Grow millet up to 15 thousand incentives ಸಿರಿಧಾನ್ಯ ಬೆಳೆಯಲು ಆಸಕ್ತಿಯಿರುವ ರೈತರಿಗಿಲ್ಲಿದೆ ಗುಡ್ ನ್ಯೂಸ್. ಹೌದು, ಸಿರಿಧಾನ್ಯ ಬೆಳೆಯುವ ರೈತರಿಗೆ ಈಗ 10 ಸಾವಿರ ಬದಲಾಗಿ 15 ಸಾವಿರ ರೂಪಾಯಿ ನೀಡಲು ಸರ್ಕಾರ ಮುಂದಾಗಿದೆ.
2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಿರುವ ಸರ್ಕಾರ ಸಿರಿಧಾನ್ಯ ಕೃಷಿಯನ್ನು ಪ್ರೋತ್ಸಾಹಿಸಲು ಮುಂದಾಗಿದೆ. ಸಿರಿಧಾನ್ಯ ಬೆಳೆಯುವ ರೈತರಿಗೆ ಈ ಮೊದಲು ಪ್ರತಿ ಹೆಕ್ಟೇರಿಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು.ಈಗ ಈ ಪ್ರೋತ್ಸಾಹ ಧನವನ್ನು ಹೆಚ್ಚಿಸಿ 15 ಸಾವಿರ ರೂಪಾಯಿ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.
ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ ಧನ ನೀಡಲು ಅರ್ಹತೆಗಳು? ಹಾಗೂ ಅರ್ಜಿ ಎಲ್ಲಿ ಸಲ್ಲಿಸಬೇಕು? ಯಾವ ಯಾವ ಸಿರಿಧಾನ್ಯಗಳನ್ನು ಬೆಳೆಸುವ ರೈತರಿಗೆ ಪ್ರೋತ್ಸಾಹ ಧನ ನೀಡಲಾಗುವುದು ಎಂಬುದರ ಮಾಹಿತಿ ಇಲ್ಲಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಹೌದು, ನವಣೆ, ಕೊರಲೆ, ಊದಲು, ಸಾಮೆ, ಬರಗು (ರಾಗಿ, ಜೋಳ ಮತ್ತು ಸಜ್ಜೆ ಹೊರತುಪಡಿಸಿ) ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರಿಗೆ ಈಗ 15 ಸಾವಿರ ರೂಪಾಯಿ ನೀಡಲಾಗುವುದು.
ಪ್ರೋತ್ಸಾಹ ಧನ ಹೇಗೆ ನೀಡಲಾಗುವುದು?
ಸಿರಿಧಾನ್ಯ ಬೆಳೆಯುವ ರೈತರು ಪ್ರೋತ್ಸಾಹ ಧನಕ್ಕಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಬೆಳೆ ಸಮೀಕ್ಷೆ ಆಧಾರದ ಮೇಲೆ ರೈತರ ಖಾತೆಗೆ ನೇರವಾಗಿ ಪ್ರೋತ್ಸಾಹ ಧನ ಜಮೆ ಮಾಡಲಾಗುವುದು.
ಪ್ರೋತ್ಸಾಹ ಧನ ಪಡೆಯಲು ರೈತರಿಗಿರುವ ಅರ್ಹತೆಗಳು?
ಸಿರಿಧಾನ್ಯ ಬೆಳೆಯುವ ರೈತರು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಅರ್ಜಿ ಸಲ್ಲಿಸಬೇಕು. ಈ ಯೋಜನೆಯಡಿ ಅರ್ಜಿ ಸಲ್ಲಿಸುವ ರೈತರ ಹೆಸರಿನಲ್ಲಿ ಜಮೀನು ಇರಬೇಕು. ರೈತರ ಹೆಸರು ಜಂಟಿ ಖಾತೆಯಲ್ಲಿದ್ದರೆ ಇತರ ರೈತರಿಂದ ಒಪ್ಪಿಗೆ ಪತ್ರ ಪಡೆಯಬೇಕು.
