ಗೃಹಲಕ್ಷ್ಮೀ ಯೋಜನೆಯ ಹಣ ಜಮೆ: ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

Written by Ramlinganna

Updated on:

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳಾ ಫಲಾನುಭವಿಗಳ ಖಾತೆಗೆ Gruhalakshmi scheme 4th installment ಬಿಡುಗಡೆಯಾಗಿದೆ. ಯಾರು ಯಾರಿಗೆ ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ತಿಂಗಳೇ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲಿದೆ ಎನ್ನಲಾಗುತ್ತಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ತಡವಾಯಿತು. ಕೊನೆಗೂ ರಾಜ್ಯದ ಕೆಲವು ಜಿಲ್ಲೆಗಳ ಫಲಾನುಭವಿಗಳ ಖಾತೆಗೆ 4ನೇ ಕಂತಿನ ಹಣ ಜಮೆಯಾಗಿದ್ದರಿಂದ ಫಲಾನಭವಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಯಾವ ಯಾವ ಫಲಾನುಭವಿಗಳಿಗೆ 4ನೇ ಕಂತಿನ ಹಣ ಜಮೆಯಾಗಿದೆ? ಯಾರಿಗೆ ಜಮೆಯಾಗಿಲ್ಲ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ

ರೇಶನ್ ಕಾರ್ಡ್ ಹಾಕಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ನಿಮಗೆ ಮಾಹಿತಿ ಕಣಜ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು.  ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎ ಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

ಗೃಹಲಕ್ಷ್ಮೀ ಯೋಜನೆಗೆ ಇರುವ ಅರ್ಹತೆಗಳು

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿಕೊಂಡವರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿದ ಮಹಿಳೆ ಅರ್ಹರಾಗಿರುತ್ತಾರೆ.

ಇದನ್ನೂ ಓದಿ :  ಆಧಾರ್ ನಂಬರ್ ಹಾಕಿ ಮೊಬೈಲ್ ನಲ್ಲಿ ಸಾಲಮನ್ನಾ ಸ್ಟೇಟಸ್ ಚೆಕ್ ಮಾಡಿ

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸುತ್ತದೆ. ಈ ಯೋಜನೆಯ  ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕಅರ್ಜಿ ಸಲ್ಲಿಸಲು ಅವಕಾಶವಿದೆ.  ಅರ್ಜಿದಾರರು ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.

ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬೇಕು. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್.ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು.

Gruhalakshmi scheme 4th installment ಜಮೆಯ ಮೆಸೆಜ್ ಬಂದಿಲ್ಲವೇ?

ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿರುವ ಕುರಿತು ನಿಮಗೆ ಅಂದರೆ ನಾಲ್ಕನೇ ಕಂತಿನ ಮೆಸೆಜ್ ಬಂದಿಲ್ಲವಾದರೆ ಇನ್ನೆರಡು ದಿನಗಳಲ್ಲಿ ಜಮೆಯಾಗುವ ಸಾಧ್ಯತೆಯಿದೆ. ಏಕೆಂದರೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಏಕಕಾಲದಲ್ಲಿ ಹಣ ಬಿಡುಗಡೆಯಾಗಿಲ್ಲ  ಹಾಗಾಗಿ ಒಂದೆರಡು ದಿನ ನೀವು ತಡೆದು ನೋಡಬಹುದು.

ಒಂದು ವೇಳೆ ನಿಮಗೆ ಕಳೆದ ಒಂದು, ಎರಡು ಹಾಗೂ ಮೂರನೇ ಕಂತು ಜಮೆಯಾಗದಿದ್ದರೆ ಕೂಡಲೇ ಆಶಾ ಕಾರ್ಯಕರ್ತೆಯರಿಗೆ ಸಂಪರ್ಕಿಸಬಹುದು. ಅಥವಾ ಅರ್ಜಿಯ ಸ್ಟೇಟಸ್ ಚೆಕ್ ಮಾಡಬಹುದು.

Leave a Comment