ ಚೆನ್ನಾಗಿ ತಿಳಿದಿರಬೇಕು. ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : ಪಿಎಂ ಕಿಸಾನ್ ಹಣ ಜಮೆಯಾಗಲು ಇಂದೇ ಈ ಕೆಲಸ ಮಾಡಿ
2020-21ನೇ ಸಾಲಿನ ಗ್ರಾಮ ಕಾಯಕ ಮಿತ್ರರ ನೇಮಕವಾಗಿರುವ ಗ್ರಾಮ ಪಂಚಾಯತಿಗಳನ್ನು ಹೊರತುಪಡಿಸಿ ಗ್ರಾಮ ಕಾಯಕ ಮಿತ್ರರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಲಾಗುವುದು. ಗ್ರಾಮ ಕಾಯಕ ಮಿತ್ರರಿಗೆ ಮಾಸಿಕ 11 ಸಾವಿರ ರೂಪಾಯಿ ನಿಗದಿತ ಗೌರವಧನ ನೀಡಲಾಗುವುದು.
ಗ್ರಾಮ ಕಾಯಕ ಮಿತ್ರರನ್ನು ಓದು ವರ್ಷ ಅವಧಿಗೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣಗಳನ್ನು ಹೊಂದಿರಬೇಕು. ಗ್ರಾಮ ಪಂಚಾಯತಗಳಲ್ಲಿ ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ ಜನವರಿ 13 ರಂದು ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತಿಯ ಪಂಚಾಯತ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಕಲಬುರಗಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಭಾರತೀಯ ತೈಲ ನಿಗಮ ನಿಯಮಿತ (Indian Oil Corporation Limited) ದಲ್ಲಿ 1744 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ 3 ಕೊನೆಯ ದಿನವಾಗಿದೆ.
ವಿದ್ಯಾರ್ಹತೆ
ಟೆಕ್ನಿಶಿಯನ್ ಅಪ್ರೆಂಟಿಸ್ ಡಿಪ್ಲೋಮಾ, ಟ್ರೇಡ್ ಅಪ್ರೆಂಟಿಸ್ 10ನೇ ತರಗತಿ, ಐಟಿಐ, ಗ್ಯಾಜುಯೇಟ್ ಅಪ್ರೆಂಟಿಸ್-ಬಿಕಾಂ, ಬಿ.ಎಸ್.ಸಿ ಹಾಗೂ ಬಿಎ, ಟ್ರೇಡ್ ಅಪ್ರೆಂಟಿಸ್ (ಡಿಇಓ ಪ್ರೆಶರ್) ಪಿಯುಸಿ, ಟ್ರೇಡ್ ಅಪ್ರೆಂಟಿಸ್ (ಆರ್.ಎಸ್.ಎ) ಹುದ್ದೆಗಳಿಗೆ ಪಿಯುಸಿ ಪಾಸಾಗಿರಬೇಕು.
ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್.ಸಿ, ಎಸ್.ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲೂಡಿ (ಜನರಲ್ ಅಭ್ಯರ್ಥಿಗಳಿಗೆ) 10 ವರ್ಷ ಇದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ
https://www.ioclmd.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು New Registration ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರದೆುಕೊಳ್ಳುತ್ತದೆ. ಅಲ್ಲಿ ನಿಮ್ಮ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ಯಾವ ಹುದ್ದೆಗೆ ಅರ್ಜಿ ಸಲ್ಲಿಸಬಯಸುತ್ತೀರೋ ಆ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಯಾವ ಜಿಲ್ಲೆಯಲ್ಲಿ ಕೆಲಸ ಮಾಡಲಿಚ್ಚಿಸುತ್ತೀರೋ ಆದ್ಯತೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಇನ್ನಿತರ ಮಾಹಿತಿಗಳನ್ನುಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.