ಇದನ್ನೂ ಓದಿ : ಒಂದೇ ನಿಮಿಷದಲ್ಲಿ ನಿಮ್ಮ ಜಮೀನಿನ ಮ್ಯಾಪ್ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿ: ಇಲ್ಲಿದೆ ಮಾಹಿತಿ
ಪಾಲಕರ ಹೆಸರಿನಲ್ಲಿ ಜಮೀನಿದ್ದು, ಪಾಲಕರು ಮೃತಪಟ್ಟಿದ್ದರೆ ಗ್ರಾಮ ಲೆಕ್ಕಾಧಿಕಾರಿಗಳಿಂದ ದೃಢೀಕರಿಸಿ ಕುಟುಂಬದ ಇತರೆ ಸದಸ್ಯರಿಂದ ಒಪ್ಪಿಗೆ ಪಡೆದು ಸಿರಿಧಾನ್ಯ ಬೆಳೆಯುವ ರೈತ ಅರ್ಜಿ ಸಲ್ಲಿಸಬಹುದು. ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಬ್ಯಾಂಕ್ ಪಾಸ್ಬಕ್ ಝರಾಕ್ಸ್ ಪ್ರತಿ ಇರಬೇಕು. ಇದರೊಂದಿಗೆ ಜಮೀನಿನ ಪಹಣಿ ಇರಬೇಕು.
Grow millet up to 15 thousand incentives ಎಷ್ಟು ಸಹಾಯಧನ ನೀಡಲಾಗುವುದು?
ಸಿರಿಧಾನ್ಯ ಬೆಳೆಯುವ ರೈತರಿಗೆ ಗರಿಷ್ಠ 2 ಹೆಕ್ಟೇರ್ ವರೆಗೆ ಪ್ರೋತ್ಸಾಹ ಧನ ನೀಡಲಾಗುವುದು. ಸಿರಿಧಾನ್ಯ ಬೆಳೆದಿರುವ ಕುರಿತು ರೈತರು ಸರ್ವೆ ನಂಬರ್ ನಲ್ಲಿ ನಿಂತಿ ಸಮೀಕ್ಷೆ ಮಾಡಿಕೊಳ್ಳಬೇಕು. ಇದರೊಂದಿಗೆ ಜಮೀನಿನ ಫೋಟೋ ತೆಗೆದುಕೊಳ್ಳಬೇಕು. ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿದ ರೈತರಿಗೆ ಪ್ರೋತ್ಸಾಹ ಧನ ನೀಡಲಾಗುವುದು.
ಸಿರಿಧಾನ್ಯ ಪ್ರೋತ್ಸಾಹ ಹಣ 15 ಸಾವಿರ ಹೆಚ್ಚಳಕ್ಕೆ ಕೋರಿಕೆ-ಬಿ.ಸಿ. ಪಾಟೀಲ್
ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ನೀಡಲಾಗುವ ಪ್ರೋತ್ಸಾಹ ಧನವನ್ನು 10 ಸಾವಿರದಿಂದ 15 ಸಾವಿರ ರೂಪಾಯಿಗೆ ಏರಿಕೆ ಮಾಡುವಂತೆ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಪೆಬ್ರವರಿ 17 ರಂದು ಮಂಡನೆಯಾಗುವ ಬಜೆಟಿನಲ್ಲಿ ಇದು ಸೇರ್ಪಡೆಯಾಗುವ ವಿಶ್ವಾಸವಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಈ ಜಿಲ್ಲೆಗಳ ರೈತರಿಗೆ ಬೆಳೆ ಹಾನಿ ಪರಿಹಾರ ಜಮೆ- ನಿಮಗೂ ಜಮೆಯಾಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
ರಾಜ್ಯ ಸರ್ಕಾರವು ಮಂಡಿಸುವ ಬಜೆಟ್ ನಲ್ಲಿ ರೈತರಿಗೆ ವಿವಿಧ ಯೋಜನೆಗಳ ಮೂಲಕ ಸಂತಸದ ಸುದ್ದಿ ನೀಡಲಿದ್ದಾರೆ. ಏಕೆಂದರೆ ಚುನಾವಣೆ ಮೊದಲು ಬಜೆಟ್ ಬರುತ್ತಿದ್ದರಿಂದ ರೈತರಿಗೆ ಉಪಯೋಗವಾಗುವ ಯೋಜನೆಗಳಿಗೆ ಹೆಚ್ಚು ಒತ್ತು ಕೊಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.